Skip to main content

3Kaala News

ಸುಭಾಷಿತ 

ನಾವು ಮಾಡುವ ಕೆಲಸದಲ್ಲಿ ಸಂಪೂರ್ಣ ಶ್ರದ್ಧೆ ಮತ್ತು ಭಕ್ತಿ ಇದ್ದಾಗ ಮಾತ್ರ ಯಶಸ್ಸು ಒಲಿಯುತ್ತದೆ. ಅರ್ಧಮನಸ್ಸಿನಿಂದ ಮಾಡುವ ಕೆಲಸ ಎಂದಿಗೂ ಪರಿಪೂರ್ಣ ಫಲ ನೀಡಲಾರದು.

Current Weather Card
--°C
Mysore, IN
Loading...
☁️

Live Gold Silver Fuel News Ticker
Loading live rates...

ರಂಗಭೂಮಿ ಕಲಾವಿದೆ ಇಂದಿರಾ ನಾಯರ್ ನಿಧನ

ಮೈಸೂರು: ರಂಗಭೂಮಿಯ ಹಿರಿಯ ಕಲಾವಿದೆ ಇಂದಿರಾ ನಾಯರ್ (೭೬) ಹೃದಯಾಘಾತದಿಂದ ಶುಕ್ರವಾರ ಮೈಸೂರಿನಲ್ಲಿ ನಿಧನರಾದರು.ಅವರಿಗೆ ಇಬ್ಬರು ಪುತ್ರರು ಇದ್ದಾರೆ.ಅವರ ದೇಹದಾನ ಶನಿವಾರ ಎಂಎAಸಿಗೆ ಹಸ್ತಾಂತರಿಸಲಾಗುವುದು. ಈಗಾಗಲೇ ಅವರ ನೇತ್ರದಾನ ನಡೆಯಿತು.ಶನಿವಾರ ಬೆಳಿಗ್ಗೆ ೧೧ ಗಂಟೆಯವರೆಗೆ ಮೈಸೂರಿನ ಬೋಗಾದಿಯ ೨ನೇ ಹಂತದ ೪ನೇ ಮುಖ್ಯರಸ್ತೆಯಲ್ಲಿರುವ ಅವರ. ಮನೆಯಲ್ಲಿ ಅಂತಿಮ ದರ್ಶನ ಪಡೆಯಬಹುದು.ವೃತ್ತಿಯಿಂದ ವಾಕ್ ಮತ್ತು ಶ್ರವಣ ತಜ್ಞರಾಗಿದ್ದ ಅವರು, ರಂಗಭೂಮಿ, ಚಲನಚಿತ್ರ ಮತ್ತು ಕಿರುಚಿತ್ರಗಳಲ್ಲಿ ನಟಿಸಿದ್ದರು.ಕಾಲೇಜು ದಿನಗಳಲ್ಲಿಯೇ ವಾಕ್ ಮತ್ತು ಶ್ರವಣ ಸಂಸ್ಥೆಯಲ್ಲಿ ಅಭಿನಯದ ಮೂಲಕ ರಂಗಪಯಣ ಆರಂಭಿಸಿದ…

Read More

ಬರಗಾಲದಿಂದ ಸಂಕಷ್ಟದಲ್ಲಿರುವ ರೈತರಿಗೆ ಸಾಲ ಮರುಪಾವತಿಸುವಂತೆ ಒತ್ತಡ ಹೇರಿ ಕಿರುಕುಳ ಕೊಡಬೇಡಿ; ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ

ಮೈಸೂರು: ರಾಜ್ಯದಲ್ಲಿ ಬಳೆ ಬಾರದೆ ಬರಗಾಲ ಆವರಿಸಿದೆ. ಮೈಸೂರು ಜಿಲ್ಲೆಯ ೮ ತಾಲೂಕುಗಳನ್ನು ಬರಗಾಲ ಪೀಡಿತ ಪ್ರದೇಶಗಳೆಂದು ರಾಜ್ಯ ಸರ್ಕಾರ ಘೋಷಿಸಿದೆ. ರೈತರು ಸಂಕಷ್ಟದಲ್ಲಿದ್ದಾರೆ. ಹಾಗಾಗಿ ಸಾಲ ಮರುಪಾವತಿಸುವಂತೆ ರೈತರಿಗೆ ಕಿರುಕುಳ ಕೊಡಬಾರದು, ಒತ್ತಡ ಹೇರಬಾರದು’ ಎಂದು ಕೇಂದ್ರ ಉಕ್ಕು ಮತ್ತು ಬೃಹತ್ ಕೈಗಾರಿಕಾ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರು ಬ್ಯಾಂಕಿನ ಅಧಿಕಾರಿಗಳಿಗೆ ಸೂಚಿಸಿದರು.ಶುಕ್ರವಾರ ಮೈಸೂರಿನ ಜಿ.ಪಂ. ಸಭಾಂಗಣದಲ್ಲಿ ನಡೆದ ಜಿಲ್ಲಾ ಅಭಿವೃದ್ಧಿ ಸಮನ್ವಯ ಹಾಗೂ ಉಸ್ತುವಾರಿ ಸಮಿತಿ (ದಿಶಾ) ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು,…

Read More

ಅಂಬಾವಿಲಾಸ ಅರಮನೆ ಆವರಣದಲ್ಲಿ ವಾಸ್ತವ್ಯ ಹೂಡಿದ ಮೊದಲ ಹಂತದ ಗಜಪಡೆಅರಮನೆಗೆ ಆಗಮಿಸಿದ ಗಜಪಡೆಗೆ ಸಾಂಪ್ರದಾಯಕ ಪೂಜೆ ಸಲ್ಲಿಸುವ ಮೂಲಕ ಸ್ವಾಗತ*ವಾದ್ಯದ ಸದ್ದಿಗೆ ಬೆದರಿ ಹಿಂದೆ ಹೆಜ್ಜೆ ಹಾಕಿದ ಶ್ರೀರಾಮಮೈಸೂರು: ಈ ಬಾರಿ ಅದ್ಧೂರಿಯಾಗಿ ನಡೆಯಲಿರುವ ವಿಶ್ವ ಪ್ರಸಿದ್ದ ನಾಡಹಬ್ಬ ಮೈಸೂರು ದಸರಾ ಮಹೋತ್ಸದಲ್ಲಿ ಪಾಲ್ಗೊಳ್ಳಲೆಂದು ಕಾಡಿನಿಂದ ಅರಮನೆ ನಗರಿ ಮೈಸ್ರರಿಗೆ ಆಗಮಿಸಿರುವ ಮೊದಲ ಹಂತದ ಗಜಪಡೆ ಶುಕ್ರವಾರ ವಿಶ್ವಪ್ರಸಿದ್ಧ ಅಂಬಾವಿಲಾಸ ಅರಮನೆಯನ್ನು ಪ್ರವೇಶಿಸಿ ವಾಸ್ತವ್ಯ ಹೂಡಿದವು.ಜಿಲ್ಲೆಯ ಹುಣಸೂರು ತಾಲೂಕಿನ ನಾಗರಹೊಳೆ ರಾಷ್ಟಿçÃಯ ಉದ್ಯಾನವನ ವೀರನಹೊಸಹಳ್ಳಿಯಿಂದ ಗಜಪಯಣದ ಮೂಲಕ…

Read More

ಮುಡಾದಿಂದ ೨೦೧೯ ರಿಂದ ೨೦೨೩ರವರೆಗೆ ಶೇ ೫೦:೫೦ ಅನುಪಾತದಡಿ ಹಂಚಿಕೆಯಾಗಿರುವ ಎಲ್ಲಾ ನಿವೇಶನಗಳ ಹಂಚಿಕೆ ರದ್ದು; ಸಚಿವ ಡಾ.ಯತೀಂದ್ರ ಸಿದ್ದರಾಮಯ್ಯ

ಮೈಸೂರು: ಈ ಹಿಂದಿನ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ)ದಿಂದ ೫೦:೫೦ ಅನುಪಾತದಡಿಯಲ್ಲಿ೨೦೧೯ ರಿಂದ ೨೦೨೩ರವರೆಗೆ ಹಂಚಿಕೆಯಾಗಿರುವ ಒಟ್ಟು ೧೦೦೦ಕ್ಕೂ ಹೆಚ್ಚು ನಿವೇಶನಗಳನ್ನು ರದ್ದು ಮಾಡಲಾಗಿದೆ ಎಂದು ನಗರಾಭಿವೃದ್ಧಿ ಇಲಾಖೆ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಡಾ.ಯತೀಂದ್ರ ಸಿದ್ದರಾಮಯ್ಯ ತಿಳಿಸಿದರು.ಶುಕ್ರವಾರ ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಡಾದಿಂದ ಹಂಚಿಕೆ ಮಾಡಲಾಗಿದ್ದ೫೦:೫೦ ಅನುಪಾದ ಸೈಟ್‌ಗಳಲ್ಲಿ ಈಗಾಗಲೇ ಮನೆ ಕಟ್ಟಿರುವವರ ಪಟ್ಟಿಯನ್ನು ತರಿಸುತ್ತಿದ್ದೇನೆ. ಸದ್ಯಕ್ಕೆ ಎಲ್ಲಾ ನಿವೇಶನಗಳು ರದ್ದಾಗಿವೆ. ಈ ಸಂಬAಧ ಸಂಪೂರ್ಣ ಆದೇಶವನ್ನು ನಾವು ಪ್ರಾಧಿಕಾರಕ್ಕೆ ಕಳುಹಿಸಿದ್ದೇವೆ. ಆದೇಶ…

Read More

ವಿಜಯ ವಿಠ್ಠಲ ಪದವಿಪೂರ್ವ ಕಾಲೇಜಿನಲ್ಲಿ ಸಂಭ್ರಮದಿ0ದ ನಡೆದ ಸಂಸ್ಕೃತೋತ್ಸವ

ಮೈಸೂರು; ನಗರದ ಸರಸ್ವತಿಪುರಂನ ವಿಜಯವಿಠ್ಠಲ ಪದವಿಪೂರ್ವ ಕಾಲೇಜಿನಲ್ಲಿ ಸಂಸ್ಕೃತೋತ್ಸವವನ್ನು ಸಂಭ್ರಮದಿAದ ಆಚರಿಸಲಾಯಿತು. ಕಾಲೇಜಿನ ಪ್ರಾಂಶುಪಾಲರಾದ ಹೆಚ್. ಸತ್ಯಪ್ರಸಾದ್‌ರವರು ದೀಪ ಬೆಳಗಿಸುವುದರ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿದರು.ಬಳಿಕ ಮಾತನಾಡಿ, ಸಂಸ್ಕೃತವು ಅತ್ಯಂತ ಪುರಾತನ ಭಾಷೆಯಾಗಿದ್ದು ಬಹು ಭಾಷೆಗಳ ತಾಯಿಯಾಗಿದೆ. ಸಂಸ್ಕೃತ ಕೇವಲ ಒಂದು ಭಾಷೆಯಲ್ಲ, ಅದು ಭಾರತದ ಜ್ಞಾನ, ಸಂಸ್ಕೃತಿ ಮತ್ತು ಪರಂಪರೆಯ ಪ್ರತಿಬಿಂಬ ಎಂದು ತಿಳಿಸಿದರು.ಸಾವಿರಾರು ವರ್ಷಗಳ ಭಾರತೀಯ ಚಿಂತನೆ, ಸಾಹಿತ್ಯ, ವಿಜ್ಞಾನ, ಗಣಿತ, ಆಯುರ್ವೇದ, ವ್ಯಾಕರಣ ಸಂಸ್ಕೃತದ ಮೂಲಕ ನಮಗೆ ದೊರೆತಿದೆ. ವೇದಗಳು, ಉಪನಿಷತ್ತು, ರಾಮಾಯಣ, ಮಹಾಭಾರತ,…

Read More

ಬಿಜೆಪಿ ಮಹಿಳಾ ಮೋರ್ಚಾ ವತಿಯಿಂದ ರಕ್ಷಾ ಬಂಧನ ಆಚರಣೆ

ಮೈಸೂರು ; ಬಿಜೆಪಿ ಮಹಿಳಾ ಮೋರ್ಚಾ ವತಿಯಿಂದ ಶುಕ್ರವಾರ ಮೈಸೂರಿನ ಹೂಟಗಳ್ಳಿ ಕೆಎಚ್‌ಬಿ ಕಾಲೋನಿಯ ಸುದರ್ಶನ ವಿದ್ಯಾ ಸಂಸ್ಥೆಯಲ್ಲಿ ರಕ್ಷಾ ಬಂಧನವನ್ನು ಶಿಕ್ಷಕರಿಗೆ ರಕ್ಷೆ ಕಟ್ಟುವ ಮೂಲಕ ಸಡಗರಿಂದ ಆಚರಿಸಲಾಯಿತು..ಈ ಸಂದರ್ಭದಲ್ಲಿ ಮಾತನಾಡಿದ ಬಿಜೆಪಿಯ ಮೈಸೂರು ನಗರ ಮಹಿಳಾ ಮೋರ್ಚಾ ಅಧ್ಯಕ್ಷೆ ಮೋನಿಕಾ ಎಂ , ರಕ್ಷಾ ಬಂಧನವು ಸಹೋದರ-ಸಹೋದರಿಯರ ನಡುವಿನ ಪ್ರೀತಿ, ನಂಬಿಕೆ ಮತ್ತು ರಕ್ಷಣೆಯ ಬಾಂಧವ್ಯವನ್ನು ಸಾರುವ ಪವಿತ್ರ ಹಬ್ಬವಾಗಿದೆ. ಈ ದಿನ ಸಹೋದರಿ ಸಹೋದರನ ಕೈಗೆ ರಾಖಿ ಕಟ್ಟಿ ಅವನ ಸುಖ, ಶಾಂತಿ…

Read More

ರಾಜ್ಯ ಸರ್ಕಾರ ೨ ಲಕ್ಷಕ್ಕೂ ಅಧಿಕ ಸರ್ಕಾರಿ ಹುದ್ದೆಗಳನ್ನು ಭರ್ತಿಮಾಡದೆ ಉದ್ಯೋಗಾಕಾಂಕ್ಷಿಗಳ ಬದುಕನ್ನು ಅತಂತ್ರಗೊಳಿಸಿದೆ; ಬಿಜೆಪಿ ರಾಜ್ಯ ವಕ್ತಾರ ಅಶೋಕ್‌ಗೌಡ

ಮೈಸೂರು: ರಾಜ್ಯ ಸರ್ಕಾರದಲ್ಲಿ ಎರಡು ಲಕ್ಷಕ್ಕೂ ಅಧಿಕ ಸರ್ಕಾರಿ ಹುದ್ದೆಗಳು ಖಾಲಿಯಿದ್ದರೂ, ರಾಜ್ಯ ಸರ್ಕಾರ ಅವುಗಳನ್ನು ಭರ್ತಿ ಮಾಡದೆ ಲಕ್ಷಾಂತರ ಉದ್ಯೋಗಾಕಾಂಕ್ಷಿಗಳ ಬದುಕನ್ನು ಅತಂತ್ರಗೊಳಿಸಿದೆ ಎಂದು ಬಿಜೆಪಿ ರಾಜ್ಯ ವಕ್ತಾರ ಅಶೋಕ್‌ಗೌಡ ಆರೋಪಿಸಿದರು.ಶುಕ್ರವಾರ ನಗರದ ಚಾಮರಾಜಪುರಂನಲ್ಲಿರುವ ಬಿಜೆಪಿ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೆಎಎಸ್ ಪ್ರೊಬೇಷನರ್ಸ್ ಪರೀಕ್ಷೆಯಲ್ಲಿನ ಅನುವಾದ ದೋಷ, ಕೆಪಿಎಸ್‌ಸಿ ಕೈಗಾರಿಕಾ ವಿಸ್ತರಣಾಧಿಕಾರಿ ನೇಮಕಾತಿಯಲ್ಲಿ ಅಧ್ಯಕ್ಷರ ಕುಟುಂಬದ ಅಕ್ರಮ ಆಯ್ಕೆ, ಪಶುವೈದ್ಯಾಧಿಕಾರಿಗಳ ನೇಮಕಾತಿಯಲ್ಲಿ ೮೦ ಲಕ್ಷ ಲಂಚ ಹಾಗೂ ಕೆಇಎ ಪರೀಕ್ಷೆಗಳಲ್ಲಿ ಬ್ಲೂಟೂತ್ ನಕಲು…

Read More