Skip to main content

3Kaala News

ಸುಭಾಷಿತ 

ಪಕ್ಕದಲ್ಲಿರುವವನ ತಟ್ಟೆಯಲ್ಲಿ ಏನಿದೆ ಅಂತ ಯಾವತ್ತೂ ಇಣುಕಿ ನೋಡಬೇಡ. ಕಾರಣ ಅಲ್ಲಿ ಜಾಸ್ತಿಯಿದ್ದರೆ, ನಿನಗೆ ಸಂಕಟವಾಗುತ್ತದೆ.ಅಲ್ಲಿ ಕಡಿಮೆ ಇದ್ದರೆ, ನಿನಗೆ ಅಹಂಕಾರ ಬರುತ್ತದೆ.ಎರಡೂ ಒಳ್ಳೆಯದಲ್ಲ.ನಮ್ಮ ತಟ್ಟೆಯನ್ನು ನಾವು ನೋಡಿಕೊಂಡಿದ್ದರೆ, ಸಿಗುವ ಸಂತೋಷವೇ ಬೇರೆ

Current Weather Card
--°C
Mysore, IN
Loading...
☁️

Live Gold Silver Fuel News Ticker
Loading live rates...

ಮುಡಾದಿಂದ ೨೦೧೯ ರಿಂದ ೨೦೨೩ರವರೆಗೆ ಶೇ ೫೦:೫೦ ಅನುಪಾತದಡಿ ಹಂಚಿಕೆಯಾಗಿರುವ ಎಲ್ಲಾ ನಿವೇಶನಗಳ ಹಂಚಿಕೆ ರದ್ದು; ಸಚಿವ ಡಾ.ಯತೀಂದ್ರ ಸಿದ್ದರಾಮಯ್ಯ


ಮೈಸೂರು: ಈ ಹಿಂದಿನ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ)ದಿಂದ ೫೦:೫೦ ಅನುಪಾತದಡಿಯಲ್ಲಿ
೨೦೧೯ ರಿಂದ ೨೦೨೩ರವರೆಗೆ ಹಂಚಿಕೆಯಾಗಿರುವ ಒಟ್ಟು ೧೦೦೦ಕ್ಕೂ ಹೆಚ್ಚು ನಿವೇಶನಗಳನ್ನು ರದ್ದು ಮಾಡಲಾಗಿದೆ ಎಂದು ನಗರಾಭಿವೃದ್ಧಿ ಇಲಾಖೆ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಡಾ.ಯತೀಂದ್ರ ಸಿದ್ದರಾಮಯ್ಯ ತಿಳಿಸಿದರು.
ಶುಕ್ರವಾರ ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಡಾದಿಂದ ಹಂಚಿಕೆ ಮಾಡಲಾಗಿದ್ದ
೫೦:೫೦ ಅನುಪಾದ ಸೈಟ್‌ಗಳಲ್ಲಿ ಈಗಾಗಲೇ ಮನೆ ಕಟ್ಟಿರುವವರ ಪಟ್ಟಿಯನ್ನು ತರಿಸುತ್ತಿದ್ದೇನೆ. ಸದ್ಯಕ್ಕೆ ಎಲ್ಲಾ ನಿವೇಶನಗಳು ರದ್ದಾಗಿವೆ. ಈ ಸಂಬAಧ ಸಂಪೂರ್ಣ ಆದೇಶವನ್ನು ನಾವು ಪ್ರಾಧಿಕಾರಕ್ಕೆ ಕಳುಹಿಸಿದ್ದೇವೆ. ಆದೇಶ ಜಾರಿ ಮಾಡುವ ಕೆಲಸದಲ್ಲಿ ಅಧಿಕಾರಿಗಳು ತೊಡಗಿದ್ದಾರೆ,೨೦೧೮ಕ್ಕಿಂತ ಹಿಂದೆ ಸೈಟ್ ಪಡೆದವರ ಬಗ್ಗೆಯೂ ಪರಿಶೀಲನೆ ನಡೆದಿದೆ. ಅಲ್ಲಿಯೂ ಅಕ್ರಮಗಳು ನಡೆದಿದ್ದರೆ ಅವುಗಳನ್ನೂ ರದ್ದು ಮಾಡುತ್ತೇವೆ ಎಂದು ತಿಳಿಸಿದರು. ರಸ್ತೆಗೆ ತಮ್ಮ ಜಮೀನು ಕೊಟ್ಟು ಪರಿಹಾರ ಪಡೆದವರೂ ಕೂಡ ನಿವೇಶನ ಪಡೆದಿದ್ದಾರೆ. ಸಾಕಷ್ಟು ಅಕ್ರಮ ನಡೆದಿರುವ ಹಿನ್ನೆಲೆಯಲ್ಲಿ ಎಲ್ಲವನ್ನೂ ರದ್ದು ಮಾಡಲಾಗಿದೆ ಎಂದು ಸ್ಪಷ್ಟಪಡಿಸಿದರು.
ಕಾನೂನಾತ್ಮಕ ಹೋರಾಟದಲ್ಲಿರುವ ಸೈಟ್‌ಗಳ ಬಗ್ಗೆ ಮುಂದಿನ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗುವುದು ಎಂದು ಹೇಳಿದರು.
ವಾಲ್ಮೀಕಿ ನಿಗಮದಲ್ಲಿ ನಡೆದಿರುವ ಹಗರಣದಲ್ಲಿ ಸಚಿವ ನಾಗೇಂದ್ರ ಅವರು ಯಾವುದೇ ತಪುö್ಪ ಮಾಡಿಲ್ಲ .
ಒಂದು ವೇಳೆ ತಪುö್ಪ ಮಾಡಿದ್ದರೆ ಬಿಜೆಪಿಯವರು ಸದನದಲ್ಲಿ ಚರ್ಚೆಗೆ ಬರಬೇಕಿತ್ತು. ಆದರೆ ಬಿಜೆಪಿಯವರು ಗದ್ದಲ ಮಾಡಿ ಅಧಿವೇಶನವನ್ನೇ ಹಾಳು ಮಾಡಿದರು ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಸಚಿವ ನಾಗೇಂದ್ರ ಅವರ ವಿಚಾರದಲ್ಲಿ ಮುಖ್ಯಮಂತ್ರಿ ಹಾಗೂ ಹೈಕಮಾಂಡ್ ತೀರ್ಮಾನ ತೆಗೆದುಕೊಳ್ಳುತ್ತದೆ ಎಂದು ಹೇಳಿದರು.