Skip to main content

3Kaala News

ಸುಭಾಷಿತ 

ನಾವು ಏನು ಹೇಳುತ್ತೇವೆ ಅನ್ನೋದಕ್ಕಿಂತ, ಹೇಗೆ ಹೇಳುತ್ತೇವೆ ಅನ್ನುವುದೇ ಬದುಕಿನ ಗುಟ್ಟು.
ಮಾತಿನ ಶೈಲಿ ಹೃದಯ ಗೆಲ್ಲಬಹುದು, ಸಮಸ್ಯೆ ಪರಿಹರಿಸಬಹುದು, ಅಥವಾ ಸಂಬಂಧ ಉಳಿಸಬಹುದು.
ಮಾತು ಮನುಷ್ಯನ ಶಕ್ತಿ — ಅದನ್ನು ಜಾಣ್ಮೆಯಿಂದ ಬಳಕೆ ಮಾಡಿದರೆ ಬದುಕು ಸುಲಭವಾಗುತ್ತದೆ

 

Current Weather Card
--°C
Mysore, IN
Loading...
☁️

Live Gold Silver Fuel News Ticker
Loading live rates...

ಶಾಖಾ ಗ್ರಂಥಾಲಯ ಆಗಸ್ಟ್ 31 ರಂದು ಸಾರ್ವಜನಿಕ ಸೇವೆಗೆ ಲಭ್ಯಮೈಸೂರು: ಗ್ರಂಥಾಲಯ ಪಿತಾಮಹ, ಪದ್ಮಶ್ರೀ ಡಾ. ಎಸ್.ಆರ್. ರಂಗನಾಥನ್ ಅವರ ಜನ್ಮದಿನದ ಅಂಗವಾಗಿ ಆಯೋಜಿಸಲಾಗಿರುವ ಕಾರ್ಯಕ್ರಮದ ಹಿನ್ನೆಲೆಯಲ್ಲಿ, ಆಗಸ್ಟ್ 31 ರಂದು ಮೈಸೂರು ನಗರ ಕೇಂದ್ರ ಗ್ರಂಥಾಲಯದ ವ್ಯಾಪ್ತಿಯ ಪೀಪಲ್ಸ್ ಪಾರ್ಕ್ ಶಾಖಾ ಗ್ರಂಥಾಲಯದಲ್ಲಿ ಮಾತ್ರ ಬೆಳಿಗ್ಗೆ 10 ರಿಂದ ಸಂಜೆ 5.30 ಗಂಟೆಯವರೆಗೆ ಸಾರ್ವಜನಿಕ ಓದುಗರ ಸೇವೆಗೆ ತೆರೆದಿರಲಿದೆ.ಸೋಮವಾರ ವಾರದ ರಜಾ ದಿನವಾಗಿದ್ದರೂ, ಇಲಾಖಾ ಆಯುಕ್ತರ ನೂತನ ಆದೇಶದನ್ವಯ ಪೀಪಲ್ಸ್ ಪಾರ್ಕ್ ಶಾಖಾ ಗ್ರಂಥಾಲಯದಲ್ಲಿ ಮಾತ್ರ…

Read More

ಡಿಜಿಟಲ್ ವೇದಿಕೆಯಿಂದ ಕೃಷಿ ವಹಿವಾಟಿಗೆ ವೇಗ; ಮಮತಾ ಹೆಚ್.ಎನ್.

ಮೈಸೂರು: ಸ್ಥಳೀಯ ಮಾರುಕಟ್ಟೆಯಲ್ಲಿ ರೈತ ಉತ್ಪಾದಕ ಸಂಸ್ಥೆಗಳು ಬೇಡಿಕೆಗೆ ಅನುಗುಣವಾಗಿ ತಮ್ಮ ಉತ್ಪನ್ನಗಳನ್ನು ಯುಎಂಪಿ- ಆರ್‌ಇಎಂಎಸ್ ಡಿಜಿಟಲ್ ವೇದಿಕೆಯಡಿ ಸ್ಪರ್ಧಾತ್ಮಕ ರೀತಿಯಲ್ಲಿ ಮಾರಾಟ ಮಾಡುವುದರಿಂದ ಕೃಷಿ ವಹಿವಾಟಿಗೆ ಹೆಚ್ಚಿನ ವೇಗ ನೀಡಲು ಸಾಧ್ಯ ಎಂದು ಜಿಲ್ಲಾ ಕೃಷಿ ತರಬೇತಿ ಕೇಂದ್ರದ ಉಪ ಕೃಷಿ ನಿರ್ದೇಶಕಿ ಮಮತಾ ಹೆಚ್.ಎನ್. ತಿಳಿಸಿದರು.ಮೈಸೂರು ತಾಲೂಕಿನ ನಾಗನಹಳ್ಳಿಯ ಜಿಲ್ಲಾ ಕೃಷಿ ತರಬೇತಿ ಕೇಂದ್ರದಲ್ಲಿ ಜಲಾನಯನ ಅಭಿವೃದ್ಧಿ ಹಾಗೂ ಕೃಷಿ ಇಲಾಖೆ, ರೈತ ಉತ್ಪಾದಕ ಸಂಸ್ಥೆಗಳ ಉತ್ಕೃಷ್ಟ ಕೇಂದ್ರ ಬೆಂಗಳೂರು, ಬಾಗಲಕೋಟೆಯ ತೋಟಗಾರಿಕೆ ವಿಜ್ಞಾನಗಳ…

Read More

ದೈಹಿಕ ಮತ್ತು ಮಾನಸಿಕ ಆರೋಗ್ಯಕ್ಕೆ ಕ್ರೀಡೆ ಸಹಕಾರಿ: ನಿತೀನ್ ವೆಂಕಟೇಶ್

ಪಟ್ಟಣದ ಜೂನಿಯರ್ ಕಾಲೇಜು ಮೈದಾನದಲ್ಲಿ ವಲಯ ಮಟ್ಟದ ಕ್ರೀಡಾಕೂಟಕ್ಕೆ ಚಾಲನೆ ಪಿರಿಯಾಪಟ್ಟಣ: ದೈಹಿಕ ಮತ್ತು ಮಾನಸಿಕ ಆರೋಗ್ಯಕ್ಕಾಗಿ ವಿದ್ಯಾರ್ಥಿಗಳು ಕ್ರೀಡೆಗಳಲ್ಲಿ ಪಾಲ್ಗೊಳ್ಳುವುದು ಅತ್ಯವಶ್ಯಕ ಎಂದು ತಾಲ್ಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ನಿತಿನ್ ವೆಂಕಟೇಶ್ ತಿಳಿಸಿದರು. ಪಟ್ಟಣದ ಗೋಣಿಕೊಪ್ಪಲು ರಸ್ತೆಯ ಸರ್ಕಾರಿ ಜೂನಿಯರ್ ಕಾಲೇಜು ಮೈದಾನದಲ್ಲಿ ಧರ್ಮ ಪ್ರವರ್ತಕ ಬೆಂಗಳೂರು ಸುಬ್ಬಣ್ಣನವರ ಸರ್ಕಾರಿ ಪದವಿ ಪೂರ್ವ ಕಾಲೇಜಿನ ನೇತೃತ್ವದಲ್ಲಿ ಆಯೋಜಿಸಿದ್ದ ಕಸಬಾ ವಲಯ ಮಟ್ಟದ ಪ್ರೌಢಶಾಲಾ ಕ್ರೀಡಾಕೂಟಕ್ಕೆ ಚಾಲನೆ ನೀಡಿ ಮಾತನಾಡಿದ ಅವರು ಮಕ್ಕಳ ಆಸಕ್ತಿಯನ್ನು ಗುರುತಿಸಿ…

Read More

ಕಲ್ಪವೃಕ್ಷಕ್ಷೇತ್ರದಲ್ಲಿ 355ನೇ ಶ್ರೀರಾಘವೇಂದ್ರಸ್ವಾಮಿಗಳ ಪೂರ್ವಾರಾಧನೆ ಮಹೋತ್ಸವ

ಮೈಸೂರು; ಇಲ್ಲಿನ ಎಂ.ಬಿ.ಹಳ್ಳಿ ರಸ್ತೆ, ನಿರ್ಮಾಣ್ ನಗರ, ಜಂತಗಳ್ಳಿಯಲ್ಲಿರುವ ಕಲ್ಪವೃಕ್ಷಕ್ಷೇತ್ರ ಶ್ರೀರಾಘವೇಂದ್ರಸ್ವಾಮಿ ಮಠದಲ್ಲಿ 355ನೇ ರಾಯರ ಪೂರ್ವಾರಾಧನೆ ಮಹೋತ್ಸವ ಸಂಭ್ರಮದಿAದ ನಡೆಯಿತು.ಪೂರ್ವಾರಾಧನೆ ಅಂಗವಾಗಿ ಬೆಳಿಗ್ಗೆ 7 ಕ್ಕೆ ಪಂಚಾಮೃತಅಭಿಷೇಕ, ಹೂವಿನ ಅಲಂಕಾರ, ಗೋವುಗಳಿಗೆ ಮುತ್ತೆöÊದೆಯರಿಂದ ಪೂಜೆ, ಧಾನ್ಯಗಳ ಹಾಗೂ ಫಲಗಳಿಂದ ಅಲಂಕಾರ, ಮಧ್ಯಾಹ್ನ 12 ಕ್ಕೆ ಹಸ್ತೋದಕ, ಮಹಾಮಂಗಳಾರತಿ, ಭಕ್ತಾಧಿಗಳಿಗೆ ಪ್ರಸಾದ ವಿನಿಯೋಗ ನೆರವೇರಿತು.

Read More

ಖಾಸಗಿ ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ಬೇಸತ್ತ ಯುವಕ ಆತ್ಮಹತ್ಯೆ

ಹುಣಸೂರು ; ಖಾಸಗಿ ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ಬೇಸತ್ತ ಯುವಕನೊಬ್ಬ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹುಣಸೂರು ತಾಲೂಕಿನ ನಂಜಾಪುರ ಗ್ರಾಮದಲ್ಲಿ ನಡೆದಿದೆ.ಗ್ರಾಮದ ನಿವಾಸಿ ವಸಂತಕುಮಾರ್ ಎಂಬುವರ ಪುತ್ರ ರಂಜಿತ್ (32) ಮೃತರು. ಇವರಿಗೆ ತಂದೆ, ಪತ್ನಿ, ಇಬ್ಬರು ಪುತ್ರಿಯರಿದ್ದಾರೆ.ರಂಜಿತ್ ಕೆ.ಆರ್.ನಗರದಲ್ಲಿ ಶಾಖೆ ಹೊಂದಿರುವ ಖಾಸಗಿ ಮೈಕ್ರೋ ಫೈನಾನ್ ನಲ್ಲಿ ಮನೆ ನಿರ್ಮಾಣಕ್ಕಾಗಿ 12 ಲಕ್ಷ ರೂ. ಸಾಲ ಪಡೆದಿದ್ದರು. ಸುಸ್ತಿಯಾಗಿದ್ದಾರೆ ಎಂದು ಎರಡು ಬಾರಿ ಮೈಕ್ರೋ ಫೈನಾನ್ ನವರು ಮನೆಗೆ ಬೀಗ ಜಡಿದಿದ್ದರು. ಕೆಲ…

Read More

ಸಚಿವ ಬಿ. ನಾಗೇಂದ್ರ ರಾಜೀನಾಮೆ ಬಿಜೆಪಿ ಹೋರಾಟಕ್ಕೆ ಸಂದ ಜಯ;ಡಾ. ಈ.ಸಿ. ನಿಂಗರಾಜ್ ಗೌಡ

*187 ಕೋಟಿ ಅವ್ಯವಹಾರದಲ್ಲಿ ಭಾಗಿಯಾದ ಎಲ್ಲರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು: ಡಾ. ಈ.ಸಿ. ನಿಂಗರಾಜ್ ಗೌಡಮೈಸೂರು: ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣದ ಅವ್ಯವಹಾರಕ್ಕೆ ಸಂಬAಧಿಸಿದAತೆ ಸಚಿವ ಬಿ. ನಾಗೇಂದ್ರ ಅವರು ರಾಜೀನಾಮೆ ನೀಡಿರುವುದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರ ನೇತೃತ್ವದಲ್ಲಿ ಬಿಜೆಪಿ ನಡೆಸಿದ ನಿರಂತರ ಹೋರಾಟಕ್ಕೆ ಸಂದ ಜಯವಾಗಿದೆ ಎಂದು ಬಿಜೆಪಿ ಮೈಸೂರು ವಿಭಾಗದ ಸಹ ಪ್ರಭಾರಿ ಡಾ. ಈ.ಸಿ. ನಿಂಗರಾಜ್ ಗೌಡ ಹೇಳಿದ್ದಾರೆ.ಈ ಕುರಿತು ಪ್ರತಿಕ್ರಿಯಿಸಿರುವ ಅವರು, ವಾಲ್ಮೀಕಿ ನಿಗಮದ ಹಣದ ಅವ್ಯವಹಾರ…

Read More

*ಸರಳ ದಸರಾ ಮಾಡುವುದಿಲ್ಲ. ಕಂಬಳ ಮಾಡುವ ಬಗ್ಗೆ ನಾನು ಯಾವುದೇ ಪ್ರತಿಷ್ಠೆಯನ್ನು ತೆಗೆದುಕೊಂಡಿಲ್ಲ;ಸಿಎಂ ಡಿ.ಕೆ.ಶಿವಕುಮಾರ್

ದಸರಾ ಉದ್ಘಾಟಕರ ಆಯ್ಕೆಯನ್ನು ನಾನೇ ಮಾಡುತ್ತೇನೆ; ಮೈಸೂರು; ರಾಜ್ಯವನ್ನು ಆವರಿಸಿರುವ ಬರಗಾಲದ ನೆಪದಲ್ಲಿ ಸರಳವಾಗಿ ನಾಡ ಹಬ್ಬ ಮೈಸೂರು ದಸರಾ ಮಾಡುವುದಿಲ್ಲ. ಆದರೆ, ವಿಭಿನ್ನವಾಗಿ ಈ ಬಾರಿ ದಸರಾ ಮಾಡುತ್ತೇವೆ. ದಸರಾದ ಮೆರವಣಿಗೆಯ ರೂಪವನ್ನೇ ಬದಲಾಯಿಸುತ್ತೇನೆ ಎಂದು ಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು.ಶನಿವಾರ ಮೈಸೂರಿನ ಓವಲ್ ಗ್ರೌಂಡ್‌ನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿಶ್ವ ಪ್ರಸಿದ್ಧ ನಾಡ ಹಬ್ಬ ಮೈಸೂರು ದಸರಾದ ಕೊನೆ ದಿನ ನಡೆಯಲಿರುವ ಐತಿಹಾಸಿಕ ಜಂಬೂ ಸವಾರಿ ಮೆರವಣಿಗೆಯಲ್ಲಿ ಮಿಲಿಟರಿ, ಸೇನಾ ಪಡೆಗಳು ಇರಲಿವೆ. ಇದರ…

Read More

ನಾಡ ಹಬ್ಬ ಮೈಸೂರು ದಸರಾಗೆ ಹೊಸ ಮೆರಗು ನೀಡಲು ಯೋಜನೆ: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್

ಮೈಸೂರು; ವಿಶ್ವಪ್ರಸಿದ್ಧ ಮೈಸೂರು ದಸರಾ ಮಹೋತ್ಸವಕ್ಕೆ ನೂತನ ಮೆರುಗು ನೀಡಲು ಯೋಜನೆ ರೂಪಿಸಲಾಗಿದೆ. ಈ ಬಾರಿ ಮಿಲಿಟರಿ, ಏರ್‌ಫೋರ್ಸ್ ಹಾಗೂ ರಕ್ಷಣಾ ಪಡೆಗಳ ಪರೇಡ್ ಸೇರ್ಪಡೆಗೊಳಿಸಲು ಮನವಿ ಮಾಡಲಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿಳಿಸಿದರು.ಶನಿವಾರ ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದಸರಾ ಮಹೋತ್ಸವದಲ್ಲಿ ಚಲನಚಿತ್ರ ರಂಗದ ಕಲಾವಿದರು ಮತ್ತು ವಿವಿಧ ಸಾಂಸ್ಕöÈತಿಕ ತಂಡಗಳು ಒಂದೇ ಸೂರಿನಡಿ ಪಾಲ್ಗೊಳ್ಳುವಂತೆ ಮಾಡಲು ಸೂಚಿಸಲಾಗಿದೆ ಎಂದು ತಿಳಿಸಿದರು.ಬೆಂಗಳೂರು ನಗರದಲ್ಲಿ ಹೆಚ್ಚುತ್ತಿರುವ ಜನಸಾಂದ್ರತೆ, ವಾಹನ ದಟ್ಟಣೆ ಹಾಗೂ ಮೂಲಸೌಕರ್ಯಗಳ ಮೇಲಿನ ಒತ್ತಡವನ್ನು ತಗ್ಗಿಸುವ…

Read More