Skip to main content

3Kaala News

ಸುಭಾಷಿತ 

ನಾವು ಏನು ಹೇಳುತ್ತೇವೆ ಅನ್ನೋದಕ್ಕಿಂತ, ಹೇಗೆ ಹೇಳುತ್ತೇವೆ ಅನ್ನುವುದೇ ಬದುಕಿನ ಗುಟ್ಟು.
ಮಾತಿನ ಶೈಲಿ ಹೃದಯ ಗೆಲ್ಲಬಹುದು, ಸಮಸ್ಯೆ ಪರಿಹರಿಸಬಹುದು, ಅಥವಾ ಸಂಬಂಧ ಉಳಿಸಬಹುದು.
ಮಾತು ಮನುಷ್ಯನ ಶಕ್ತಿ — ಅದನ್ನು ಜಾಣ್ಮೆಯಿಂದ ಬಳಕೆ ಮಾಡಿದರೆ ಬದುಕು ಸುಲಭವಾಗುತ್ತದೆ

 

Current Weather Card
--°C
Mysore, IN
Loading...
☁️

Live Gold Silver Fuel News Ticker
Loading live rates...

ನಾಡ ಹಬ್ಬ ಮೈಸೂರು ದಸರಾಗೆ ಹೊಸ ಮೆರಗು ನೀಡಲು ಯೋಜನೆ: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್


ಮೈಸೂರು; ವಿಶ್ವಪ್ರಸಿದ್ಧ ಮೈಸೂರು ದಸರಾ ಮಹೋತ್ಸವಕ್ಕೆ ನೂತನ ಮೆರುಗು ನೀಡಲು ಯೋಜನೆ ರೂಪಿಸಲಾಗಿದೆ. ಈ ಬಾರಿ ಮಿಲಿಟರಿ, ಏರ್‌ಫೋರ್ಸ್ ಹಾಗೂ ರಕ್ಷಣಾ ಪಡೆಗಳ ಪರೇಡ್ ಸೇರ್ಪಡೆಗೊಳಿಸಲು ಮನವಿ ಮಾಡಲಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿಳಿಸಿದರು.
ಶನಿವಾರ ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದಸರಾ ಮಹೋತ್ಸವದಲ್ಲಿ ಚಲನಚಿತ್ರ ರಂಗದ ಕಲಾವಿದರು ಮತ್ತು ವಿವಿಧ ಸಾಂಸ್ಕöÈತಿಕ ತಂಡಗಳು ಒಂದೇ ಸೂರಿನಡಿ ಪಾಲ್ಗೊಳ್ಳುವಂತೆ ಮಾಡಲು ಸೂಚಿಸಲಾಗಿದೆ ಎಂದು ತಿಳಿಸಿದರು.
ಬೆಂಗಳೂರು ನಗರದಲ್ಲಿ ಹೆಚ್ಚುತ್ತಿರುವ ಜನಸಾಂದ್ರತೆ, ವಾಹನ ದಟ್ಟಣೆ ಹಾಗೂ ಮೂಲಸೌಕರ್ಯಗಳ ಮೇಲಿನ ಒತ್ತಡವನ್ನು ತಗ್ಗಿಸುವ ಉದ್ದೇಶದಿಂದ ರಾಜ್ಯದ ಐದು ಪ್ರಮುಖ ನಗರಗಳಿಗೆ ಹೊಸ ರೂಪ ನೀಡಲು ಸರಕಾರ ನಿರ್ಧರಿಸಿದೆ.
ಬೆಂಗಳೂರಿನ ಮೇಲಿನ ದಟ್ಟಣೆಯನ್ನು ಕಡಿಮೆ ಮಾಡಲು ಮೈಸೂರು, ಬೆಳಗಾವಿ, ಹುಬ್ಬಳ್ಳಿ-ಧಾರವಾಡ, ಕಲ್ಬುರ್ಗಿ ಸೇರಿದಂತೆ ಐದು ಪ್ರಮುಖ ನಗರಗಳಲ್ಲಿ ಹೊಸ ಉದ್ಯೋಗ ಸೃಷ್ಟಿ, ಶಿಕ್ಷಣ, ಆರೋಗ್ಯ ಮತ್ತು ಮೂಲಸೌಕರ್ಯಗಳ ಅಭಿವೃದ್ಧಿಗೆ ವಿಶೇಷ ಕಾರ್ಯಕ್ರಮ ರೂಪಿಸಲಾಗುವುದು ಎಂದು ತಿಳಿಸಿದರು.
ರಾಜ್ಯದ ಸಣ್ಣ ಮತ್ತು ದೊಡ್ಡ ನಗರಗಳಲ್ಲಿ ಸಂಚಾರ ದಟ್ಟಣೆ ನಿಯಂತ್ರಿಸಲು ಪ್ರತ್ಯೇಕ ರಿಂಗ್ ರೋಡ್‌ಗಳ ನಿರ್ಮಾಣಕ್ಕೆ ಈಗಾಗಲೇ ಸಹಿ ಹಾಕಲಾಗಿದೆ. ಮೈಸೂರು ನಗರವು ಬೆಂಗಳೂರಿಗಿAತಲೂ ಉತ್ತಮವಾಗಿ ಯೋಜಿತಗೊಂಡ ನಗರ ಆಗಿದ್ದು, ಇಲ್ಲಿ ಹೊಸ ಮಾದರಿಯ ಯೋಜನೆಗಳನ್ನು ತರಲಾಗುವುದು ಎಂದರು.
ಕಾವೇರಿ ನೀರು ಹಂಚಿಕೆ ವಿಷಯಕ್ಕೆ ಸಂಬAಧಿಸಿದAತೆ ಸುಪ್ರೀಂ ಕೋರ್ಟ್ ಆದೇಶಗಳನ್ನು ಪಾಲಿಸುವುದರ ಜೊತೆಗೆ, ರಾಜ್ಯದ ರೈತರ ಹಿತರಕ್ಷಣೆಗೆ ಸರ್ಕಾರ ಬದ್ಧವಾಗಿದೆ. ಸ್ಥಳೀಯ ಶಾಸಕರು ಮತ್ತು ಜನಪ್ರತಿನಿಧಿಗಳೊಂದಿಗೆ ಸಮಾಲೋಚನೆ ನಡೆಸಿ, ಮೈಸೂರಿನ ಸರ್ವಾಂಗೀಣ ಅಭಿವೃದ್ಧಿಗೆ ಶೀಘ್ರದಲ್ಲೇ ವಿಶೇಷ ಸಭೆ ಕರೆದು ಅಂತಿಮ ರೂಪುರೇಷೆ ಸಿದ್ಧಪಡಿಸುವುದಾಗಿ ಹೇಳಿದರು.
ನಾಗೇಂದ್ರ ವಿಚಾರದಲ್ಲಿ ನಿರಪರಾಧಿಯನ್ನು ಬಲಿ ತೆಗೆದುಕೊಳ್ಳಲು ವಿಪಕ್ಷಗಳು ಪ್ರಯತ್ನಿಸಿವೆ. ಅವರೇ ಸ್ವಯಂಪ್ರೇರಿತವಾಗಿ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು, ರಾಜ್ಯಪಾಲರಿಗೆ ಕಳುಹಿಸಿದ್ದೇವೆ’ ಎಂದರು.
‘ನಾನು ಮುಖ್ಯಮಂತ್ರಿ ಆಗಿರುವುದನ್ನು ಸಹಿಸಿಕೊಳ್ಳಲು ಬಿಜೆಪಿ-ಜೆಡಿಎಸ್ಗೆ ಸಹಿಸಿಕೊಳ್ಳಲು ಆಗುತ್ತಿಲ್ಲ. ಎಚ್.ಡಿ. ಕುಮಾರಸ್ವಾಮಿ ಏನು ಬೇಕಾದರೂ ಮಾತನಾಡಲಿ. ಅಸೂಯೆಗೆ ಮದ್ದಿಲ್ಲ. ಅವರಿಗೆ ರಾಜಕಾರಣವೇ ಮುಖ್ಯ ಹೊರತು ರಾಜ್ಯದ ಹಿತಾಸಕ್ತಿ ಅಲ್ಲ’ ಎಂದು ಟೀಕಿಸಿದರು.
ಹನೂರು ಶೂಟೌಟ್ ಪ್ರಕರಣದ ನಿಷ್ಪಕ್ಷಪಾತ ತನಿಖೆ:
ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಶಾಗ್ಯ ಅರಣ್ಯ ವಲಯದಲ್ಲಿ ಅರಣ್ಯ ಸಿಬ್ಬಂದಿಯಿAದ ಮೂವರ ಮೇಲೆ ನಡೆದ ಶೂಟೌಟ್ ಪ್ರಕರಣವನ್ನು ಈಗಾಗಲೇ ಸಿಐಡಿಗೆ ಒಪ್ಪಿಸಲಾಗಿದೆ. ಬಹಳ ಹತ್ತಿರದಿಂದ ಗುಂಡು ಹಾರಿಸಿರುವುದು ಕಂಡುಬAದಿದೆ. ಈ ಬಗ್ಗೆ ನಿಷ್ಪಕ್ಷಪಾತ ವಿಚಾರಣೆ ನಡೆಯಲಿದೆ’ ಎಂದು ಹೇಳಿದರು.
ಸಂದರ್ಭದಲ್ಲಿ ಶಾಸಕ ಕೆ. ಹರೀಶ್ ಗೌಡ, ಪ್ರಾದೇಶಿಕ ಆಯುಕ್ತ ನಿತೇಶ್ ಪಾಟೀಲ್,ಜಿಲ್ಲಾಧಿಕಾರಿ ಜಿ. ಲಕ್ಷಿ÷್ಮಕಾಂತರೆಡ್ಡಿ,ಮೈಸೂರು ನಗರ ಪೊಲೀಸ್ ಆಯುಕ್ತ ಸೀಮಾ ಲಾಟ್ಕರ್, ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ್ ಬಾಲದಂಡಿ ಹಾಗೂ ಮುಖಂಡರು ಮತ್ತಿತರರು ಉಪಸ್ಥಿತರಿದ್ದರು.