
*187 ಕೋಟಿ ಅವ್ಯವಹಾರದಲ್ಲಿ ಭಾಗಿಯಾದ ಎಲ್ಲರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು: ಡಾ. ಈ.ಸಿ. ನಿಂಗರಾಜ್ ಗೌಡ
ಮೈಸೂರು: ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣದ ಅವ್ಯವಹಾರಕ್ಕೆ ಸಂಬAಧಿಸಿದAತೆ ಸಚಿವ ಬಿ. ನಾಗೇಂದ್ರ ಅವರು ರಾಜೀನಾಮೆ ನೀಡಿರುವುದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರ ನೇತೃತ್ವದಲ್ಲಿ ಬಿಜೆಪಿ ನಡೆಸಿದ ನಿರಂತರ ಹೋರಾಟಕ್ಕೆ ಸಂದ ಜಯವಾಗಿದೆ ಎಂದು ಬಿಜೆಪಿ ಮೈಸೂರು ವಿಭಾಗದ ಸಹ ಪ್ರಭಾರಿ ಡಾ. ಈ.ಸಿ. ನಿಂಗರಾಜ್ ಗೌಡ ಹೇಳಿದ್ದಾರೆ.
ಈ ಕುರಿತು ಪ್ರತಿಕ್ರಿಯಿಸಿರುವ ಅವರು, ವಾಲ್ಮೀಕಿ ನಿಗಮದ ಹಣದ ಅವ್ಯವಹಾರ ಪ್ರಕರಣದಲ್ಲಿ ಸಚಿವರ ರಾಜೀನಾಮೆ ಮಾತ್ರ ಅಂತಿಮ ಪರಿಹಾರವಲ್ಲ. ಪ್ರಕರಣದಲ್ಲಿ ಯಾರೇ ಭಾಗಿಯಾಗಿದ್ದರೂ ಅವರ ಪಾತ್ರದ ಬಗ್ಗೆ ಸಮಗ್ರ ತನಿಖೆ ನಡೆಸಿ, ತಪ್ಪಿತಸ್ಥರೆಂದು ದೃಢಪಟ್ಟ ಎಲ್ಲ ರಾಜಕಾರಣಿಗಳು ಹಾಗೂ ಅಧಿಕಾರಿಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.
ವಾಲ್ಮೀಕಿ ನಿಗಮಕ್ಕೆ ಸೇರಿದ 187 ಕೋಟಿ ಹಣವನ್ನು ಸಂಪೂರ್ಣವಾಗಿ ವಾಪಸ್ ಪಡೆದು ನಿಗಮಕ್ಕೆ ಜಮೆ ಮಾಡಬೇಕು. ಸಾರ್ವಜನಿಕರ ಹಣದ ದುರ್ಬಳಕೆಗೆ ಕಾರಣರಾದವರನ್ನು ಯಾವುದೇ ಕಾರಣಕ್ಕೂ ರಕ್ಷಿಸಬಾರದು. ತನಿಖೆ ಪಾರದರ್ಶಕವಾಗಿ ನಡೆಯಬೇಕು ಎಂದು ಆಗ್ರಹಿಸಿದ್ದಾರೆ.
ವಾಲ್ಮೀಕಿ ನಿಗಮದ ಹಣದ ಅವ್ಯವಹಾರ ಪ್ರಕರಣದ ಸಂಪೂರ್ಣ ಸತ್ಯ ಹೊರಬರುವವರೆಗೆ ಹಾಗೂ ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಜರುಗುವವರೆಗೆ ಬಿಜೆಪಿ ನಾಯಕರು ಮತ್ತು ಕಾರ್ಯಕರ್ತರು ಬಿ.ವೈ. ವಿಜಯೇಂದ್ರ ಅವರ ನೇತೃತ್ವದಲ್ಲಿ ಹೋರಾಟವನ್ನು ಮುಂದುವರಿಸಲಿದ್ದಾರೆ ಎಂದು ತಿಳಿಸಿದ್ದಾರೆ.
“ಸಚಿವರ ರಾಜೀನಾಮೆಯಿಂದ ಹೋರಾಟ ಮುಗಿದಿಲ್ಲ. ವಾಲ್ಮೀಕಿ ನಿಗಮದ ಹಣದ ಅವ್ಯವಹಾರದಲ್ಲಿ ಭಾಗಿಯಾಗಿರುವ ಪ್ರತಿಯೊಬ್ಬರ ಪಾತ್ರವೂ ತನಿಖೆಯಾಗಬೇಕು, ಸಾರ್ವಜನಿಕರ ಹಣ ಸಂಪೂರ್ಣವಾಗಿ ವಾಪಸ್ ಬರಬೇಕು ಹಾಗೂ ತಪ್ಪಿತಸ್ಥರಿಗೆ ಕಾನೂನು ಪ್ರಕಾರ ಶಿಕ್ಷೆಯಾಗಬೇಕು. ಇದಕ್ಕಾಗಿ ಬಿಜೆಪಿ ತನ್ನ ಹೋರಾಟವನ್ನು ಮುಂದುವರಿಸಲಿದೆ” ಎಂದು ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.