Skip to main content

3Kaala News

ಸುಭಾಷಿತ 

ನಾವು ಮಾಡುವ ಕೆಲಸದಲ್ಲಿ ಸಂಪೂರ್ಣ ಶ್ರದ್ಧೆ ಮತ್ತು ಭಕ್ತಿ ಇದ್ದಾಗ ಮಾತ್ರ ಯಶಸ್ಸು ಒಲಿಯುತ್ತದೆ. ಅರ್ಧಮನಸ್ಸಿನಿಂದ ಮಾಡುವ ಕೆಲಸ ಎಂದಿಗೂ ಪರಿಪೂರ್ಣ ಫಲ ನೀಡಲಾರದು.

Current Weather Card
--°C
Mysore, IN
Loading...
☁️

Live Gold Silver Fuel News Ticker
Loading live rates...

ದಸರಾದಲ್ಲಿ ವಿವಿಧ ಕಲಾಪ್ರಕಾರಗಳ ಸಾಂಸ್ಕೃತಿಕ ಕಾರ್ಯಕ್ರಮಗಳ ಆಯೋಜನೆ


ಮೈಸೂರು; 2026-27 ನೇ ಸಾಲಿನಲ್ಲಿ ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವವನ್ನು ಅ. 11 ರಿಂದ 21 ರ ವರೆಗೆ ವಿಜೃಂಭಣೆಯಿAದ ಆಚರಿಸಲು ರಾಜ್ಯ ಸರ್ಕಾರವು ತೀರ್ಮಾನಿಸಿದ್ದು, ಈ ಸಂಬ0ಧ ಸಾಂಸ್ಕೃತಿಕ ಉಪಸಮಿತಿಯಿಂದ ನವರಾತ್ರಿ ಅ. 11 ರಿಂದ 19 ವರೆಗೆ ವಿವಿಧ ಕಲಾಪ್ರಕಾರಗಳ ಸಾಂಸ್ಕöÈತಿಕ ಕಾರ್ಯಕ್ರಮಗಳನ್ನು ಅರಮನೆ ಹಾಗೂ ಇತರೆ ವೇದಿಕೆಗಳಲ್ಲಿ ಆಯೋಜಿಸಲು ಉದ್ದೇಶಿಸಲಾಗಿದೆ.
ಸಾಂಸ್ಕöÈತಿಕ ಕಾರ್ಯಕ್ರಮ ನೀಡಲು ಕಲಾವಿದರಿಂದ, ಕಲಾತಂಡಗಳಿAದ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಸೆ.16 ಆಗಿರುತ್ತದೆ. ಸದರಿ ಅರ್ಜಿಗಳನ್ನು ಸಹಾಯಕ ನಿರ್ದೇಶಕರ ಕಚೇರಿ, ಕನ್ನಡ ಮತ್ತು ಸಂಸ್ಕöÈತಿ ಇಲಾಖೆ, ಕರ್ನಾಟಕ ಕಲಾಮಂದಿರ, ವಿನೋಬಾ ರಸ್ತೆ, ಮೈಸೂರು- 570005 ಇಲ್ಲಿಗೆ ನೇರವಾಗಿ ಅಥವಾ ಅಂಚೆ ಮೂಲಕ ಅರ್ಜಿ ಸಲ್ಲಿಸಬಹುದಾಗಿದ್ದು, ಮಿಂಚAಚೆ ಮೂಲಕವು ಛಿಛಿಜಚಿsಚಿಡಿಚಿ23@gಚಿmಚಿiಟ.ಛಿom ವಿಳಾಸಕ್ಕೆ ಅರ್ಜಿ ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಕಚೇರಿ ದೂರವಾಣಿ ಸಂಖ್ಯೆ: 0821-2513225ಗೆ ಸಂಪರ್ಕಿಸಲು ತಿಳಿಸಿದೆ. ಹಾಗೂ ಕಲಾವಿದರಿಗೆ ಕಾರ್ಯಕ್ರಮ ಕೊಡಿಸುವುದಾಗಿ ಯಾವುದೇ ಮಧ್ಯವರ್ತಿಗಳು ಸಂಪರ್ಕಿಸಿ ಹಣದ ಬೇಡಿಕೆ ಇಟ್ಟಲ್ಲಿ ತಕ್ಷಣ ಮಾಹಿತಿ ಸಮೇತ ಸಹಾಯಕ ನಿರ್ದೇಶಕರ ಕಚೇರಿಗೆ ದೂರು ಸಲ್ಲಿಸಲು ಪ್ರಕಟಣೆ ಕೋರಿದೆ.