Skip to main content

3Kaala News

ಸುಭಾಷಿತ 

ಪಕ್ಕದಲ್ಲಿರುವವನ ತಟ್ಟೆಯಲ್ಲಿ ಏನಿದೆ ಅಂತ ಯಾವತ್ತೂ ಇಣುಕಿ ನೋಡಬೇಡ. ಕಾರಣ ಅಲ್ಲಿ ಜಾಸ್ತಿಯಿದ್ದರೆ, ನಿನಗೆ ಸಂಕಟವಾಗುತ್ತದೆ.ಅಲ್ಲಿ ಕಡಿಮೆ ಇದ್ದರೆ, ನಿನಗೆ ಅಹಂಕಾರ ಬರುತ್ತದೆ.ಎರಡೂ ಒಳ್ಳೆಯದಲ್ಲ.ನಮ್ಮ ತಟ್ಟೆಯನ್ನು ನಾವು ನೋಡಿಕೊಂಡಿದ್ದರೆ, ಸಿಗುವ ಸಂತೋಷವೇ ಬೇರೆ

Current Weather Card
--°C
Mysore, IN
Loading...
☁️

Live Gold Silver Fuel News Ticker
Loading live rates...

ನಾಗೇಂದ್ರ ಆರೋಪಿ ಅಷ್ಟೇ, ಅಪರಾಧಿ ಅಲ್ಲ;ಸಚಿವ ಬಾಲಕೃಷ್ಣ

*ಬಿಜೆಪಿಯವರಿಗೆ ನಮ್ಮನ್ನು ಬೈದುಕೊಂಡು ಓಡಾಡುವುದೇ ಕೆಲಸ

ಮೈಸೂರು: ವಾಲ್ಮೀಕಿ ನಿಗಮದಲ್ಲಿ ನಡೆದಿರುವ ನೂರಾರು ಕೋಟಿರೂಗಳ ಹಗರಣ ಪ್ರಕರಣದಲ್ಲಿ ಮಾಜಿ ಸಚಿವ ನಾಗೇಂದ್ರ ಆರೋಪಿ ಅಷ್ಟೇ, ಅಪರಾಧಿ ಅಲ್ಲ; ಪ್ರಕರಣ ಕೋರ್ಟ್ನಲ್ಲಿದೆ, ತೀರ್ಪು ಏನಾಗುತ್ತೋ ನೋಡೋಣ ಎಂದು ಸಚಿವ ಬಾಲಕೃಷ್ಣ ಹೇಳಿದರು. ಸೋಮವಾರ ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಹಮ್ಮಿಕೊಂಡಿರುವ ಪಾದಯಾತ್ರೆ ವಿರುದ್ಧ ವಾಗ್ದಾಳಿ ನಡೆಸಿದರು. ವಿರೋಧ ಪಕ್ಷದವರು ನಮ್ಮನ್ನು ಹೊಗಳುತ್ತಾರೆಯೇ? ನಮ್ಮನ್ನು ತೆಗಳುವುದು, ಬೈದುಕೊಂಡು ಓಡಾಡುವುದೇ ಅವರ ಕೆಲಸ ಎಂದು ಟೀಕಿಸಿದರು. ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರ ಹೊಸ ಬಾಂಬ್’ ಹೇಳಿಕೆ ಕುರಿತು ಪ್ರತಿಕ್ರಿಯಿಸಿದ ಸಚಿವ ಬಾಲಕೃಷ್ಣ, ಅವರ ಬಳಿ ಯಾವ ಬಾಂಬ್ ಇದೆ ಎಂಬುದು ನನಗೆ ಗೊತ್ತಿಲ್ಲ. ಮೇಕೆದಾಟು, ಮಹದಾಯಿ ವಿಚಾರದಲ್ಲಿ ಕೇಂದ್ರ ಸರ್ಕಾರದಿಂದ ಒಪ್ಪಿಗೆ ತೆಗೆದುಕೊಂಡು ಬರುತ್ತಾರೆ ಎಂದುಕೊAಡಿದ್ದೇನೆ ಎಂದು ವ್ಯಂಗ್ಯವಾಡಿದರು. ಹೆಚ್.ಡಿ.ಕುಮಾರಸ್ವಾಮಿ ಅವರಿಗೆ ಆಗಾಗ ತಲೆ ಬದಲಾಗುತ್ತದೆ. ಅವರ ತಲೆಯಲ್ಲಿ ಏನಿದೆ, ಬತ್ತಳಿಕೆಯಲ್ಲಿ ಯಾವ ಅಸ್ತçವಿದೆ ಎಂಬುದು ಗೊತ್ತಿಲ್ಲ. ಅವರ ಸಂಪರ್ಕ ಕಡಿದುಕೊಂಡು ನಾವು ಬಹಳ ಸಮಯವಾಗಿದೆ. `ನನ್ನ ಹೆಸರು ಕೇಳಿದ್ರೆ ಕುಮಾರಸ್ವಾಮಿ ಗರಂ ಆಗ್ತಾರೆ’, “ನನ್ನನ್ನು ನೋಡಿದ್ರೆ ಅವರಿಗೆ ಹಾಗೇ ಆಗುತ್ತದೆ. ಯಾಕೆ ಅಂತ ನನಗೆ ಗೊತ್ತಿಲ್ಲ” ಎಂದು ಲೇವಡಿ ಮಾಡಿದರು.
ಸುತ್ತೂರು ಮಠಕ್ಕೆ ಭೇಟಿ; ಇದಕ್ಕೂ ಮುನ್ನಾ ಸಚಿವ ಬಾಲಕೃಷ್ಣ ಅವರು ನಗರದ ಚಾಮುಂಡಿಬೆಟ್ಟದ ತಪ್ಪಲಿನಲ್ಲಿರುವ
ಸುತ್ತೂರು ಮಠಕ್ಕೆ ಭೇಟಿ ನೀಡಿ, ಪೀಠಾಧಿಪತಿಗಳಾದ ಶ್ರೀ ಡಾ. ಶಿವರಾತ್ರಿ ದೇಶಿಕೇಂದ್ರ ಮಹಾಸ್ವಾಮೀಜಿಗಳ ಆಶೀರ್ವಾದ ಪಡೆದರು. ಬಳಿಕ ಮಾತನಾಡಿ, ಅನ್ನ, ಅಕ್ಷರ ಹಾಗೂ ಆಶ್ರಯ ದಾಸೋಹದ ಮೂಲಕ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ಸೇವೆ ತಲುಪಿಸುವ ಸುತ್ತೂರು ಮಠದ ಕಾರ್ಯ ನಿಜಕ್ಕೂ ಶ್ಲಾಘನೀಯ ಹಾಗೂ ಮಾದರಿಯಾಗಿದೆ.
ಬಸವಾದಿ ಶರಣರು ಸಾರಿದ ಸಮಾನತೆ, ಕಾಯಕ, ದಾಸೋಹ ಹಾಗೂ ಮಾನವೀಯ ಮೌಲ್ಯಗಳನ್ನು ತಮ್ಮ ಸೇವಾ ಕಾರ್ಯಗಳ ಮೂಲಕ ನಿರಂತರವಾಗಿ ಮುನ್ನಡೆಸಿಕೊಂಡು ಬರುತ್ತಿರುವ ಸುತ್ತೂರು ಸಂಸ್ಥಾನ ಮಠವು ನಾಡಿನ ಆಧ್ಯಾತ್ಮಿಕ ಮತ್ತು ಸಾಮಾಜಿಕ ಕ್ಷೇತ್ರದಲ್ಲಿ ವಿಶಿಷ್ಟ ಸ್ಥಾನವನ್ನು ಹೊಂದಿದೆ.
ಪರಮಪೂಜ್ಯ ಶ್ರೀಗಳ ದರ್ಶನ ಹಾಗೂ ಆಶೀರ್ವಾದ ಪಡೆಯುವ ಅವಕಾಶ ದೊರೆತದ್ದು ಅತ್ಯಂತ ಸಂತೋಷದ ಕ್ಷಣವಾಗಿದೆ ಎಂದು ಹೇಳಿದರು.