Skip to main content

3Kaala News

ಸುಭಾಷಿತ 

ಪಕ್ಕದಲ್ಲಿರುವವನ ತಟ್ಟೆಯಲ್ಲಿ ಏನಿದೆ ಅಂತ ಯಾವತ್ತೂ ಇಣುಕಿ ನೋಡಬೇಡ. ಕಾರಣ ಅಲ್ಲಿ ಜಾಸ್ತಿಯಿದ್ದರೆ, ನಿನಗೆ ಸಂಕಟವಾಗುತ್ತದೆ.ಅಲ್ಲಿ ಕಡಿಮೆ ಇದ್ದರೆ, ನಿನಗೆ ಅಹಂಕಾರ ಬರುತ್ತದೆ.ಎರಡೂ ಒಳ್ಳೆಯದಲ್ಲ.ನಮ್ಮ ತಟ್ಟೆಯನ್ನು ನಾವು ನೋಡಿಕೊಂಡಿದ್ದರೆ, ಸಿಗುವ ಸಂತೋಷವೇ ಬೇರೆ

Current Weather Card
--°C
Mysore, IN
Loading...
☁️

Live Gold Silver Fuel News Ticker
Loading live rates...

ಕುಡಿಯುವ ನೀರಿನ ತೊಂದರೆ ನಿವಾರಿಸಲು ತಕ್ಷಣವೇ ಅಧಿಕಾರಿಗಳು ಕಾರ್ಯಪ್ರವೃತ್ತರಾಗಬೇಕು; ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ

ಹುಣಸೂರು; ತಾಲೂಕಿನಲ್ಲಿ ತೀವ್ರ ಕುಡಿಯುವ ನೀರಿನ ಅಭಾವ ಎದುರಿಸುತ್ತಿರುವ ಗ್ರಾಮಗಳಿಗೆ ತಕ್ಷಣವೇ ಪರ್ಯಾಯ ನೀರು ಪೂರೈಕೆ ವ್ಯವಸ್ಥೆ ಕಲ್ಪಿಸುವಂತೆ ನಗರಾಭಿವೃದ್ಧಿ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ಅವರು ತಾಲೂಕು ಮಟ್ಟದ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.ಶುಕ್ರವಾರ ಹುಣಸೂರಿನ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ತಾಲೂಕು ಮಟ್ಟದ ವಿವಿಧ ಇಲಾಖಾಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಅವರು,ಹುಣಸೂರು ತಾಲೂಕಿನಾದ್ಯಂತ ಇತ್ತೀಚೆಗೆ ಉಂಟಾಗಿರುವ ಹವಾಮಾನ ವೈಪರೀತ್ಯ ಹಾಗೂ ಮಳೆ ಅಭಾವದಿಂದ ರೈತರು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದಾರೆ. ಕೃಷಿ…

Read More

ಚಾಮುಂಡೇಶ್ವರಿಯ ದರ್ಶನ ಪಡೆದ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ

• ಭಾರತ ಹಿಂದೂ ರಾಷ್ಟç ಆಗಬಾರದು ಎಂದಿರುವ ಯತೀಂದ್ರ ಸಿದ್ದರಾಮಯ್ಯನವರು ತಮ್ಮ ತಾಯಿ ಬಳಿ, ಧರ್ಮ, ಸಂಸ್ಸೃತಿಯನ್ನು ಕೇಳಿ ತಿಳಿಯಲಿಮೈಸೂರು: ಆಷಾಢ ಮಾಸದ ಕಡೆಯ ಶುಕ್ರವಾರವಾದ ಇಂದು ನಗರದ ಚಾಮುಂಡಿ ಬೆಟ್ಟಕ್ಕೆ ಆಗಮಿಸಿದ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರು ನಾಡ ಶಕ್ತಿ ದೇವತೆ ತಾಯಿ ಚಾಮುಂಡೇಶ್ವರಿ ದೇವಿಯ ದರ್ಶನ ಪಡೆದರು.ದೇವಸ್ಥಾನದ ಗರ್ಭಗುಡಿಯಲ್ಲಿ ಕುಳಿತು ದೇವಿಗೆ ವಿಶೇಷ ಪೂಜೆ ಸಲ್ಲಿಸಿ ಪ್ರಾರ್ಥನೆ ಸಲ್ಲಿಸಿದರು. ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿ, ಆಷಾಡ ಶುಕ್ರವಾರಗಳ ಮಹತ್ವ ಹಾಗೂ ದೇವಿಯ ಅನುಗ್ರಹದ ಬಗ್ಗೆ…

Read More

8 ನೂತನ ಆಂಬ್ಯುಲೆನ್ಸ್ ಗಳಿಗೆ ಸಚಿವರಿಂದ ಚಾಲನೆ

ಮೈಸೂರು; ಆಂಬ್ಯುಲೆನ್ಸ್ ವಾಹನಗಳ ಸೇವೆಯನ್ನು ಒದಗಿಸಲು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ನೂತನವಾಗಿ ಖರೀದಿಸಲಾಗಿರುವ 8 ಆಂಬ್ಯುಲೆನ್ಸ್ ಗಳನ್ನು ಶುಕ್ರವಾರ ಜಿಲ್ಲಾ ಉಸ್ತುವಾರಿ ಹಾಗೂ ನಗರಾಭಿವೃದ್ಧಿ ಸಚಿವ ಡಾ: ಯತೀಂದ್ರ ಸಿದ್ದರಾಮಯ್ಯ ಅವರು ನಗರದ ಜಿಲ್ಲಾ ಆಸ್ಪತ್ರೆ ಆವರಣದಲ್ಲಿ ಚಾಲನೆ ನೀಡಿದರು.ಸಾರ್ವಜನಿಕರಿಗೆ ಗುಣಮಟ್ಟದ ಹಾಗೂ ಸಮಯೋಚಿತ ಆರೋಗ್ಯ ಸೇವೆ ಒದಗಿಸುವುದು ಸರ್ಕಾರದ ಪ್ರಮುಖ ಆದ್ಯತೆಯಾಗಿದ್ದು, ಆರೋಗ್ಯ ಸೇವೆಗಳನ್ನು ಮತ್ತಷ್ಟು ಬಲಪಡಿಸುವ ಹಾಗೂ ತುರ್ತು ಚಿಕಿತ್ಸಾ ಸೇವೆಯನ್ನು ಜನರಿಗೆ ಶೀಘ್ರವಾಗಿ ತಲುಪಿಸಲು ಆಂಬ್ಯುಲೆನ್ಸ್ ಸೇವೆ ಅತ್ಯವಶ್ಯಕ…

Read More

ಬೆಳೆ ಹಾನಿ ಕುರಿತು ಅಧಿಕಾರಿಗಳು ನಿಖರವಾಗಿ ಸಮೀಕ್ಷೆ ನಡೆಸಿ; ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ

ಮೈಸೂರು; ಮಳೆ ಕೊರತೆಯಿಂದ ಬೆಳೆ ಹಾನಿ ಉಂಟಾಗಿದ್ದು, ಈ ಸಂಬAಧ ಪರಿಸ್ಥಿತಿಯನ್ನು ಅವಲೋಕಿಸಲು ಬೆಳೆ ಹಾನಿ ಗ್ರಾಮಗಳಿಗೆ ಭೇಟಿ ನೀಡಲಾಗುತ್ತಿದೆ. ಬೆಳೆ ಹಾನಿ ಕುರಿತು ಅಧಿಕಾರಿಗಳು ನಿಖರ ಸಮೀಕ್ಷೆ ನಡೆಸಿ ಎಂದು ನಗರಾಭಿವೃದ್ಧಿ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಡಾ ಯತೀಂದ್ರ ಸಿದ್ದರಾಮಯ್ಯ ಸೂಚಿಸಿದರು.ಶುಕ್ರವಾರ ಜಿಲ್ಲೆಯ ಹುಣಸೂರು ತಾಲ್ಲೂಕಿನ ಕೆಂಪನಹಳ್ಳಿಗೆ ಭೇಟಿ ನೀಡಿ ಬರ ಪರಿಸ್ಥಿತಿ ವೀಕ್ಷಿಸಿದ ಬಳಿಕ ಮಾತನಾಡಿದ ಅವರು, ಮಳೆಯ ಕೊರತೆಯಿಂದಾಗಿ ರಾಜ್ಯದ ವಿವಿಧ ಭಾಗಗಳಲ್ಲಿ ಬೇರೆ ಬೇರೆ ಬೆಳೆಗಳ ಇಳುವರಿಯಲ್ಲಿ ಗಣನೀಯ…

Read More

ಭಕ್ತರಿಂದ ತುಂಬಿ ತುಳುಕಿದ ಚಾಮುಂಡಿಬೆಟ್ಟ; ಮಹಾಲಕ್ಷಿö್ಮ ಅಲಂಕಾರದಲ್ಲಿ ಕಂಗೊಳಿಸಿದ ಶಕ್ತಿ ದೇವತೆ ಚಾಮುಂಡೇಶ್ವರಿ

ಮೈಸೂರು: ಆಷಾಢ ಮಾಸದ ಕೊನೆಯ ಶುಕ್ರವಾರವಾದ ಇಂದು ಮೈಸೂರಿನ ಚಾಮುಂಡಿಬೆಟ್ಟಕ್ಕೆ ನಾಡ ಶಕ್ತಿ ದೇವತೆ ತಾಯಿ ಭಕ್ತಸಾಗರವೇ ಹರಿದುಬಂದಿತ್ತು. ಇದರಿಂದಾಗಿ ಭಕ್ತರಿಂದ ಬೆಟ್ಟ ತುಂಬಿ ತುಳುಕಿತು. ಬೆಟ್ಟಕ್ಕೆ ಆಗಮಿಸಿದ ಲಕ್ಷಾಂತರ ಭಕ್ತರು ದುರ್ಗೆಯ ದರ್ಶನ ಪಡೆದು ಪಾವನರಾಗಿ ಜೈ ಚಾಮುಂಡೇಶ್ವರಿ ಎಂದು ಮುಗಿಲು ಮುಟ್ಟುವಂತೆ ಘೋಷಣೆಗಳನ್ನು ಕೂಗಿದರು. ಈ ಮೂಲಕ ಚಾಮುಂಡಿಬೆಟ್ಟದಲ್ಲಿ ಸಂಭ್ರಮ, ಸಡಗರದಿಂದ ಆಷಾಢ ಶುಕ್ರವಾರ ಸಂಪನ್ನವಾಯಿತು.ಬೆಟ್ಟದ ತಾಯಿಯ ದರ್ಶನ ಪಡೆಯಲೆಂದು ಮುಂಜಾನೆಯಿAದಲೇ ತುಂತುರು ಮಳೆಯನ್ನೂ ಲೆಕ್ಕಿಸದೆ ಮುಂಜಾನೆಯಿAದಲೇ ವಿವಿಧೆಡೆಗಳಿಂದ ಬೆಟ್ಟಕ್ಕೆ ಆಗಮಿಸಿದ ಭಕ್ತರು ನೂಕುನುಗ್ಗಲಿಲ್ಲದೆ…

Read More

ನೈರುತ್ಯ ರೈಲ್ವೆಯ ಮಹಾಪ್ರಬಂಧಕರಿAದ ಮೂಲಸೌಕರ್ಯಗಳ ಸಮಗ್ರ ಪರಿಶೀಲನೆ

ಮೈಸೂರು ; ನೈರುತ್ಯ ರೈಲ್ವೆಯ ಮಹಾಪ್ರಬಂಧಕ ಪಿ. ಅನಂತ್ ಅವರು ಮೈಸೂರು ವಿಭಾಗದ ವಿವಿಧ ಘಟಕಗಳು ಹಾಗೂ ಮೂಲಸೌಕರ್ಯಗಳ ಸಮಗ್ರ ಪರಿಶೀಲನೆ ನಡೆಸಿದರು. ಪರಿಶೀಲನೆಯ ಸಂದರ್ಭದಲ್ಲಿ ಅವರು ಮೈಸೂರು ರೈಲ್ವೆ ಆಸ್ಪತ್ರೆಗೆ ಭೇಟಿ ನೀಡಿ, ಅಲ್ಲಿನ ಆರೋಗ್ಯ ಸೇವೆಗಳ ಗುಣಮಟ್ಟ ಹಾಗೂ ರೋಗಿಗಳ ಆರೈಕೆಯನ್ನು ಪರಿಶೀಲಿಸಿದರು. ಅವರು ವೈದ್ಯರು, ಆಸ್ಪತ್ರೆಯ ಸಿಬ್ಬಂದಿ ಹಾಗೂ ರೋಗಿಗಳೊಂದಿಗೆ ಸಂವಾದ ನಡೆಸಿ, ವೈದ್ಯಕೀಯ ಉಪಕರಣಗಳು, ಆರೋಗ್ಯ ಸೌಲಭ್ಯಗಳು ಹಾಗೂ ಅಗತ್ಯ ಮೂಲಸೌಕರ್ಯಗಳ ಲಭ್ಯತೆಯನ್ನು ಅವಲೋಕಿಸಿದರು. ರೈಲ್ವೆ ನೌಕರರು ಮತ್ತು ಅವರ ಕುಟುಂಬಗಳಿಗೆ…

Read More

ತಂಬಾಕು ಹದ ಮಾಡುವ ಬ್ಯಾರನ್ ಗೆ ಬೆಂಕಿ ತಗುಲಿ ಲಕ್ಷಾಂತರ ರೂ ತಂಬಾಕು ಭಸ್ಮ

ಪಿರಿಯಾಪಟ್ಟಣ : ತಂಬಾಕು ಹದ ಮಾಡುವ (ಕ್ಯೂರಿಂಗ್) ವೇಳೆ ಆಕಸ್ಮಿಕವಾಗಿ ತಂಬಾಕು ಬ್ಯಾರನ್‌ ಗೆ ಬೆಂಕಿ ತಗುಲಿ, ಲಕ್ಷಂತರ ರೂ. ಮೌಲ್ಯದ ತಂಬಾಕು ಹಾಗೂ ಬ್ಯಾರನ್ ಕಟ್ಟಡ ಭಸ್ಮವಾಗಿರುವ ಘಟನೆ ತಾಲ್ಲೂಕಿನ ಹರಿಲಾಪುರ ಗ್ರಾಮದಲ್ಲಿ ಜರುಗಿದೆ. ಗ್ರಾಮದ ಸಿಂಗ್ರಯ್ಯರವರು ತಮ್ಮ 3 ಎಕರೆ ಜಮೀನಿನಲ್ಲಿ ತಂಬಾಕು ಬೆಳೆದಿದ್ದರು ತಂಬಾಕು ಹದ ಮಾಡುವ ಸಂದರ್ಭದಲ್ಲಿ ಬ್ಯಾರನ್ ಗೆ ಆಕಸ್ಮಿಕ ಬೆಂಕಿ ತಗುಲಿ ತಂಬಾಕು ಕಟ್ಟಿದ್ದ 700 ಕ್ಕೂ ಹೆಚ್ಚು ಕಡ್ಡಿಗಳು ಹಾಗೂ ಬ್ಯಾರನ್ ಕಟ್ಟಡ ಸುಟ್ಟುಹೋಗಿದೆ.  ವ್ಯವಸಾಯಕ್ಕಾಗಿ 10…

Read More

‘ಅಪಪ್ರಚಾರ ಮಾಡಿದ್ರೆ ಮಾನನಷ್ಟ ಮೊಕದ್ದಮೆ ಹೂಡುವೆ’; ಸಚಿವ ಸಿ.ಪುಟ್ಟರಂಗಶೆಟ್ಟಿ

ಚಾಮರಾಜನಗರ: ಸಚಿವ ಸ್ಥಾನ ಪಡೆಯುವುದಕ್ಕಾಗಿ ಪೇಮೆಂಟ್ ನೀಡಿದ್ದಾರೆ, ವಿಧಾನಸೌಧದಲ್ಲಿ ಲಂಚದ ಹಣ ಪಡೆದಿದ್ದರು ಎಂಬ ಮಾಜಿ ಸಚಿವ ತಿಮ್ಮಾಪುರ ಹಾಗೂ ಕಾಂಗ್ರೆಸ್ ಮುಖಂಡ ಎಸ್.ಜಿ.ನಂಜಯ್ಯನಮಠ ಅವರದ್ದು ಎನ್ನಲಾದ ಆಡಿಯೋ ಬಗ್ಗೆ ಸಚಿವ ಸಿ.ಪುಟ್ಟರಂಗಶೆಟ್ಟಿ ಸಿಟ್ಟಾಗಿ ಕಿಡಿಕಾರಿದ್ದಾರೆ.ಗುರುವಾರ ಚಾಮರಾಜನಗರದ ಪ್ರವಾಸಿಮಂದಿರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಪುಟ್ಟರಂಗಶೆಟ್ಟಿ ಎಲ್ಲಿ ಹಣ ಹೂತಿಟ್ಟಿದ್ದರು, ಅವರಿಗೆ ಅಷ್ಟೊಂದು ದುಡ್ಡು ಎಲ್ಲಿಂದ ಬಂತು ಎಂದು ಅವರನ್ನೇ ಕೇಳಿ, ನಾನು ಬೇರೆ ರೀತಿ ಮಾತನಾಡಬೇಕಾಗುತ್ತದೆ ಎಂದು ಸಿಡಿಮಿಡಿಕೊಂಡರು.ವಿಧಾನಸೌಧದಲ್ಲಿ ಹಣ ಪಡೆದ ಆರೋಪದ ಬಗ್ಗೆ ಎಲ್ಲಾ ಪರಿಶೀಲನೆ…

Read More