Skip to main content

3Kaala News

ಸುಭಾಷಿತ 

ಪಕ್ಕದಲ್ಲಿರುವವನ ತಟ್ಟೆಯಲ್ಲಿ ಏನಿದೆ ಅಂತ ಯಾವತ್ತೂ ಇಣುಕಿ ನೋಡಬೇಡ. ಕಾರಣ ಅಲ್ಲಿ ಜಾಸ್ತಿಯಿದ್ದರೆ, ನಿನಗೆ ಸಂಕಟವಾಗುತ್ತದೆ.ಅಲ್ಲಿ ಕಡಿಮೆ ಇದ್ದರೆ, ನಿನಗೆ ಅಹಂಕಾರ ಬರುತ್ತದೆ.ಎರಡೂ ಒಳ್ಳೆಯದಲ್ಲ.ನಮ್ಮ ತಟ್ಟೆಯನ್ನು ನಾವು ನೋಡಿಕೊಂಡಿದ್ದರೆ, ಸಿಗುವ ಸಂತೋಷವೇ ಬೇರೆ

Current Weather Card
--°C
Mysore, IN
Loading...
☁️

Live Gold Silver Fuel News Ticker
Loading live rates...

ಮುಡಾದಿಂದ ೨೦೧೯ ರಿಂದ ೨೦೨೩ರವರೆಗೆ ಶೇ ೫೦:೫೦ ಅನುಪಾತದಡಿ ಹಂಚಿಕೆಯಾಗಿರುವ ಎಲ್ಲಾ ನಿವೇಶನಗಳ ಹಂಚಿಕೆ ರದ್ದು; ಸಚಿವ ಡಾ.ಯತೀಂದ್ರ ಸಿದ್ದರಾಮಯ್ಯ

ಮೈಸೂರು: ಈ ಹಿಂದಿನ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ)ದಿಂದ ೫೦:೫೦ ಅನುಪಾತದಡಿಯಲ್ಲಿ೨೦೧೯ ರಿಂದ ೨೦೨೩ರವರೆಗೆ ಹಂಚಿಕೆಯಾಗಿರುವ ಒಟ್ಟು ೧೦೦೦ಕ್ಕೂ ಹೆಚ್ಚು ನಿವೇಶನಗಳನ್ನು ರದ್ದು ಮಾಡಲಾಗಿದೆ ಎಂದು ನಗರಾಭಿವೃದ್ಧಿ ಇಲಾಖೆ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಡಾ.ಯತೀಂದ್ರ ಸಿದ್ದರಾಮಯ್ಯ ತಿಳಿಸಿದರು.ಶುಕ್ರವಾರ ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಡಾದಿಂದ ಹಂಚಿಕೆ ಮಾಡಲಾಗಿದ್ದ೫೦:೫೦ ಅನುಪಾದ ಸೈಟ್‌ಗಳಲ್ಲಿ ಈಗಾಗಲೇ ಮನೆ ಕಟ್ಟಿರುವವರ ಪಟ್ಟಿಯನ್ನು ತರಿಸುತ್ತಿದ್ದೇನೆ. ಸದ್ಯಕ್ಕೆ ಎಲ್ಲಾ ನಿವೇಶನಗಳು ರದ್ದಾಗಿವೆ. ಈ ಸಂಬAಧ ಸಂಪೂರ್ಣ ಆದೇಶವನ್ನು ನಾವು ಪ್ರಾಧಿಕಾರಕ್ಕೆ ಕಳುಹಿಸಿದ್ದೇವೆ. ಆದೇಶ…

Read More

ವಿಜಯ ವಿಠ್ಠಲ ಪದವಿಪೂರ್ವ ಕಾಲೇಜಿನಲ್ಲಿ ಸಂಭ್ರಮದಿ0ದ ನಡೆದ ಸಂಸ್ಕೃತೋತ್ಸವ

ಮೈಸೂರು; ನಗರದ ಸರಸ್ವತಿಪುರಂನ ವಿಜಯವಿಠ್ಠಲ ಪದವಿಪೂರ್ವ ಕಾಲೇಜಿನಲ್ಲಿ ಸಂಸ್ಕೃತೋತ್ಸವವನ್ನು ಸಂಭ್ರಮದಿAದ ಆಚರಿಸಲಾಯಿತು. ಕಾಲೇಜಿನ ಪ್ರಾಂಶುಪಾಲರಾದ ಹೆಚ್. ಸತ್ಯಪ್ರಸಾದ್‌ರವರು ದೀಪ ಬೆಳಗಿಸುವುದರ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿದರು.ಬಳಿಕ ಮಾತನಾಡಿ, ಸಂಸ್ಕೃತವು ಅತ್ಯಂತ ಪುರಾತನ ಭಾಷೆಯಾಗಿದ್ದು ಬಹು ಭಾಷೆಗಳ ತಾಯಿಯಾಗಿದೆ. ಸಂಸ್ಕೃತ ಕೇವಲ ಒಂದು ಭಾಷೆಯಲ್ಲ, ಅದು ಭಾರತದ ಜ್ಞಾನ, ಸಂಸ್ಕೃತಿ ಮತ್ತು ಪರಂಪರೆಯ ಪ್ರತಿಬಿಂಬ ಎಂದು ತಿಳಿಸಿದರು.ಸಾವಿರಾರು ವರ್ಷಗಳ ಭಾರತೀಯ ಚಿಂತನೆ, ಸಾಹಿತ್ಯ, ವಿಜ್ಞಾನ, ಗಣಿತ, ಆಯುರ್ವೇದ, ವ್ಯಾಕರಣ ಸಂಸ್ಕೃತದ ಮೂಲಕ ನಮಗೆ ದೊರೆತಿದೆ. ವೇದಗಳು, ಉಪನಿಷತ್ತು, ರಾಮಾಯಣ, ಮಹಾಭಾರತ,…

Read More

ಬಿಜೆಪಿ ಮಹಿಳಾ ಮೋರ್ಚಾ ವತಿಯಿಂದ ರಕ್ಷಾ ಬಂಧನ ಆಚರಣೆ

ಮೈಸೂರು ; ಬಿಜೆಪಿ ಮಹಿಳಾ ಮೋರ್ಚಾ ವತಿಯಿಂದ ಶುಕ್ರವಾರ ಮೈಸೂರಿನ ಹೂಟಗಳ್ಳಿ ಕೆಎಚ್‌ಬಿ ಕಾಲೋನಿಯ ಸುದರ್ಶನ ವಿದ್ಯಾ ಸಂಸ್ಥೆಯಲ್ಲಿ ರಕ್ಷಾ ಬಂಧನವನ್ನು ಶಿಕ್ಷಕರಿಗೆ ರಕ್ಷೆ ಕಟ್ಟುವ ಮೂಲಕ ಸಡಗರಿಂದ ಆಚರಿಸಲಾಯಿತು..ಈ ಸಂದರ್ಭದಲ್ಲಿ ಮಾತನಾಡಿದ ಬಿಜೆಪಿಯ ಮೈಸೂರು ನಗರ ಮಹಿಳಾ ಮೋರ್ಚಾ ಅಧ್ಯಕ್ಷೆ ಮೋನಿಕಾ ಎಂ , ರಕ್ಷಾ ಬಂಧನವು ಸಹೋದರ-ಸಹೋದರಿಯರ ನಡುವಿನ ಪ್ರೀತಿ, ನಂಬಿಕೆ ಮತ್ತು ರಕ್ಷಣೆಯ ಬಾಂಧವ್ಯವನ್ನು ಸಾರುವ ಪವಿತ್ರ ಹಬ್ಬವಾಗಿದೆ. ಈ ದಿನ ಸಹೋದರಿ ಸಹೋದರನ ಕೈಗೆ ರಾಖಿ ಕಟ್ಟಿ ಅವನ ಸುಖ, ಶಾಂತಿ…

Read More

ರಾಜ್ಯ ಸರ್ಕಾರ ೨ ಲಕ್ಷಕ್ಕೂ ಅಧಿಕ ಸರ್ಕಾರಿ ಹುದ್ದೆಗಳನ್ನು ಭರ್ತಿಮಾಡದೆ ಉದ್ಯೋಗಾಕಾಂಕ್ಷಿಗಳ ಬದುಕನ್ನು ಅತಂತ್ರಗೊಳಿಸಿದೆ; ಬಿಜೆಪಿ ರಾಜ್ಯ ವಕ್ತಾರ ಅಶೋಕ್‌ಗೌಡ

ಮೈಸೂರು: ರಾಜ್ಯ ಸರ್ಕಾರದಲ್ಲಿ ಎರಡು ಲಕ್ಷಕ್ಕೂ ಅಧಿಕ ಸರ್ಕಾರಿ ಹುದ್ದೆಗಳು ಖಾಲಿಯಿದ್ದರೂ, ರಾಜ್ಯ ಸರ್ಕಾರ ಅವುಗಳನ್ನು ಭರ್ತಿ ಮಾಡದೆ ಲಕ್ಷಾಂತರ ಉದ್ಯೋಗಾಕಾಂಕ್ಷಿಗಳ ಬದುಕನ್ನು ಅತಂತ್ರಗೊಳಿಸಿದೆ ಎಂದು ಬಿಜೆಪಿ ರಾಜ್ಯ ವಕ್ತಾರ ಅಶೋಕ್‌ಗೌಡ ಆರೋಪಿಸಿದರು.ಶುಕ್ರವಾರ ನಗರದ ಚಾಮರಾಜಪುರಂನಲ್ಲಿರುವ ಬಿಜೆಪಿ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೆಎಎಸ್ ಪ್ರೊಬೇಷನರ್ಸ್ ಪರೀಕ್ಷೆಯಲ್ಲಿನ ಅನುವಾದ ದೋಷ, ಕೆಪಿಎಸ್‌ಸಿ ಕೈಗಾರಿಕಾ ವಿಸ್ತರಣಾಧಿಕಾರಿ ನೇಮಕಾತಿಯಲ್ಲಿ ಅಧ್ಯಕ್ಷರ ಕುಟುಂಬದ ಅಕ್ರಮ ಆಯ್ಕೆ, ಪಶುವೈದ್ಯಾಧಿಕಾರಿಗಳ ನೇಮಕಾತಿಯಲ್ಲಿ ೮೦ ಲಕ್ಷ ಲಂಚ ಹಾಗೂ ಕೆಇಎ ಪರೀಕ್ಷೆಗಳಲ್ಲಿ ಬ್ಲೂಟೂತ್ ನಕಲು…

Read More

ಶಾಸಕ ಟಿ.ಎಸ್. ಶ್ರೀವತ್ಸರಿಗೆ “ಜನ ಸೇವಾ ರತ್ನ” ಬಿರುದು

ಮೈಸೂರು; ಬೆಂಗಳೂರಿನ ಯದುಗಿರಿ ಯತಿರಾಜ ಮಠದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮೈಸೂರಿನ ಕೃಷ್ಣರಾಜ ಕ್ಷೇತ್ರದ ಶಾಸಕ ಟಿ.ಎಸ್. ಶ್ರೀವತ್ಸ ಅವರಿಗೆ ಶ್ರೀ ಯದುಗಿರಿ ಯತಿರಾಜ ನಾರಾಯಣ ರಾಮಾನುಜ ಜಿಯರ್ ಸ್ವಾಮಿ ಅವರು “ಜನ ಸೇವಾ ರತ್ನ” ಬಿರುದನ್ನು ನೀಡಿ ಗೌರವಿಸಿದರು.

Read More

ಹಾಸನ ಜಿಲ್ಲಾಧಿಕಾರಿ ಕೆ.ಎಸ್. ಲತಾಕುಮಾರಿ ಮೇಲೆ ಶಾಸಕ ಎಚ್.ಡಿ. ರೇವಣ್ಣ ದರ್ಪ ತೋರಿಸಿರುವುದು ಖಂಡನೀಯ; ದ್ಯಾವಪ್ಪ ನಾಯಕ

ಮೈಸೂರು: ಹಾಸನ ಜಿಲ್ಲಾಧಿಕಾರಿ ಕೆ.ಎಸ್. ಲತಾಕುಮಾರಿ ಅವರ ಮೇಲೆ ಶಾಸಕ ಎಚ್.ಡಿ. ರೇವಣ್ಣ ದರ್ಪ ತೋರಿಸಿ ಮಾತನಾಡಿರುವುದು ಖಂಡನೀಯ’ ಎಂದು ಕರ್ನಾಟಕ ರಾಜ್ಯ ನಾಯಕರ ಹಿತರಕ್ಷಣಾ ವೇದಿಕೆ ಸಂಸ್ಥಾಪಕ ಅಧ್ಯಕ್ಷ ದ್ಯಾವಪ್ಪ ನಾಯಕ ಹೇಳಿದರು.ಬುಧವಾರ ನಗರದ ಜಿಲ್ಲಾ ಪತ್ರಕರ್ತರ ಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪರಿಶಿಷ್ಟ ಪಂಗಡಕ್ಕೆ ಸೇರಿದ ಹಾಸನ ಜಿಲ್ಲಾಧಿಕಾರಿ ಕೆ.ಎಸ್. ಲತಾಕುಮಾರಿ ಅವರ ವಿರುದ್ಧ ಯಾವುದೇ ಸಾಕ್ಷಾಧಾರವಿಲ್ಲದೆ ಸುಳ್ಳು ಆರೋಪಗಳನ್ನು ಶಾಸಕ ಎಚ್.ಡಿ.ರೇವಣ್ಣ ನವರು ಮಾಡುತ್ತಿದ್ದಾರೆ. ಕಾನೂನು ಮತ್ತು ಅಡಳಿತಾತ್ಮಕ ಜವಾಬ್ದಾರಿಯ ಚೌಕಟ್ಟಿನಲ್ಲಿ…

Read More

ಐಕ್ಯತಾ ಸಮಾವೇಶಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ: ಎಸ್ಸಿ ಎಸ್ಟಿ ನೌಕರರ ಸಮನ್ವಯ ಸಮಿತಿ ತಾಲ್ಲೂಕು ಅಧ್ಯಕ್ಷ ಮಹದೇವ್

  ಪಿರಿಯಾಪಟ್ಟಣ ; ಎಸ್ಸಿ, ಎಸ್ಟಿ ಸರ್ಕಾರಿ ನೌಕರರ ಹಕ್ಕುಗಳ ರಕ್ಷಣೆ ಹಾಗೂ ವಿವಿಧ ಸಮಸ್ಯೆಗಳ ಪರಿಹಾರಕ್ಕಾಗಿ ನೌಕರರ ರಾಜ್ಯಮಟ್ಟದ 6 ನೇ ಐಕ್ಯತೆ ಸಮಾವೇಶವನ್ನು ಆ.28 ರಂದು ಬೆಂಗಳೂರಿನ ಅರಮನೆ ಮೈದಾನದ ಶೃಂಗಾರ ಪ್ಯಾಲೇಸ್‌ನಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ರಾಜ್ಯ ಸರ್ಕಾರಿ ಎಸ್ಸಿ, ಎಸ್ಟಿ ನೌಕರರ ಸಮನ್ವಯ ಸಮಿತಿಯ ತಾಲ್ಲೂಕು ಅಧ್ಯಕ್ಷ ಮಹದೇವ್ ತಿಳಿಸಿದರು. ಪಟ್ಟಣದ ತಾಲ್ಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಕಚೇರಿಯಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಎಸ್ಸಿ,ಎಸ್ಟಿ ಸರ್ಕಾರಿ ನೌಕರರ ಮೇಲೆ ತಾರತಮ್ಯ…

Read More