
• ಕೇಂದ್ರ ಸರ್ಕಾರಕ್ಕೆ ರಾಜ್ಯದಲ್ಲಿನ ಬರ ಪರಿಸ್ಥಿತಿಯ ಕುರಿತು ಜ್ಞಾಪನಾ ಪತ್ರವನ್ನು ಸಲ್ಲಿಸಲಾಗುವುದು.
• ರೈತರಿಗೆ ಕಿರುಕುಳ ನೀಡದಂತೆ ಮೈಕ್ರೋಫೈನಾನ್ಸ್ ಸಂಸ್ಥೆಗಳಿಗೆ ಎಚ್ಚರಿಕೆ
ಮೈಸೂರು; ರಾಜ್ಯದಲ್ಲಿ ಮಳೆ ಕೊರತೆಯಿಂದ ಉಂಟಾಗಿರುವ ಬರ ಪರಿಸ್ಥಿತಿ ಹಾಗೂ ಬೆಳೆ ಹಾನಿಯನ್ನು ಪರಿಶೀಲಿಸುವ ಹಿನ್ನೆಲೆಯಲ್ಲಿ ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್ ಅವರು, ಮಂಗಳವಾರ ಮೈಸೂರು ಜಿಲ್ಲೆಯ ವಿವಿಧ ಬರಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ ರೈತರ ಸಮಸ್ಯೆಗಳನ್ನು ಆಲಿಸಿದರು.
ಜಿಲ್ಲೆಯ ಕೆ.ಆರ್.ನಗರ ತಾಲ್ಲೂಕಿನ ಕಂಚುಗಾರನ ಕೊಪ್ಪಲು ಗ್ರಾಮದಲ್ಲಿ ಬರವೀಕ್ಷಣೆಯ ಸಂದರ್ಭದಲ್ಲಿ ರೈತರೊಂದಿಗೆ ನೇರವಾಗಿ ಮಾತುಕತೆ ನಡೆಸಿ, ಮಳೆ ಅಭಾವದಿಂದ ಉಂಟಾಗಿರುವ ಬೆಳೆ ನಷ್ಟ, ಕೃಷಿ ಚಟುವಟಿಕೆಗಳ ಮೇಲಿನ ಪರಿಣಾಮ ಹಾಗೂ ರೈತರು ಎದುರಿಸುತ್ತಿರುವ ಸಂಕಷ್ಟಗಳ ಕುರಿತು ಮಾಹಿತಿ ಪಡೆದರು.
ಮಳೆ ಬಾರದ ಕಾರಣ ರಾಗಿ, ಜೋಳ, ಹೊಗೆಸೊಪುö್ಪ ಸೇರಿದಂತೆ ವಿವಿಧ ಬೆಳೆಗಳು ಮೊಳಕೆ ಹಂತದಲ್ಲೇ ಒಣಗಿ ನಾಶವಾಗಿರುವುದು ಬರದ ತೀವ್ರತೆಯನ್ನು ತೋರಿಸುತ್ತಿದೆ. ಜಿಲ್ಲೆಯಲ್ಲಿ ಬಿತ್ತನೆಯಾಗಿದ್ದ ಬೆಳೆಗಳು ಮಳೆ ಕೊರತೆಯಿಂದ ಹಾನಿಗೊಳಗಾಗಿವೆ ಎಂದು ಅಧಿಕಾರಿಗಳು ಉಪಮುಖ್ಯಮಂತ್ರಿಗಳ ಗಮನಕ್ಕೆ ತಂದರು.
ಬರದಿAದ ಸಂಕಷ್ಟಕ್ಕೆ ಸಿಲುಕಿರುವ ರೈತರಿಗೆ ಸರ್ಕಾರ ಅಗತ್ಯ ನೆರವು ಒದಗಿಸಲಿದೆ ಎಂದು ಡಿಸಿಎಂ ಭರವಸೆ ನೀಡಿದರು. ಬೆಳೆ ನಷ್ಟದ ಕುರಿತು ಸಮಗ್ರ ವರದಿ ಸಿದ್ಧಪಡಿಸಿ ಕೇಂದ್ರ ಸರ್ಕಾರಕ್ಕೆ ಸಲ್ಲಿಸಲಾಗುವುದು. ಎನ್ಡಿಆರ್ಎಫ್ ಅಡಿಯಲ್ಲಿ ಹೆಚ್ಚಿನ ಪರಿಹಾರ ದೊರೆಯುವಂತೆ ಕೇಂದ್ರ ಸರ್ಕಾರಕ್ಕೆ ಮನವಿ ಮಾಡಲಾಗುವುದು ಎಂದು ತಿಳಿಸಿದರು.
ಪ್ರಸ್ತುತ ಇರುವ ಎನ್ಡಿಆರ್ಎಫ್ ನಿಯಮಗಳನ್ನು ಸಡಿಲಗೊಳಿಸಿ, ಬರದಿಂದ ತೀವ್ರವಾಗಿ ಬಾಧಿತವಾಗಿರುವ ಹೆಚ್ಚಿನ ತಾಲೂಕುಗಳಿಗೂ ಪರಿಹಾರ ಒದಗಿಸುವಂತೆ ಕೇಂದ್ರ ಸರ್ಕಾರವನ್ನು ಒತ್ತಾಯಿಸಲಾಗುವುದು ಎಂದರು.
ಬರ ವೀಕ್ಷಣೆಯ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗ್ರಾಮದಲ್ಲಿ ರಾಗಿ ಮತ್ತು ಹೊಗೆಸೊಪುö್ಪ ಬೆಳೆದ ರೈತರ ಜಮೀನುಗಳಿಗೆ ಸ್ಥಳೀಯ ಶಾಸಕ ರವಿಶಂಕರ್ ಅವರೊಂದಿಗೆ ಭೇಟಿ ನೀಡಿ ಪರಿಶೀಲನೆಯನ್ನು ನಡೆಸಿದೆ. ಬೆಳೆ ಬಿತ್ತನೆಯಾಗಿ ಮೊಳಕೆಯೊಡೆದ ಕೆಲವೇ ದಿನಕ್ಕೆ ಮಳೆ ಕೊರತೆ ಎದುರಾದ ಕಾರಣ ಬೆಳೆ ಸಂಪೂರ್ಣವಾಗಿ ನಾಶವಾಗಿದೆ. ಇಡೀ ತಾಲ್ಲೂಕಿನಲ್ಲಿ ಈ ಬಾರಿ ಕೇವಲ ೧೦ ಹೆಕ್ಟೇರ್ ಕೃಷಿ ಪ್ರದೇಶದಲ್ಲಿ ಬಿತ್ತನೆಯಾಗಿದ್ದು, ಸದ್ಯ ಆ ಬೆಳೆ ಕೂಡ ನಾಶವಾಗಿದೆ. ವಸ್ತುಸ್ಥಿತಿಯನ್ನು ಗಮನಿಸಿದಾಗ ಇಡೀ ತಾಲ್ಲೂಕಿನಲ್ಲಿ ಬೆಳೆಹಾನಿ ಉಂಟಾಗಿರುವುದು ಗಮನಕ್ಕೆ ಬಂದಿದೆ. ಈ ಹಿನ್ನೆಲೆ ಕೆ.ಆರ್ ನಗರ ತಾಲ್ಲೂಕನ್ನು ಈಗಾಗಲೇ ಬರಗಾಲಪೀಡಿತ ಪ್ರದೇಶ ಎಂದು ಘೋಷಿಸಲಾಗಿದೆ ಎಂದು ತಿಳಿಸಿದರು.
ಕೇಂದ್ರ ಸರ್ಕಾರಕ್ಕೆ ರಾಜ್ಯದಲ್ಲಿನ ಬರ ಪರಿಸ್ಥಿತಿಯ ಕುರಿತು ಜ್ಞಾಪನಾ ಪತ್ರವನ್ನು ಸಲ್ಲಿಸಲಾಗುವುದು. ಈಗಾಗಲೇ ನಾನು ಮತ್ತು ಮುಖ್ಯಮಂತ್ರಿಗಳು ಕೇಂದ್ರಕ್ಕೆ ಪತ್ರವನ್ನು ಬರೆದಿದ್ದೇವೆ. ಬರಪೀಡಿತ ಘೋಷಣೆಗೆ ಇರುವ ನಿಯಮಗಳನ್ನು ಸಡಿಲಿಸುವಂತೆ ಕೋರಿದ್ದೇವೆ. ನಿಯಮ ಸಡಿಲಿಸಿದರೆ ಹೆಚ್ಚು ತಾಲೂಕುಗಳನ್ನು ಬರಪೀಡಿತ ಪ್ರದೇಶ ಎಂದು ಘೋಷಿಸಬಹುದು. ಆದರೆ ಕೇಂದ್ರದಿAದ ಈವರೆಗೂ ಯಾವುದೇ ಪ್ರತಿಕ್ರಿಯೆ ಬಂದಿಲ್ಲ. ಹಾಗಾಗಿ ವಿಸ್ತöÈತ ಮೆಮೊರಾಂಡಮ್ ಅನ್ನು ಸದ್ಯದಲ್ಲೇ ಸಲ್ಲಿಸುತ್ತೇವೆ. ಅವರ ತಂಡ ಇಲ್ಲಿಗೆ ಬಂದು ಪರಿಶೀಲನೆ ನಡೆಸಿದ ಬಳಿಕ ಹಣ ಬಿಡುಗಡೆಯಾಗುತ್ತದೆ. ನಂತರ ರೈತರಿಗೆ ಸೂಕ್ತ ಪರಿಹಾರವನ್ನು ನೀಡಲಾಗುವುದು ಎಂದು ತಿಳಿಸಿದರು. ಮುಖ್ಯಮಂತ್ರಿಗಳು ಇಂದು ಗದಗ ಜಿಲ್ಲೆಗೆ ಬರಪೀಡಿತ ಪ್ರದೇಶದ ವೀಕ್ಷಣೆಗೆ ತೆರಳಿದ್ದಾರೆ. ನಾನು ಇಂದು ಮತ್ತು ನಾಳೆ ಮೈಸೂರು ಹಾಗೂ ಚಾಮರಾಜನಗರ ಜಿಲ್ಲೆಗಳ ಬರ ವೀಕ್ಷಣೆ ಮಾಡುತ್ತೇನೆ. ಅಂತಿಮವಾಗಿ ನಮ್ಮ ಸರ್ಕಾರ ಚರ್ಚಿಸಿ ರೈತರ ಸಮಸ್ಯೆ ಪರಿಹಾರಕ್ಕೆ ತೀರ್ಮಾನ ತೆಗೆದುಕೊಳ್ಳುತ್ತದೆ. ಕೆ.ಆರ್.ನಗರ ತಾಲೂಕಿನಲ್ಲಿ ಹೊಗೆಸೊಪುö್ಪ, ರಾಗಿ ಹೆಚ್ಚು ಬೆಳೆಯುತ್ತಾರೆ. ಆದರೆ ಎಲ್ಲಾ ಬೆಳೆಗಳು ನಷ್ಟವಾಗಿದೆ. ರೈತರಿಗೆ ಯಾವ ಬೆಳೆಯೂ ಸಿಕ್ಕಿಲ್ಲ. ಈ ಬಗ್ಗೆ ತೀರ್ಮಾನ ತೆಗೆದುಕೊಳ್ಳಲಾಗುವುದು ಎಂದರು.
ರೈತರಿಗೆ ಕಿರುಕುಳ ನೀಡದಂತೆ ಮೈಕ್ರೋಫೈನಾನ್ಸ್ ಸಂಸ್ಥೆಗಳಿಗೆ ಎಚ್ಚರಿಕೆ;
ಮೈಕ್ರೋ ಫೈನಾನ್ಸ್ಗಳ ಹಾವಳಿ ಹೆಚ್ಚಾಗಿರುವ ಬಗ್ಗೆ ಪ್ರತಿಕ್ರಿಯಿಸಿದ ಡಿಸಿಎಂ, ಈಗಾಗಲೇ ನಾವು ಕಾನೂನನ್ನು ಮಾಡಿದ್ದೇವೆ. ಯಾವುದೇ ರೀತಿಯಲ್ಲಿ ರೈತನಿಗೆ ಒತ್ತಾಯ ಮಾಡಬಾರದು. ಅವರಿಗೆ ಕಿರುಕುಳ ನೀಡಬಾರದು ಎಂದು ಸೂಚಿಸಿದ್ದೇನೆ. ಸೂಚನೆ ಮೀರಿದ್ದಲ್ಲಿ ಅವರ ವಿರುದ್ಧ ಕಠಿಣ ಕ್ರಮವನ್ನು ತೆಗೆದುಕೊಳ್ಳಲಾಗುವುದು ಎಂದು ತಿಳಿಸಿದರು.
ಬರ ಪರಿಸ್ಥಿತಿಯಿಂದ ರೈತರು ಆರ್ಥಿಕ ಸಂಕಷ್ಟದಲ್ಲಿರುವ ಸಂದರ್ಭದಲ್ಲಿ ಸಾಲ ವಸೂಲಾತಿ ಹೆಸರಿನಲ್ಲಿ ಮೈಕ್ರೋಫೈನಾನ್ಸ್ ಸಂಸ್ಥೆಗಳು ರೈತರಿಗೆ ಯಾವುದೇ ರೀತಿಯ ಕಿರುಕುಳ ನೀಡಬಾರದು. ಸರ್ಕಾರ ರೂಪಿಸಿರುವ ನಿಯಮಗಳನ್ನು ಉಲ್ಲಂಘಿಸುವ ಸಂಸ್ಥೆಗಳ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದರು.
ರೈತರ ಸಮಸ್ಯೆಗಳನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದ್ದು, ಬರ ಪರಿಸ್ಥಿತಿಯನ್ನು ನಿರಂತರವಾಗಿ ಪರಿಶೀಲಿಸಿ ಅಗತ್ಯ ಪರಿಹಾರ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ಹೇಳಿದರು.
ಈ ಸಂದರ್ಭದಲ್ಲಿ ಕೆ ಆರ್ ನಗರ ತಾಲೂಕಿನ ಶಾಸಕ ಡಿ ರವಿಶಂಕರ್, ಜಿಲ್ಲಾಧಿಕಾರಿ ಜಿ ಲಕ್ಷಿ÷್ಮಕಾಂತ್ ರೆಡ್ಡಿ, ಜಂಟಿ ಕೃಷಿ ನಿರ್ದೇಶಕ ಕೆ.ಹೆಚ್.ರವಿ ಹಾಗೂ ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.