
ನಂಜನಗೂಡು; ಜಿಲ್ಲಾ ಪ್ರವಾಸದ ಎರಡನೇ ದಿನವಾದ ಬುಧವಾರ ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ ಅವರು, ದಕ್ಷಿಣ ಕಾಶಿ ಎಂದು ಪ್ರಸಿದ್ಧಿಯಾಗಿರುವ ಐತಿಹಾಸಿಕ ಶ್ರೀ ಕ್ಷೇತ್ರ ನಂಜನಗೂಡಿನ ಶ್ರೀ ಶ್ರೀಕಂಠೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿ, ದೇವರ ದರ್ಶನ ಪಡೆದರು.
ಶ್ರಿಕಂಠೇಶ್ವರನಿಗೆ ವಿಶೇಷ ಪೂಜೆ ಸಲ್ಲಿಸಿ, ರಾಜ್ಯದ ಜನತೆಗೆ ಒಳಿತಾಗಲಿ ಹಾಗೂ ನಾಡಿನಲ್ಲಿ ಸುಖ-ಶಾಂತಿ ನೆಲೆಸಲಿ ಎಂದು ಪ್ರಾರ್ಥಿಸಿದರು.
ಈ ವೇಳೆ ನಂಜನಗೂಡು ಕ್ಷೇತ್ರದ ಶಾಸಕ ದರ್ಶನ್ ದೃವನಾರಾಯಣ್ ಅವರು ಜೊತೆಗಿದ್ದರು.