Skip to main content

3Kaala News

ಸುಭಾಷಿತ 

ನಾವು ಏನು ಹೇಳುತ್ತೇವೆ ಅನ್ನೋದಕ್ಕಿಂತ, ಹೇಗೆ ಹೇಳುತ್ತೇವೆ ಅನ್ನುವುದೇ ಬದುಕಿನ ಗುಟ್ಟು.
ಮಾತಿನ ಶೈಲಿ ಹೃದಯ ಗೆಲ್ಲಬಹುದು, ಸಮಸ್ಯೆ ಪರಿಹರಿಸಬಹುದು, ಅಥವಾ ಸಂಬಂಧ ಉಳಿಸಬಹುದು.
ಮಾತು ಮನುಷ್ಯನ ಶಕ್ತಿ — ಅದನ್ನು ಜಾಣ್ಮೆಯಿಂದ ಬಳಕೆ ಮಾಡಿದರೆ ಬದುಕು ಸುಲಭವಾಗುತ್ತದೆ

 

Current Weather Card
--°C
Mysore, IN
Loading...
☁️

Live Gold Silver Fuel News Ticker
Loading live rates...

ನಂಜನಗೂಡು ತಾಲ್ಲೂಕಿನಲ್ಲಿ ಬರ ಪರಿಶೀಲನೆ ನಡೆಸಿದ ಉಪಮುಖ್ಯಮಂತ್ರಿ ಡಾ. ಜಿ ಪರಮೇಶ್ವರ


*ಸಾಲ ಮಾಡಿ ಬೆಳೆ ಬೆಳೆದ ರೈತರ ಸಮಸ್ಯೆ ಆಲಿಸಿ ಧೈರ್ಯ ತುಂಬಿದ ಉಪಮುಖ್ಯಮಂತ್ರಿಗಳು
*ಶೀಘ್ರ ಪರಿಹಾರ ಒದಗಿಸುವುದಾಗಿ ರೈತರಿಗೆ ವಾಗ್ಧಾನ

ನಂಜನಗೂಡು; ಮೈಸೂರು ಜಿಲ್ಲೆಯಲ್ಲಿ ಬರಪರಿಸ್ಥಿತಿ ಅವರಲೋಕನವನ್ನು ಮುಂದುವರಿಸಿರುವ ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ ಅವರು, ಬುಧವಾರ ನಂಜನಗೂಡು ತಾಲ್ಲೂಕಿನ ಗಟ್ಟವಾಡಿ ಗ್ರಾಮಕ್ಕೆ ಹಾನಿಗೊಳಗಾದ ರೈತರ ಜಮೀನಿಗೆ ತೆರಳಿ ಬರ ಪರಿಸ್ಥಿತಿಯನ್ನು ಪರಿಶೀಲಿಸಿದರು.
ಗಟ್ಟಿವಾಡಿ ಗ್ರಾಮದಲ್ಲಿ ಮಕ್ಕೆಜೋಳ ಮತ್ತು ಸೂರ್ಯಕಾಂತಿ ಬೆಳೆ ಬೆಳೆದಿದ್ದ ರೈತರಾದ ಶಿವಬಸಪ್ಪ ಮತ್ತು ಮಹದೇವಪ್ಪ ಅವರ ಜಮೀನುಗಳಿಗೆ ಭೇಟಿ ನೀಡಿ ಮಳೆ ಕೊರತೆಯಿಂದಾಗಿ ಬೆಳೆ ಒಣಗಿ ನಾಶವಾಗಿರುವುದನ್ನು ಪರಿಶೀಲಿಸಿದರು. ಈ ವೇಳೆ ಬೆಳೆ ಹಾನಿಯಿಂದ ಸಂಕಷ್ಟಕ್ಕೀಡಾಗಿರುವ ರೈತರು ತಾವು ಸಾಲ ಮಾಡಿ ಬೆಳೆ ಬೆಳೆದಿದ್ದು, ಈಗ ದಿಕ್ಕು ತೋಚದಂತಾಗಿದೆ. ಸರ್ಕಾರ ನೆರವು ನೀಡಬೇಕು ಎಂದು ಉಪಮುಖ್ಯಮಂತ್ರಿಗಳಿಗೆ ಮನವಿ ಮಾಡಿಕೊಂಡರು.
ಕೂಡಲೇ ಡಿಸಿಎಂ ಸ್ಥಳದಲ್ಲಿದ್ದ ಅಧಿಕಾರಿಗಳಿಂದ ತಾಲ್ಲೂಕಿನಲ್ಲಿರುವ ಬರ ಪರಿಸ್ಥಿತಿಯ ಬಗ್ಗೆ ಹೆಚ್ಚಿನ ಮಾಹಿತಿ ಪಡೆದುಕೊಂಡರು. ತಾಲ್ಲೂಕಿನಲ್ಲಿ ವಾರ್ಷಿಕ ೪,೫೦೦ ಹೆಕ್ಟೇರ್ ಪ್ರದೇಶದಲ್ಲಿ ಅಲಸಂದೆ, ೪,೨೦೦ ಹೆಕ್ಟೇರ್ ಪ್ರದೇಶದಲ್ಲಿ ಉದ್ದು, ೩,೫೦೦ ಹೆಕ್ಟೇರ್ ಪ್ರದೇಶದಲ್ಲಿ ಹೆಸರು, ೩,೪೦೦ ಹೆಕ್ಟೇರ್ ಪ್ರದೇಶದಲ್ಲಿ ಮೆಕ್ಕೆಜೋಳ, ೮,೦೦೦ ಹೆಕ್ಟೇರ್ ಪ್ರದೇಶದಲ್ಲಿ ಹತ್ತಿ ಬೆಳೆಯಲಾಗುತ್ತದೆ. ಆದರೆ, ಈ ಬಾರಿ ಮಳೆ ಕೊರತೆಯಿಂದ ತಾಲ್ಲೂಕಿನಲ್ಲಿ ೩,೫೦೦ ಹೆಕ್ಟೇರ್ ಪ್ರದೇಶದಲ್ಲಿ ಮಾತ್ರ ಬಿತ್ತನೆಯಾಗಿದೆ. ಈಗ ಬಿತ್ತನೆಯಾಗಿದ್ದ ಆ ಬೆಳೆಯೂ ಕೂಡ ತೀವ್ರ ಬರದಿಂದ ನಾಶವಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದರು.
ಸಾಲ ಮಾಡಿಕೊಂಡು ಬೆಳೆ ಬೆಳೆದು ಬರದಿಂದ ಸಂಕಷ್ಟಕ್ಕೊಳಗಾಗಿರುವ ರೈತರು ಹಾಗೂ ಅಧಿಕಾರಿಗಳಿಂದ ಸ್ಥಿತಿಗತಿಯ ಬಗ್ಗೆ ಸಂಪೂರ್ಣ ಮಾಹಿತಿ ಪಡೆದ ಉಪಮುಖ್ಯಮಂತ್ರಿಗಳು ಶೀಘ್ರವೇ ಪರಿಹಾರ ನೀಡಲು ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು.
ಈ ಸಂದರ್ಭದಲ್ಲಿ ಶಾಸಕ ದರ್ಶನ್ ಧ್ರುವನಾರಾಯಣ್, ಜಿಲ್ಲಾಧಿಕಾರಿ ಲಕ್ಷಿ÷್ಮÃಕಾಂತ್ ರೆಡ್ಡಿ ಹಾಗೂ ಜಿಲ್ಲಾ ಪಂಚಾಯತ್ ಸಿಇಒ ಯುಕೇಶ್ ಕುಮಾರ್, ನಂಜನಗೂಡು ತಹಶೀಲ್ದಾರರು ಮತ್ತು ಕೃಷಿ ಅಧಿಕಾರಿಗಳು ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.