Skip to main content

3Kaala News

ಸುಭಾಷಿತ 

ನಾವು ಏನು ಹೇಳುತ್ತೇವೆ ಅನ್ನೋದಕ್ಕಿಂತ, ಹೇಗೆ ಹೇಳುತ್ತೇವೆ ಅನ್ನುವುದೇ ಬದುಕಿನ ಗುಟ್ಟು.
ಮಾತಿನ ಶೈಲಿ ಹೃದಯ ಗೆಲ್ಲಬಹುದು, ಸಮಸ್ಯೆ ಪರಿಹರಿಸಬಹುದು, ಅಥವಾ ಸಂಬಂಧ ಉಳಿಸಬಹುದು.
ಮಾತು ಮನುಷ್ಯನ ಶಕ್ತಿ — ಅದನ್ನು ಜಾಣ್ಮೆಯಿಂದ ಬಳಕೆ ಮಾಡಿದರೆ ಬದುಕು ಸುಲಭವಾಗುತ್ತದೆ

 

Current Weather Card
--°C
Mysore, IN
Loading...
☁️

Live Gold Silver Fuel News Ticker
Loading live rates...

ಪಡಿತರ ಅಕ್ಕಿ ಕಾಳಸಂತೆಯಲ್ಲಿ ಮಾರಾಟವಾಗದಂತೆ ಕಠಿಣ ಕ್ರಮ; ಆಹಾರ ಇಲಾಖೆ ಸಚಿವ ರಿಜ್ವಾನ್ ಅರ್ಷದ್


• ಆದಾಯ ತೆರಿಗೆ ಪಾವತಿಸುತ್ತಿದ್ದ ಕಾರಣಕ್ಕೆ ಸುಮಾರು ೪.೫ ಲಕ್ಷ ಪಡಿತರ ಚೀಟಿಗಳನ್ನು ರದ್ದು
ಮೈಸೂರು:
ಆದಾಯ ತೆರಿಗೆ ಪಾವತಿಸುತ್ತಿದ್ದ ಕಾರಣಕ್ಕೆ ಸುಮಾರು ೪.೫ ಲಕ್ಷ ಪಡಿತರ ಚೀಟಿಗಳನ್ನು ರದ್ದುಗೊಳಿಸಲಾಗಿದೆ ಎಂದು ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಸಚಿವ ರಿಜ್ವಾನ್ ಅರ್ಷದ್ ತಿಳಿಸಿದರು.
ಬುಧವಾರ ನಗರದ ಜಿಲ್ಲಾ ಪತ್ರಕರ್ತರ ಭವನದಲ್ಲಿ ಜಿಲ್ಲಾ ಪತ್ರಕರ್ತರ ಸಂಘದಿAದ ಏರ್ಪಡಿಸಲಾಗಿದ್ದ ಮಾಧ್ಯಮ ಸಂವಾದ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ರಾಜ್ಯದಲ್ಲಿ ಪ್ರಸ್ತುತ ಸುಮಾರು ೪.೫ ಕೋಟಿ ಜನರು ಪಡಿತರ ವ್ಯವಸ್ಥೆಯ ವ್ಯಾಪ್ತಿಯಲ್ಲಿದ್ದು, ಮುಂದಿನ ದಿನಗಳಲ್ಲಿ ಈ ಸಂಖ್ಯೆ ೫ ಕೋಟಿ ದಾಟುವ ನಿರೀಕ್ಷೆಯಿದೆ. ಅರ್ಹ ಫಲಾನುಭವಿಗಳಿಗೆ ಇನ್ನೂ ಪಡಿತರ ಚೀಟಿ ಸಿಗದಿರುವ ಬಗ್ಗೆ ಗಮನ ಹರಿಸಲಾಗುವುದು. ಅನರ್ಹರು ಪಡೆದಿರುವ ಪಡಿತರ ಚೀಟಿಗಳನ್ನು ಪತ್ತೆಹಚ್ಚುವ ಕಾರ್ಯವೂ ನಡೆಯುತ್ತಿದೆ ಎಂದು ಹೇಳಿದರು.
ನಗರದಲ್ಲಿ ಶೇ ೫೦ರಷ್ಟು ಹಾಗೂ ಗ್ರಾಮೀಣ ಪ್ರದೇಶದಲ್ಲಿ ಶೇ ೭೫ರಷ್ಟು ಮಂದಿ ಆಹಾರ ಭದ್ರತಾ ಕಾಯ್ದೆ ವ್ಯಾಪ್ತಿಗೆ ಬರಬೇಕಿದೆ. ಈ ನಿಟ್ಟಿನಲ್ಲಿ, ರಾಜ್ಯಕ್ಕೆ ಜನಸಂಖ್ಯೆ ಆಧರಿಸಿ ಪಡಿತರ ಹಂಚಿಕೆ ಮಾಡುವಂತೆ ಕೇಂದ್ರ ಸರ್ಕಾರಕ್ಕೆ ಮನವಿ ಸಲ್ಲಿಸಲಾಗುವುದು. ಪಡಿತರ ಕಾಳಸಂತೆಯಲ್ಲಿ ಮಾರಾಟ ಆಗದಂತೆ ನಿಗಾ ವಹಿಸಲಾಗುವುದು ಎಂದರು.
“ನನಗೆ ಮಹತ್ವದ ಖಾತೆಯ ಜವಾಬ್ದಾರಿ ನೀಡಲಾಗಿದೆ. ಯಾವುದೇ ಲಾಬಿ ಮಾಡದಿದ್ದರೂ ಸಚಿವ ಸ್ಥಾನ ದೊರೆತಿದೆ. ವಿಶೇಷವಾಗಿ ಮಾಜಿ ಸಿಎಂ ಸಿದ್ದರಾಮಯ್ಯನವರು ಮೈಸೂರಿನ ಹುಡುಗನಿಗೆ ಅವಕಾಶ ನೀಡಬೇಕು ಎಂದು ಹೇಳಿದ್ದರಿಂದ ಸಚಿವ ಸ್ಥಾನ ಸಿಕ್ಕಿದೆ. ಸಿದ್ದರಾಮಯ್ಯ ಅವರು ಅನ್ನಭಾಗ್ಯ ಯೋಜನೆ ಆರಂಭಿಸಿದ್ದು ಆಹಾರ ಇಲಾಖೆಯ ಮೂಲಕವೇ. ಇದೀಗ ನನಗೂ ಇದೇ ಇಲಾಖೆಯ ಜವಾಬ್ದಾರಿ ದೊರೆತಿರುವುದು ವಿಶೇಷವಾಗಿದೆ. ಹಾಗಾಗಿ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯಲ್ಲಿ ಅಲ್ಪಾವಧಿಯಲ್ಲೇ ದೊಡ್ಡ ಮಟ್ಟದ ಬದಲಾವಣೆ ತರಲು ಪ್ರಯತ್ನಿಸಲಾಗುವುದು ಎಂದರು.
ಪಡಿತರ ಅಕ್ಕಿ ಕಾಳಸಂತೆಯಲ್ಲಿ ಮಾರಾಟವಾಗದಂತೆ ಕಠಿಣ ಕ್ರಮ ಕೈಗೊಳ್ಳಲಾಗುವುದು. ಬ್ಲಾಕ್ ಮಾರ್ಕೆಟ್ ಗೆ ಕಡಿವಾಣ ಹಾಕಲು ಕಟ್ಟುನಿಟ್ಟಿನ ಕ್ರಮ ಜರುಗಿಸಲಾಗುವುದು. ಪಡಿತರ ಸಾಗಿಸುವ ವಾಹನಗಳಿಗೆ ಕಡ್ಡಾಯವಾಗಿ ಜಿಪಿಎಸ್ ಅಳವಡಿಸುವಂತೆ ಸೂಚನೆ ನೀಡಲಾಗಿದ್ದು, ಈಗಾಗಲೇ ೬೫ರಷ್ಟು ವಾಹನಗಳಿಗೆ ಜಿಪಿಎಸ್ ಅಳವಡಿಕೆ ಪೂರ್ಣಗೊಂಡಿದೆ. ಉಳಿದ ವಾಹನಗಳಿಗೂ ಶೀಘ್ರದಲ್ಲೇ ಅಳವಡಿಸಲಾಗುವುದು. ಗೋದಾಮುಗಳಲ್ಲಿ ಸಿಸಿಟಿವಿ ಕ್ಯಾಮೆರಾ ಅಳವಡಿಸುವಂತೆಯೂ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಹೇಳಿದರು.
ಬಯೋಮೆಟ್ರಿಕ್ ಸಮಸ್ಯೆಗೆ ಸಾಫ್ಟ್ ವೇರ್ ಕಾರಣ;
ನ್ಯಾಯಬೆಲೆ ಅಂಗಡಿಗಳಲ್ಲಿನ ಬಯೋಮೆಟ್ರಿಕ್ ಸಮಸ್ಯೆ ಇರುವುದು ನಿಜ, ಸಾಫ್ಟ್ವೇರ್ ಸಮಸ್ಯೆಯಿಂದ ಸರ್ವರ್ ಡೌನ್ ಆಗುತ್ತಿರುವುದು ಇದಕ್ಕೆ ಪ್ರಮುಖ ಕಾರಣ ಎಂದರು.
ಎರಡು ತಿಂಗಳ ಪಡಿತರವನ್ನು ಒಂದೇ ಬಾರಿ ವಿತರಿಸಿದ ಸಂದರ್ಭದಲ್ಲಿ ಬಯೋಮೆಟ್ರಿಕ್ ವ್ಯವಸ್ಥೆಯನ್ನು ಒಮ್ಮೆಲೆ ಎರಡು ಬಾರಿ ಬಳಸಿದ್ದರಿಂದ ಹಾಗೂ ವ್ಯವಸ್ಥೆಯ ಮೇಲಿನ ಅತಿಯಾದ ಒತ್ತಡದಿಂದ ಸಮಸ್ಯೆ ಉಂಟಾಗಿದೆ. ಸರ್ವರ್ ಗಳನ್ನು ಉನ್ನತೀಕರಿಸುವ ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು.
ನ್ಯಾಯಬೆಲೆ ಅಂಗಡಿ ನಡೆಸುವವರಿಗೆ ಪ್ರಸ್ತುತ ಆದಾಯ ಕಡಿಮೆಯಾಗಿರುವ ಹಿನ್ನೆಲೆಯಲ್ಲಿ, ಅವರ ಆದಾಯ ಹೆಚ್ಚಿಸಲು ಪರ್ಯಾಯ ವ್ಯವಸ್ಥೆ ಕಲ್ಪಿಸುವ ಬಗ್ಗೆ ಚಿಂತನೆ ನಡೆಸಲಾಗುತ್ತಿದೆ. ಎಲ್ಲ ನ್ಯಾಯಬೆಲೆ ಅಂಗಡಿಗಳಲ್ಲೂ ಇ-ಪಿಒಎಸ್, ವಿದ್ಯುನ್ಮಾನ ತೂಕದ ಯಂತ್ರ ಮತ್ತು ಐಅರ್‌ಐಎಸ್ ಸ್ಕಾ÷್ಯನರ್ ಅಳವಡಿಸಲಾಗುವುದು. ಮೊದಲಿಗೆ ಪ್ರಾಯೋಗಿಕವಾಗಿ ಚಿಕ್ಕಬಳ್ಳಾಪುರ ಹಾಗೂ ಚಿತ್ರದುರ್ಗ ಜಿಲ್ಲೆಗಳಲ್ಲಿ ಅನುಷ್ಠಾನಗೊಳಿಸಿ, ನಂತರ ರಾಜ್ಯದಾದ್ಯಂತ ವಿಸ್ತರಿಸಲಾಗುವುದು’ ಎಂದು ಹೇಳಿದರು.

ಬಯೊಮೆಟ್ರಿಕ್ ಜೊತೆಗೆ ಒಟಿಪಿ ಪರಿಶೀಲನಾ ವ್ಯವಸ್ಥೆ ಅಳವಡಿಕೆಗೆ ಚಿಂತಿಸಲಾಗಿದೆ. ನ್ಯಾಯಬೆಲೆ ಅಂಗಡಿಗಳ ಮಾಲೀಕರು ಗೋದಾಮುಗಳಿಂದ ಆಹಾರಧಾನ್ಯ ಎತ್ತುವಳಿ ಮಾಡಿದ ನಂತರ ಫಲಾನುಭವಿಗಳಿಗೆ ಎಸ್‌ಎಂಎಸ್ ಮೂಲಕ ಮಾಹಿತಿ ನೀಡುವ ವ್ಯವಸ್ಥೆ ತರಲಾಗುವುದು. ಬೆಂಗಳೂರು ನಗರದಲ್ಲಿ ವಲಸೆ ಕಾರ್ಮಿಕರಿಗೆ ಪಡಿತರವನ್ನು ಸಮರ್ಪಕವಾಗಿ ವಿತರಿಸಲು ‘ಅನ್ನ ಎಟಿಎಂ’ ಸ್ಥಾಪಿಸಲು ಚಿಂತನೆ ನಡೆದಿದೆ’ ಎಂದು ತಿಳಿಸಿದರು.
ಟ್ರಿಕ್ ಜೊತೆಗೆ ಒಟಿಪಿ ಪರಿಶೀಲನಾ ವ್ಯವಸ್ಥೆ ಅಳವಡಿಕೆಗೆ ಚಿಂತಿಸಲಾಗಿದೆ. ನ್ಯಾಯಬೆಲೆ ಅಂಗಡಿಗಳ ಮಾಲೀಕರು ಗೋದಾಮುಗಳಿಂದ ಆಹಾರಧಾನ್ಯ ಎತ್ತುವಳಿ ಮಾಡಿದ ನಂತರ ಫಲಾನುಭವಿಗಳಿಗೆ ಎಸ್‌ಎಂಎಸ್ ಮೂಲಕ ಮಾಹಿತಿ ನೀಡುವ ವ್ಯವಸ್ಥೆ ತರಲಾಗುವುದು. ಬೆಂಗಳೂರು ನಗರದಲ್ಲಿ ವಲಸೆ ಕಾರ್ಮಿಕರಿಗೆ ಪಡಿತರವನ್ನು ಸಮರ್ಪಕವಾಗಿ ವಿತರಿಸಲು ‘ಅನ್ನ ಎಟಿಎಂ’ ಸ್ಥಾಪಿಸಲು ಚಿಂತನೆ ನಡೆದಿದೆ’ ಎಂದು ತಿಳಿಸಿದರು.
ನ್ಯಾಯಬೆಲೆ ಅಂಗಡಿಗಳ ಮೂಲಕ ತೊಗರಿಬೆಳೆ, ಸೂರ್ಯಕಾಂತಿ ಎಣ್ಣೆ, ಉಪುö್ಪ, ಸಕ್ಕರೆ ಒಳಗೊಂಡ ‘ಇಂದಿರಾ ಕಿಟ್’ ವಿತರಿಸಲು ಕರೆಯಲಾಗಿದ್ದ ಟೆಂಡರ್ ಅನ್ನು, ಬೆಲೆ ಹೆಚ್ಚಳದ ಕಾರಣದಿಂದ ರದ್ದುಪಡಿಸಲಾಗಿದೆ. ಆ ಪ್ರಸ್ತಾವವನ್ನು ಮರುಪರಿಶೀಲಿಸಿ ಮುಂದಿನ ಕ್ರಮ ಕೈಗೊಳ್ಳಲಾಗುವುದು. ಕಿಟ್ ವಿತರಣೆಗೆ ಮುನ್ನ ವಿತರಣಾ ಜಾಲವನ್ನೂ ಸಜ್ಜುಗೊಳಿಸಬೇಕಾಗಿದೆ ಎಂದು ಸಚಿವರು ಪ್ರತಿಕ್ರಿಯಿಸಿದರು.
ಮನೆಯಲ್ಲಿ ಒಬ್ಬ ವ್ಯಕ್ತಿ ತೆರಿಗೆ ಪಾವತಿಸುತ್ತಾನೆ ಎಂಬ ಕಾರಣಕ್ಕೆ ಇಡೀ ಕುಟುಂಬದ ಸದಸ್ಯರ ಪಡಿತರ ಚೀಟಿ ರದ್ದು ಮಾಡುವುದು ಸರಿಯಾದ ಕ್ರಮವಲ್ಲ. ಈ ಬಗ್ಗೆ ಸೂಕ್ತ ಮಾನದಂಡಗಳನ್ನು ಅನುಸರಿಸಲು ಕ್ರಮ ಕೈಗೊಳ್ಳುತ್ತೇವೆ. ಆದ್ಯತಾ ಪಡಿತರ ಚೀಟಗಳನ್ನು ಪಡೆಯಲು ಇರುವ ಮಾನದಂಡಗಳನ್ನು ಪರಿಷ್ಕರಿಸಲು ಚಿಂತನೆ ನಡೆದಿದೆ ಎಂದು
ಹೇಳಿದರು.
ಆಹಾರ ಇಲಾಖೆಯಲ್ಲಿ ಸಿಬ್ಬಂದಿ ಕೊರತೆ ಇದೆ. ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಸೂಕ್ತ ಕ್ರಮ ಕೈಗೊಳ್ಳಲಾಗುವುದು.
ಸಿಕ್ಕಿರುವ ಅವಧಿಯಲ್ಲಿ ಆಹಾರ ಇಲಾಖೆಯಲ್ಲಿ ಗಣನೀಯ ಪ್ರಮಾಣದ ಅಭಿವೃದ್ಧಿ ಹಾಗೂ ಬದಲಾವಣೆ ತರಲು ಶ್ರಮಿಸುತ್ತೇನೆ” ಎಂದು ಹೇಳಿದರು. ಈ ವೇಳೆ ಜಿಲ್ಲಾ ಪತ್ರಕರ್ತರ ಸಂಘದ ಅಧ್ಯಕ್ಷ ಕೆ.ದೀಪಕ್, ಪ್ರಧಾನ ಕಾರ್ಯದರ್ಶಿ ನಾರಾಯಣ, ಸಂಘದ ಪದಾಧಿಕಾರಿಗಳು ಮತ್ತಿತರರು ಉಪಸ್ಥಿತರಿದ್ದರು.
ಸುತ್ತೂರು ಮಠಕ್ಕೆ ಭೇಟಿ; ಇದಕ್ಕೂ ಮುನ್ನಾ ಸಚಿವ ರಿಜ್ವಾನ್ ಅರ್ಷದ್ ಅವರು ಮೈಸೂರಿನ ಚಾಮಂಡಿಬೆಟ್ಟದ ತಪ್ಪಲಿನಲ್ಲಿರುವ ಸುತ್ತೂರು ಮಠಕ್ಕೆ ಭೇಟಿ ನೀಡಿ, ಮಠದ ಪೀಠಾಧಿಪತಿಗಳಾದ ಶ್ರೀಶಿವರಾತ್ರಿದೇಶಿಕೇಂದ್ರಸ್ವಾಮಿಯವರಿAದ ಆಶೀರ್ವಾದ ಪಡೆದು, ಕೆಲಕಾಲ ಸಮಲೋಚನೆ ನಡೆಸಿದರು.