Skip to main content

3Kaala News

ಸುಭಾಷಿತ 

ಪಕ್ಕದಲ್ಲಿರುವವನ ತಟ್ಟೆಯಲ್ಲಿ ಏನಿದೆ ಅಂತ ಯಾವತ್ತೂ ಇಣುಕಿ ನೋಡಬೇಡ. ಕಾರಣ ಅಲ್ಲಿ ಜಾಸ್ತಿಯಿದ್ದರೆ, ನಿನಗೆ ಸಂಕಟವಾಗುತ್ತದೆ.ಅಲ್ಲಿ ಕಡಿಮೆ ಇದ್ದರೆ, ನಿನಗೆ ಅಹಂಕಾರ ಬರುತ್ತದೆ.ಎರಡೂ ಒಳ್ಳೆಯದಲ್ಲ.ನಮ್ಮ ತಟ್ಟೆಯನ್ನು ನಾವು ನೋಡಿಕೊಂಡಿದ್ದರೆ, ಸಿಗುವ ಸಂತೋಷವೇ ಬೇರೆ

Current Weather Card
--°C
Mysore, IN
Loading...
☁️

Live Gold Silver Fuel News Ticker
Loading live rates...

ಶ್ರೀಕಂಠೇಶ್ವರನ ದರ್ಶನ ಪಡೆದ ಡಿಸಿಎಂ ಜಿ.ಪರಮೇಶ್ವರ


ನಂಜನಗೂಡು
; ಜಿಲ್ಲಾ ಪ್ರವಾಸದ ಎರಡನೇ ದಿನವಾದ ಬುಧವಾರ ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ ಅವರು, ದಕ್ಷಿಣ ಕಾಶಿ ಎಂದು ಪ್ರಸಿದ್ಧಿಯಾಗಿರುವ ಐತಿಹಾಸಿಕ ಶ್ರೀ ಕ್ಷೇತ್ರ ನಂಜನಗೂಡಿನ ಶ್ರೀ ಶ್ರೀಕಂಠೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿ, ದೇವರ ದರ್ಶನ ಪಡೆದರು.
ಶ್ರಿಕಂಠೇಶ್ವರನಿಗೆ ವಿಶೇಷ ಪೂಜೆ ಸಲ್ಲಿಸಿ, ರಾಜ್ಯದ ಜನತೆಗೆ ಒಳಿತಾಗಲಿ ಹಾಗೂ ನಾಡಿನಲ್ಲಿ ಸುಖ-ಶಾಂತಿ ನೆಲೆಸಲಿ ಎಂದು ಪ್ರಾರ್ಥಿಸಿದರು.
ಈ ವೇಳೆ ನಂಜನಗೂಡು ಕ್ಷೇತ್ರದ ಶಾಸಕ ದರ್ಶನ್ ದೃವನಾರಾಯಣ್ ಅವರು ಜೊತೆಗಿದ್ದರು.