
ಸೆ.೫ರಂದು ಚಿಣ್ಣರ ಛದ್ಮವೇಶ ಸ್ಪರ್ಧೆ
ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಮಕ್ಕಳಿಗೆ ವಿಶೇಷ ಸ್ಪರ್ಧೆ
ಮೈಸೂರು: ಶ್ರೀ ಕೃಷ್ಣ ಮಿತ್ರ ಮಂಡಳಿ ಹಾಗೂ ಶ್ರೀ ಕೃಷ್ಣ ಟ್ರಸ್ಟ್ ವತಿಯಿಂದ ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಚಿಣ್ಣರ ಛದ್ಮವೇಶ ಸ್ಪರ್ಧೆಯನ್ನು ಸೆ. ೫ರಂದು ಆಯೋಜಿಸಲಾಗಿದೆ.
ಮೈಸೂರಿನ ಸರಸ್ವತಿಪುರಂನಲ್ಲಿರುವ ಶ್ರೀ ಕೃಷ್ಣ ಸಭಾಭವನದಲ್ಲಿ ಶನಿವಾರ ಮಧ್ಯಾಹ್ನ ೧ ಗಂಟೆಗೆ ರಾಧಾ, ಕೃಷ್ಣ ಹಾಗೂ ಬಲರಾಮ ವೇಷಗಳಲ್ಲಿ ೧೦ ವರ್ಷದೊಳಗಿನ ಮಕ್ಕಳಿಗಾಗಿ ಸ್ಪರ್ಧೆ ನಡೆಯಲಿದೆ.
ಕಾಣಿಯೂರು ಮಠದಶ್ರೀ ವಿದ್ಯಾವಲ್ಲಭತೀರ್ಥ ಶ್ರೀಪಾದಂಗಳವರ ದಿವ್ಯ ಸಾನ್ನಿಧ್ಯದಲ್ಲಿ ಕಾರ್ಯಕ್ರಮ ನಡೆಯಲಿದ್ದು, ಸ್ಪರ್ಧೆಯಲ್ಲಿ ಭಾಗವಹಿಸುವ ಮಕ್ಕಳಿಗೆ ಆಕರ್ಷಕ ಬಹುಮಾನಗಳನ್ನು ನೀಡಲಾಗುವುದು ಎಂದು ಶ್ರೀ ಕೃಷ್ಣ ಮಿತ್ರ ಆಯೋಜಕರು ತಿಳಿಸಿದ್ದಾರೆ.
ಅದೇ ದಿನ ಸಂಜೆ ೪ ಗಂಟೆಗೆ ರಾಜಬೀದಿಗಳಲ್ಲಿ ಶ್ರೀಕೃಷ್ಣನ ಮೆರವಣಿಗೆ ಹಾಗೂ ದಹಿ ಉತ್ಸವ ಕಾರ್ಯಕ್ರಮವೂ ನಡೆಯಲಿದ್ದು, ಭಕ್ತರು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸುವಂತೆ ಸಂಘಟಕರು ಮನವಿ ಮಾಡಿದ್ದಾರೆ.
ಹೆಚ್ಚಿನ ಮಾಹಿತಿಗಾಗಿ ರಾಘವೇಂದ್ರ ರಾವ್ ಅವರ ಮೊ. ೯೯೪೫೫ ೧೧೭೭೦ನ್ನು ಸಂಪರ್ಕಿಸಬಹುದಾಗಿದೆ.