ಶ್ರೀಕಂಠೇಶ್ವರ ದೇವಸ್ಥಾನದಲ್ಲಿ ಅವ್ಯವಹಾರ ನಡೆದಿದೆ ಎಂದು ಶಾಸಕರು ಮಾಡಿರುವ ಆರೋಪದಲ್ಲಿ ಯಾವುದೇ ಹುರುಳಿಲ್ಲ; ಮಾಜಿ ಶಾಸಕ ಹರ್ಷವರ್ಧನ್
ನಂಜನಗೂಡು; ಶ್ರೀಕಂಠೇಶ್ವರಸ್ವಾಮಿ ದೇವಾಲಯದಲ್ಲಿ 2024-25ನೇ ಸಾಲಿನಲ್ಲಿ ಅವ್ಯವಹಾರವಾಗಿದೆ ಎಂದು ಶಾಸಕ ದರ್ಶನ್ ಧ್ರುವನಾರಾಯಣ ಅವರು ಆರೋಪಿಸಿರುವುದರಲ್ಲಿ ವಾಸ್ತವವಾಗಿ ಯಾವುದೇ ಹುರುಳಿಲ್ಲ ಎಂದು ಮಾಜಿ ಶಾಸಕ ಬಿ.ಹರ್ಷವರ್ಧನ್ ಹೇಳಿದರು. ಅವರು ಗುರುವಾರ ನಗರದ ಪತ್ರಕರ್ತರ ಭವನದಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದರು. ಕ್ಷೇತ್ರದ ಶಾಸಕ ದರ್ಶನ್ ಧ್ರುವನಾರಾಯಣ್ ಅವರು ಇತ್ತೀಚೆಗೆ ದೇವಾಲಯದಲ್ಲಿ ಸಭೆ ನಡೆಸಿ ದೇವಸ್ಥಾನದಲ್ಲಿ 2024-25ನೇ ಸಾಲಿನಲ್ಲಿ 4ಕೋಟಿ ಅಂದಾಜು ಮೊತ್ತದ ಅವ್ಯವಹಾರ ನಡೆದಿದೆ ಎಂದು ಆರೋಪಿಸಿದ್ದರು. ಆದರೆ ಈ ಸಂಬಂಧ ಯಾವುದೇ ದಾಖಲೆಗಳನ್ನು ಬಿಡುಗಡೆ…