Skip to main content

3Kaala News

ಸುಭಾಷಿತ 

ನಾವು ಏನು ಹೇಳುತ್ತೇವೆ ಅನ್ನೋದಕ್ಕಿಂತ, ಹೇಗೆ ಹೇಳುತ್ತೇವೆ ಅನ್ನುವುದೇ ಬದುಕಿನ ಗುಟ್ಟು.
ಮಾತಿನ ಶೈಲಿ ಹೃದಯ ಗೆಲ್ಲಬಹುದು, ಸಮಸ್ಯೆ ಪರಿಹರಿಸಬಹುದು, ಅಥವಾ ಸಂಬಂಧ ಉಳಿಸಬಹುದು.
ಮಾತು ಮನುಷ್ಯನ ಶಕ್ತಿ — ಅದನ್ನು ಜಾಣ್ಮೆಯಿಂದ ಬಳಕೆ ಮಾಡಿದರೆ ಬದುಕು ಸುಲಭವಾಗುತ್ತದೆ

 

Current Weather Card
--°C
Mysore, IN
Loading...
☁️

Live Gold Silver Fuel News Ticker
Loading live rates...

ಯುವಜನರಲ್ಲಿ ಮಾದಕ ವಸ್ತುಗಳ ಸೇವನೆಯ ದುಷ್ಪರಿಣಾಮಗಳ ಬಗ್ಗೆ ಜಾಗೃತಿ ಮೂಡಿಸಿ: ಎಎಸ್ಪಿ ಎಲ್ ನಾಗೇಶ್


ಮೈಸೂರು: ಮಾದಕ ವಸ್ತುಗಳ ಸೇವನೆಯ ದುಷ್ಪರಿಣಾಮಗಳ ಬಗ್ಗೆ ಯುವ ಜನರಲ್ಲಿ ಜಾಗೃತಿ ಮೂಡಿಸಲು ಕಾರ್ಯಕ್ರಮಗಳನ್ನು ಆಯೋಜಿಸಿ ಎಂದು ಅಪರ ಪೊಲೀಸ್ ಅಧೀಕ್ಷಕ ಎಲ್ ನಾಗೇಶ್ ತಿಳಿಸಿದರು.
ಗುರುವಾರ ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ಎನ್ ಕಾಡ್9 (ಓಅಔಖಆ) ಸಭೆ ನಡೆಸಿ ಮಾತನಾಡಿದ ಅವರು, ಸಮಾಜ ಕಲ್ಯಾಣ, ಪದವಿ ಪೂರ್ವ ಶಿಕ್ಷಣ ಇಲಾಖೆಗಳು, ಕಾಲೇಜು ಶಿಕ್ಷಣ ಇಲಾಖೆಯಲ್ಲಿ ವಿದ್ಯಾರ್ಥಿಗಳು ಮಾದಕ ವಸ್ತು ಸೇವನೆ ಮಾಡುತ್ತಿದ್ದಲ್ಲಿ ಪತ್ತೆ ಹಚ್ಚಿ ಅವರನ್ನು ಮಾದಕ ವಸ್ತುಗಳಿಂದ ದೂರವಿಡಲು ಯೋಜನೆ ರೂಪಿಸಿ ಎಂದರು.
ಕೃಷಿ ಭೂಮಿಯಲ್ಲಿ ಬೆಳೆಯುವ ಬೆಳೆಗಳ ಜೊತೆ ಗಾಂಜಾ ಗಿಡಗಳನ್ನು ಬೆಳೆಯುವ ಸಾಧ್ಯತೆಯಿರುತ್ತದೆ. ಕೃಷಿ ಇಲಾಖೆ ಅಧಿಕಾರಿಗಳು ಬೆಳೆ ಸಮೀಕ್ಷೆ ನಡೆಯುವ ಸಂದರ್ಭದಲ್ಲಿ ಪರಿಶೀಲನೆ ನಡೆಸಿ ವರದಿ ನೀಡುವಂತೆ ತಿಳಿಸಿದರು.
ಅರಣ್ಯ ಇಲಾಖೆ ಅಧಿಕಾರಿಗಳು ಕಡಾಂಚಿನಲ್ಲಿರುವವರು ಗಾಂಜಾ ಗಿಡಗಳನ್ನು ಬೆಳೆದರೆ ಪರಿಶೀಲಿಸಿ ವರದಿ ನೀಡಬೇಕು. ಜಿ.ಎಸ್.ಟಿ ಅಧಿಕಾರಿಗಳು ತಮ್ಮ ವ್ಯಾಪ್ತಿಯಲ್ಲಿ ಸಗಟು ಸಾಗಾಣಿಕೆಗಳ ಬಗ್ಗೆ ನಿಗಾ ವಹಿಸಬೇಕು. ಔಷದ ನಿಯಂತ್ರಕರು ವೈದ್ಯರ ಸಲಹಾ ಚೀಟಿ ಇಲ್ಲದೆ ಮತ್ತು ಬರುವ ಔಷದಿಗಳ ಮಾರಾಟ ಕಂಡು ಬಂದಲ್ಲಿ ಕ್ರಮ ಕೈಗೊಂಡು ನಕಾಡ್9 ಸಮಿತಿಗೆ ವರದಿವ ನೀಡುವಂತೆ ತಿಳಿಸಿದರು.
ಸಭೆಯಲ್ಲಿ ಆರೋಗ್ಯ ಇಲಾಖೆಯ ಜಿಲ್ಲಾ ಮಾನಸಿಕ ಕಾರ್ಯಕ್ರಮ ಅನುಷ್ಠಾನಾಧಿಕಾರಿ ಡಾ: ನಾಗೇಶ್ ಪಿ.ಆರಾಧ್ಯ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಸಹಾಯಕ ನಿರ್ದೇಶಕಿ ನಿರ್ಮಲ ಎಸ್.ಹಚ್ ಸೇರಿದಂತೆ ಇನ್ನಿತರೆ ಅಧಿಕಾರಿಗಳು ಉಪಸ್ಥಿತರಿದ್ದರು