Skip to main content

3Kaala News

ಸುಭಾಷಿತ 

ನಾವು ಏನು ಹೇಳುತ್ತೇವೆ ಅನ್ನೋದಕ್ಕಿಂತ, ಹೇಗೆ ಹೇಳುತ್ತೇವೆ ಅನ್ನುವುದೇ ಬದುಕಿನ ಗುಟ್ಟು.
ಮಾತಿನ ಶೈಲಿ ಹೃದಯ ಗೆಲ್ಲಬಹುದು, ಸಮಸ್ಯೆ ಪರಿಹರಿಸಬಹುದು, ಅಥವಾ ಸಂಬಂಧ ಉಳಿಸಬಹುದು.
ಮಾತು ಮನುಷ್ಯನ ಶಕ್ತಿ — ಅದನ್ನು ಜಾಣ್ಮೆಯಿಂದ ಬಳಕೆ ಮಾಡಿದರೆ ಬದುಕು ಸುಲಭವಾಗುತ್ತದೆ

 

Current Weather Card
--°C
Mysore, IN
Loading...
☁️

Live Gold Silver Fuel News Ticker
Loading live rates...

ಕೊನೆಗೂ ಈ ಬಾರಿಯ ದಸರಾದಲ್ಲಿ ಭಾಗವಹಿಸಲು ಗಜಪಡೆಯ ಮಾಜಿ ಕ್ಯಾಪ್ಟನ್ ಅಭಿಮನ್ಯುಗೆ ಸಿಕ್ತು ಅವಕಾಶ


*ಜಂಬೂಸವಾರಿಯ ನಿಶಾನೆ ಆನೆಯಾಗಿ ಭಾಗವಹಿಸಲಿದ್ದಾನೆ ಅಭಿಮನ್ಯು ; ಈ ಕುರಿತು ಅರಣ್ಯ ಸಚಿವರಿಂದಲೇ ಹೊರಬಿತ್ತು ಮಾಹಿತಿ
ಮೈಸೂರು: ಈ ಬಾರಿ ಅದ್ಧೂರಿಯಾಗಿ ನಡೆಯಲಿರುವ ವಿಶ್ವ ವಿಖ್ಯಾತ ನಾಡ ಹಬ್ಬ ಮೈಸೂರು ದಸರಾದಲ್ಲಿ ಗಜಪಡೆಯ ಮಾಜಿ ಕ್ಯಾಪ್ಟನ್ ಅಭಿಮನ್ಯ ಭಾಗವಹಿಸಬೇಕು, ದಸರಾಗೆ ಅಭಿಮನ್ಯವನ್ನು ಕರೆತರಬೇಕೆಂಬ ಜನರ ಆಗ್ರಹಕ್ಕೆ ರಾಜ್ಯ ಸರ್ಕಾರ, ಅರಣ್ಯ ಇಲಾಖೆಯ ಕೊನೆಗೂ ಮಣಿದಿದೆ. ಸಾಮಾಜಿಕ ಜಾಲತಾಣ ಬಳಕೆದಾರರು ಹಾಗೂ ಜನರ ತೀವ್ರ ಆಗ್ರಹ ಹಾಗೂ ಪ್ರತಿಭಟನೆಯಿಂದ ಎಚ್ಚೆತ್ತುಕೊಂಡಿರುವ ರಾಜ್ಯ ಸರ್ಕಾರ, ಅರಣ್ಯ ಇಲಾಖೆ, ಸೇವೆಯಿಂದ ನಿವೃತ್ತಿಯಾಗಿರುವ ಗಜಪಡೆ ಮಾಜಿ ಕ್ಯಾಪ್ಟನ್ ಅಭಿಮನ್ಯುಗೆ ಈ ಬಾರಿಯ ದಸರಾ ಮಹೋತ್ಸವದಲ್ಲಿ ನಿಶಾನೆ ಆನೆಯಾಗಿ ಭಾಗಿಯಾಗಲು ಅರಣ್ಯ ಅವಕಾಶ ನೀಡಿದೆ.
ಈ ಬಗ್ಗೆ ಸಾಮಾಜಿಕ ಜಾಲ ತಾಣ ಎಕ್ಸ್ನಲ್ಲಿ ಪೋಸ್ಟ್ ಮಾಡಿರುವ ಅರಣ್ಯ ಸಚಿವ ರಾಮಲಿಂಗಾರೆಡ್ಡಿ, ”ಮೈಸೂರು ದಸರಾ 2026: ಅಭಿಮನ್ಯುವಿನ ಅಮೂಲ್ಯ ಸೇವೆಗೆ ಸರ್ಕಾರದ ವಿಶೇಷ ಗೌರವ! ಹಲವು ವರ್ಷಗಳ ಕಾಲ ಚಿನ್ನದ ಅಂಬಾರಿಯನ್ನು ಗಾಂಭೀರ್ಯದಿAದ ಹೊತ್ತು ಕರುನಾಡಿನ ಜನರ ಮನಗೆದ್ದ ಅಭಿಮನ್ಯುವಿನ ಸುದೀರ್ಘ ಸೇವೆಯನ್ನು ಗೌರವಿಸಿ, ಈ ಬಾರಿಯ ಮೈಸೂರು ದಸರಾ-2026ರ ಜಂಬೂಸವಾರಿಯಲ್ಲಿ ಅಭಿಮನ್ಯುವಿಗೆ ಸಕಲ ಸರ್ಕಾರಿ ಗೌರವಗಳನ್ನು ನೀಡಿ, `ನಿಶಾನೆ ಆನೆ’ಯನ್ನಾಗಿ ಗೌರವಪೂರ್ವಕವಾಗಿ ಮುಂಚೂಣಿಯಲ್ಲಿ ಮುನ್ನಡೆಸಲು ಅರಣ್ಯ ಇಲಾಖೆಗೆ ಸೂಚಿಸಿದ್ದೇನೆ. ದಸರಾ ಗಜಪಡೆಯ ಹಿರಿಮೆ ಅಭಿಮನ್ಯು, ಎಂದೆAದಿಗೂ ನಮ್ಮ ಹೆಮ್ಮೆ!” ಎಂದು ತಿಳಿಸಿದ್ದಾರೆ.
ಅಲ್ಲದೆ ಪ್ರಕಟಣೆ ಹೊರಡಿಸಿರುವ ಅರಣ್ಯ ಸಚಿವರು, ಮೈಸೂರು ದಸರಾ ಕರ್ನಾಟಕದ ನಾಡಹಬ್ಬವಾಗಿದೆ. ನಾಡಿನ ಕಲೆ, ಸಂಸ್ಕöÈತಿ, ಪರಂಪರೆ ಹಾಗೂ ವೈಭವವನ್ನು ವಿಶ್ವದಾದ್ಯಂತ ಸಾರುವ ಐತಿಹಾಸಿಕ ಉತ್ಸವವಾಗಿದೆ. ಮೈಸೂರು ದಸರಾ ಮಹೋತ್ಸವದ ಪ್ರಮುಖ ಆಕರ್ಷಣೆಯಾದ ಜಂಬೂಸವಾರಿ ಉತ್ಸವದಲ್ಲಿ ದಸರಾ ಗಜಪಡೆಯ ಆನೆಗಳು ವರ್ಷಗಳಿಂದಲೂ ಪ್ರಮುಖ ಪಾತ್ರವಹಿಸುತ್ತಾ ಬಂದಿವೆ ಎಂದಿದ್ದಾರೆ.
ಈ ಮಹತ್ವದ ದಸರಾ ಪರಂಪರೆಯಲ್ಲಿ ಅಭಿಮನ್ಯು ಆನೆಯ ಸೇವೆ ಅತ್ಯಂತ ವಿಶೇಷ ಹಾಗೂ ಸ್ಮರಣೀಯವಾಗಿದೆ. ಹಲವು ವರ್ಷಗಳ ಕಾಲ ದಸರಾ ಮಹೋತ್ಸವದಲ್ಲಿ ಭಾಗವಹಿಸಿ, ಅಂಬಾರಿ ಹೊರುವ ಜವಾಬ್ದಾರಿಯನ್ನು ಅತ್ಯಂತ ಶಿಸ್ತು, ಧೈರ್ಯ ಹಾಗೂ ಯಶಸ್ವಿಯಾಗಿ ನಿರ್ವಹಿಸುವ ಮೂಲಕ ಅಭಿಮನ್ಯು ನಾಡಿನ ಜನರ ಪ್ರೀತಿ ಮತ್ತು ಗೌರವಕ್ಕೆ ಪಾತ್ರವಾಗಿದೆ ಎಂದು ಹೇಳಿದ್ದಾರೆ.
ಅಭಿಮನ್ಯುವಿನ ದೀರ್ಘಕಾಲದ ಅಮೂಲ್ಯ ಸೇವೆಯನ್ನು ಸ್ಮರಿಸುವ ಉದ್ದೇಶದಿಂದ ಇತ್ತೀಚೆಗೆ ಆಯೋಜಿಸಲಾದ ಅಭಿಮನ್ಯು ಆನೆಯ ಬೀಳ್ಕೊಡುಗೆ/ಗೌರವ ಸಮಾರಂಭವು ಅತ್ಯಂತ ಯಶಸ್ವಿಯಾಗಿ ಹಾಗೂ ಅಚ್ಚುಕಟ್ಟಾಗಿ ನೆರವೇರಿದ್ದು, ಸಾರ್ವಜನಿಕರು ಹಾಗೂ ದಸರಾ ಅಭಿಮಾನಿಗಳಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಈ ಕಾರ್ಯಕ್ರಮವು ಅಭಿಮನ್ಯುವಿನ ಸೇವೆಗೆ ಸಲ್ಲಿಸಿದ ಗೌರವದ ಪ್ರತೀಕವಾಗಿದೆ. ಇದರ ಮುಂದುವರೆದ ಭಾಗವಾಗಿ, ಮೈಸೂರು ದಸರಾ-2026ರ ಜಂಬೂಸವಾರಿ ಉತ್ಸವದಲ್ಲಿಯೂ ಅಭಿಮನ್ಯುವನ್ನು ಹೆಮ್ಮೆಯಿಂದ ಹಾಗೂ ಗೌರವಪೂರ್ವಕವಾಗಿ ಗಜಪಡೆಯೊಂದಿಗೆ ನಿಶಾನೆ ಆನೆಯಾಗಿ ಈ ವರ್ಷದ ಉತ್ಸವದಲ್ಲಿ ಘನ ಉಪಸ್ಥಿತಿ ವಹಿಸಿ ವಿಶೇಷ ಸ್ಥಾನ ಕಲ್ಪಿಸುವುದು ಸೂಕ್ತವಾಗಿದೆ ಎಂದಿದ್ದಾರೆ.
ಅಭಿಮನ್ಯುವಿನAತಹ ದಸರಾ ಪರಂಪರೆಯ ಹೆಮ್ಮೆಯ ಆನೆಯ ಹಲವು ವರ್ಷಗಳ ಸೇವೆಯನ್ನು ಗೌರವಿಸುವ ನಿಟ್ಟಿನಲ್ಲಿ 2026ರ ಜಂಬೂಸವಾರಿಯಲ್ಲಿ ಗೌರವಪೂರ್ವಕವಾಗಿ ಉಪಸ್ಥಿತಿಗೊಳಿಸುವುದರಿಂದ ದಸರಾ ಮಹೋತ್ಸವದ ವೈಭವ ಹಾಗೂ ಪರಂಪರೆಗೆ ಮತ್ತಷ್ಟು ಮೆರುಗು ಬರಲಿದೆ. ಆದ್ದರಿಂದ, ಮೈಸೂರು ದಸರಾ-2026ರ ಜಂಬೂಸವಾರಿ ಉತ್ಸವದಲ್ಲಿ ಅಭಿಮನ್ಯು ಆನೆಯನ್ನು ನಿಶಾನೆ ಆನೆಯನ್ನಾಗಿಸಿ, ಇದರ ಸೇವೆಯನ್ನು ಸ್ಮರಿಸುವಂತೆ ಸೂಕ್ತ ವ್ಯವಸ್ಥೆ ಹಾಗೂ ಕ್ರಮ ಕೈಗೊಳ್ಳಲು ಕೋರಿದೆ ಎಂದು ಪ್ರಕಟಣೆ ಮೂಲಕ ಅಧಿಕಾರಿಗಳಿಗೆ ಸಚಿವ ರಾಮಲಿಂಗಾರೆಡ್ಡಿ ಸೂಚಿಸಿದ್ದಾರೆ.
ನಾಗರಹೊಳೆ ರಾಷ್ಟಿçÃಯ ಉದ್ಯಾನವನದಲ್ಲಿ ಆಗಸ್ಟ್ 26ರಂದು ನಡೆದ ಗಜಪಯಣ ಕಾರ್ಯಕ್ರಮದ ವೇಳೆ ಅಭಿಮನ್ಯುಗೆ ಬೀಳ್ಕೊಡುಗೆ ನೀಡಲಾಗಿತ್ತು. ಆದರೆ ದಸರಾದಲ್ಲಿ ಅಭಿಮನ್ಯುಗೆ ಅವಕಾಶ ನೀಡುವುದಿಲ್ಲವೇ ಎಂದು ಅಭಿಮಾನಿಗಳು ಹಾಗೂ ಸಾರ್ವಜನಿಕರು, ಅರಣ್ಯ ಇಲಾಖೆ ವಿರುದ್ಧ ಬೇಸರ ಹೊರಹಾಕಿದ್ದರು. ಅಲ್ಲದೆ ಪ್ರತಿಭಟನೆ ಕೂಡ ನಡೆಸಿದ್ದರು.