
ಮೈಸೂರು: ವಿಶ್ವವಿಖ್ಯಾತ ನಾಡ ಹಬ್ಬ ಮೈಸೂರು ದಸರಾದ ಪ್ರಮುಖ ಆಕರ್ಷಣೆಯಲ್ಲಿ ಒಂದಾದ ಯುವ ದಸರಾ 2026ರ ಉದ್ಘಾಟನಾ ಕಾರ್ಯಕ್ರಮಕ್ಕೆ ಭಾರತದ ಖ್ಯಾತ ನೃತ್ಯಗಾರ, ನೃತ್ಯ ನಿರ್ದೇಶಕ, ನಟ ಹಾಗೂ ಚಿತ್ರ ನಿರ್ದೇಶಕರಾದ ಪ್ರಭುದೇವ ಅವರನ್ನು ಅಧಿಕೃತವಾಗಿ ಆಹ್ವಾನಿಸಲಾಗಿದೆ.
ಯುವ ದಸರಾ ಸಮಿತಿಯ ಕಾರ್ಯಧ್ಯಕ್ಷ ಸೋಮಶೇಖರ್, ಕಾರ್ಯದರ್ಶಿಗಳಾದ ಅರುಣ್ ಹಾಗೂ ಸತ್ಯಮೂರ್ತಿ ಅವರು ಚೆನ್ನೆöÊನಲ್ಲಿರುವ ಪ್ರಭುದೇವ ಅವರ ನಿವಾಸಕ್ಕೆ ತೆರಳಿ, ಮೈಸೂರು ದಸರಾದಲ್ಲಿ ನಡೆಯುವ ಯುವ ದಸರಾ ಕಾರ್ಯಕ್ರಮಕ್ಕೆ ಆಗಮಿಸುವಂತೆ ಅಧಿಕೃತವಾಗಿ ಆಹ್ವಾನಿಸಿದರು.
ಆಹ್ವಾನವನ್ನು ಸಂತೋಷದಿAದ ಸ್ವೀಕರಿಸಿದ ಪ್ರಭುದೇವ ಅವರು, ಯುವ ದಸರಾ ಕಾರ್ಯಕ್ರಮಕ್ಕೆ ಆಗಮಿಸಲು ತಮ್ಮ ಒಪ್ಪಿಗೆಯನ್ನು ವ್ಯಕ್ತಪಡಿಸಿದ್ದಾರೆ.
ಅವರ ಆಗಮನವು ಯುವ ದಸರಾ ಕಾರ್ಯಕ್ರಮದ ಮೆರುಗನ್ನು ಮತ್ತಷ್ಟು ಹೆಚ್ಚಿಸಲಿದೆ.