
ಮೈಸೂರು: ಶ್ರಾವಣ ಮಾಸದ ನಾಲ್ಕನೇ ಶ್ರಾವಣ ಶನಿವಾರದ ಅಂಗವಾಗಿ ನಗರದ ಇರ್ವಿನ್ ರಸ್ತೆಯಲ್ಲಿರುವ ಪಂಚಮುಖಿ ಆಂಜನೇಯ ಸ್ವಾಮಿ ದೇವಾಲಯದಲ್ಲಿ ವಿಶೇಷ ಧಾರ್ಮಿಕ ಕಾರ್ಯಕ್ರಮಗಳು ಭಕ್ತಿಭಾವದಿಂದ ನೆರವೇರಿದವು.
ಮುಂಜಾನೆಯಿAದಲೇ ಪಂಚಮುಖಿ ಆಂಜನೇಯ ಸ್ವಾಮಿಗೆ ಅಭ್ಯಂಜನ ತೈಲಾಭಿಷೇಕ, ಪಂಚಾಮೃತ ಅಭಿಷೇಕ, ವಿಶೇಷ ಹೂವಿನ ಅಲಂಕಾರ ಹಾಗೂ ವಿವಿಧ ಪೂಜಾ ಕೈಂಕರ್ಯಗಳನ್ನು ನಡೆಸಲಾಯಿತು. ದೇವಾಲಯದ ಆವರಣದಲ್ಲಿ ಸ್ವಾಮಿಯ ಪ್ರಕಾರ ಉತ್ಸವವೂ ವಿಜೃಂಭಣೆಯಿAದ ಜರುಗಿತು.
ಕಾರ್ಯಕ್ರಮದಲ್ಲಿ ಭಾಗವಹಿಸಿ ಭಕ್ತಾದಿಗಳಿಗೆ ಪ್ರಸಾದ ವಿತರಿಸಲಾಯಿತು. ಶ್ರಾವಣ ಶನಿವಾರದ ವಿಶೇಷ ಪೂಜೆಯಲ್ಲಿ ಭಾಗವಹಿಸಿದ ಭಕ್ತರು ಆಂಜನೇಯ ಸ್ವಾಮಿಯ ದರ್ಶನ ಪಡೆದು ಧಾರ್ಮಿಕ ಸಂಭ್ರಮದಲ್ಲಿ ಪಾಲ್ಗೊಂಡರು.