Skip to main content

3Kaala News

ಸುಭಾಷಿತ 

ನಾವು ಏನು ಹೇಳುತ್ತೇವೆ ಅನ್ನೋದಕ್ಕಿಂತ, ಹೇಗೆ ಹೇಳುತ್ತೇವೆ ಅನ್ನುವುದೇ ಬದುಕಿನ ಗುಟ್ಟು.
ಮಾತಿನ ಶೈಲಿ ಹೃದಯ ಗೆಲ್ಲಬಹುದು, ಸಮಸ್ಯೆ ಪರಿಹರಿಸಬಹುದು, ಅಥವಾ ಸಂಬಂಧ ಉಳಿಸಬಹುದು.
ಮಾತು ಮನುಷ್ಯನ ಶಕ್ತಿ — ಅದನ್ನು ಜಾಣ್ಮೆಯಿಂದ ಬಳಕೆ ಮಾಡಿದರೆ ಬದುಕು ಸುಲಭವಾಗುತ್ತದೆ

 

Current Weather Card
--°C
Mysore, IN
Loading...
☁️

Live Gold Silver Fuel News Ticker
Loading live rates...

ವಿದ್ಯಾರ್ಥಿಗಳು ತಮ್ಮ ಜ್ಞಾನವನ್ನು ಹೆಚ್ಚಿಸಿಕೊಂಡು ದೇಶದ ಅಭಿವೃದ್ಧಿಗೆ ಶ್ರಮಿಸಬೇಕು ; ಡಾ. ಟಿ.ರಮೇಶ್


ಮೈಸೂರು; ವಿದ್ಯಾರ್ಥಿಗಳು ತಮ್ಮ ಜ್ಞಾನವನ್ನು ಹೆಚ್ಚಿಸಿಕೊಂಡು ದೇಶದ ಅಭಿವೃದ್ಧಿಗೆ ಶ್ರಮಿಸಬೇಕು ಎಂದು ಮೈಸೂರು ವಿಶ್ವವಿದ್ಯಾನಿಲಯದ ಅರ್ಥಶಾಸ್ತç ಅಧ್ಯಾಪಕರ ಸಂಘದ ಅಧ್ಯಕ್ಷ ಡಾ. ಟಿ ರಮೇಶ್ ಹೇಳಿದರು.
ಮಂಗಳವಾರ ನಗರದ ಮಹಾರಾಣಿ ಮಹಿಳಾ ಕಲಾ ಕಾಲೇಜಿ ನಲ್ಲಿ ಮೈಸೂರು ವಿಶ್ವವಿದ್ಯಾನಿಲಯ ಅರ್ಥಶಾಸ್ತç ಅಧ್ಯಾಪಕರ ಸಂಘ ಹಾಗೂ ಮಹಾರಾಣಿ ಕಲಾ ಮಹಿಳಾ ಕಾಲೇಜಿನ ಅರ್ಥಶಾಸ್ತç ವಿಭಾಗದ ಸಹಯೋಗದಲ್ಲಿ ಅರ್ಥಶಾಸ್ತçದ ವಿಷಯದಲ್ಲಿ ನೂರಕ್ಕೆ ನೂರು ಅಂಕಗಳನ್ನು ಪಡೆದ ವಿದ್ಯಾರ್ಥಿಗಳಿಗೆ ಅಭಿನಂದನಾ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದ ಅವರು, ಭಾರತ ದೇಶ ಅತಿ ಹೆಚ್ಚು ಯುವಕರನ್ನು ಹೊಂದಿರುವ ದೇಶ. ಇಂತಹ ದೇಶದಲ್ಲಿ ಯುವ ಜನಾಂಗ ಅಥವಾ ಯುವ ವಿದ್ಯಾರ್ಥಿಗಳು ತಮ್ಮ ಜ್ಞಾನವನ್ನು ಹೆಚ್ಚಿಸಿಕೊಂಡು, ಸಮಾಜದ ಈ ದೇಶದ ಅಭಿವೃದ್ಧಿಗೆ ಶ್ರಮಿಸಬೇಕು. ಈ ದೇಶದ ಅಭಿವೃದ್ಧಿಯಲ್ಲಿ ಯುವ ಪ್ರತಿಭೆಗಳ ಪಾತ್ರ ಸಾಕಷ್ಟಿದೆ. ಹಾಗಾಗಿ ಇತರೆ ಚಟುವಟಿಕೆಗಳಲ್ಲಿ ತೊಡಗದೆ ಓದಿನಲ್ಲಿ ಆಸಕ್ತಿಯನ್ನು ತೋರಿ, ತಮ್ಮ ವ್ಯಕ್ತಿತ್ವವನ್ನ ಬೆಳೆಸಿಕೊಂಡು ಸಮಾಜದ ಋಣವನ್ನು ತೀರಿಸಬೇಕು ಎಂದು ತಿಳಿಸಿದರು.
ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದ ನಿವೃತ್ತ ಪ್ರಾಂಶುಪಾಲ ಪ್ರೊ.ಪುಟ್ಟಶೆಟ್ಟಿ ಮಾತನಾಡಿ, ಇಂದಿನ ಯುವ ಪ್ರತಿಭೆಗಳು ತಮ್ಮ ಕೌಶಲ್ಯ ಅಭಿವೃದ್ಧಿ ಹೆಚ್ಚಿಸಿಕೊಂಡು, ಅತೀ ಹೆಚ್ಚು ಅಂಕಗಳನ್ನ ಪಡೆದು ಪದವಿಗಳನ್ನು ಮುಗಿಸಿ, ಭವಿಷ್ಯದಲ್ಲಿ ಸಂಶೋಧನೆ ಮಾಡಿ ಸಮಾಜಕ್ಕೆ ಕೊಡುಗೆಯನ್ನು ನೀಡಬೇಕು. ಪ್ರಸ್ತುತದಲ್ಲಿ ದೇಶದ ಆರ್ಥಿಕ ಬೆಳವಣಿಗೆಯು ನಿರಂತರವಾಗಿ ಬೆಳವಣಿಗೆತ್ತಾ ಸಾಗುತ್ತಿದೆ. ಆದ್ದರಿಂದ ಇಂತಹ ಪ್ರತಿಭಾನ್ವಿತ ವಿದ್ಯಾರ್ಥಿಗಳು ವರ್ಷದಿಂದ ವರ್ಷಕ್ಕೆ ಹೆಚ್ಚಾಗಿ ಒಳ್ಳೆಯ ಉದ್ಯೋಗಗಳನ್ನು ಪಡೆದು, ದೇಶದ ಆರ್ಥಿಕ ಅಭಿವೃದ್ಧಿಗೆ ತಾವೆಲ್ಲರೂ ಶ್ರಮಿಸುವಂತೆ ತಿಳಿಸಿದರು
ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಪ್ರಾಂಶುಪಾಲರಾದ ಡಾ.ಅನಿತಾ ಎಂ ಎಸ್ ಮಾತನಾಡಿ, ಪ್ರಸ್ತುತ ಸ್ಪರ್ಧಾ ಪ್ರಪಂಚದಲ್ಲಿ ವಿದ್ಯಾರ್ಥಿಗಳು ಸಾಕಷ್ಟು ಹೋರಾಟವನ್ನು ಮಾಡಬೇಕಾಗಿದೆ. ಆ ಹಿನ್ನಲೆಯಲ್ಲಿ ತಾವು ಶೈಕ್ಷಣಿಕವಾಗಿ ತುಂಬಾ ಸಾಧನೆಯನ್ನು ಮಾಡಬೇಕು. ಆಗಿದ್ದಾಗ ಮಾತ್ರ ಒಂದು ಗುಣಮಟ್ಟದ ಜೀವನವನ್ನು ಕಟ್ಟಿಕೊಳ್ಳಲು ಸಾಧ್ಯ ಎಂದರು.
ಕಾರ್ಯಕ್ರಮದಲ್ಲಿ ಮಹಾರಾಣಿ ಕಲಾ ಕಾಲೇಜಿನ ಅರ್ಥಶಾಸ್ತç ವಿಭಾಗದ ಮುಖ್ಯಸ್ಥರಾದ ರತ್ನ ಬಿ.ಎಸ್, ಮೈಸೂರು ವಿಶ್ವವಿದ್ಯಾನಿಲಯದ ಅರ್ಥಶಾಸ್ತç ಅಧ್ಯಾಪಕರ ಸಂಘದ ಕಾರ್ಯದರ್ಶಿ ಡಾ. ಕಿರಣ್ ಕುಮಾರ್ ಸಿ.ಆರ್, ಡಾ. ಲೋಕೇಶ್ , ಡಾ. ಮಾದಪ್ಪ, ಡಾ. ವಿಜಯಲಕ್ಷಿ÷್ಮ, ಸಹಾಯಕ ಪ್ರಾಧ್ಯಾಪಕಿ ಡಾ. ಮಾನಸ, ಸಹಾಯಕ ಪ್ರಾಧ್ಯಾಪಕ ಉಪಸ್ಥಿರಿದ್ದರು.