
ಮೈಸೂರು; ಡಿಮೆನ್ಶಿಯಾದಿಂದ ಬಳಲುತ್ತಿರುವ ವ್ಯಕ್ತಿಗಳು ಹಾಗೂ ಅವರ ಕುಟುಂಬ ಸದಸ್ಯರಿಗೆ ಅಗತ್ಯವಾದ ಬೆಂಬಲ, ಕಾಳಜಿ ಮತ್ತು ಗೌರವ ದೊರೆಯುವಂತೆ ಡಿಮೆನ್ಶಿಯಾ ಸ್ನೇಹಿ ಮೈಸೂರು” ನಿರ್ಮಿಸುವ ಅಗತ್ಯವಿದೆ ಎಂದು ಎಆರ್‌ಡಿಎಸ್‌ಐನ ಮೈಸೂರು ಶಾಖೆ ಅಧ್ಯಕ್ಷ ಡಾ. ಹನುಮಂತಾಚಾರ್ ಜೋಶಿ ಹೇಳಿದರು.
ಅಲ್ಜೆöÊಮರ್ ಮತ್ತು ಸಂಬAಧಿತ ಕಾಯಿಲೆಗಳ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಉದ್ದೇಶದಿಂದ ಅಲ್ಜೆöÊಮರ್‌ಸ್ ಅಂಡ್ ರಿಲೇಟೆಡ್ ಡಿಸಾರ್ಡರ್ಸ್ ಸೊಸೈಟಿ ಆಫ್ ಇಂಡಿಯಾ , ಮೈಸೂರು ಶಾಖೆ ವತಿಯಿಂದ ನಗರದ ವಿವೇಕ ಆಸ್ಪತ್ರೆಯಲ್ಲಿ ಆಯೋಜಿಸಲಾಗಿರುವ ವಿಶ್ವ ಅಲ್ಜೆöÊಮರ್ ತಿಂಗಳು ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು,
ಡಿಮೆನ್ಶಿಯಾ ಎನ್ನುವುದು ವಯಸ್ಸಾಗುವಿಕೆಯ ಸಹಜ ಪ್ರಕ್ರಿಯೆಯಲ್ಲ. ಆರಂಭಿಕ ಹಂತದಲ್ಲಿಯೇ ರೋಗಲಕ್ಷಣಗಳನ್ನು ಗುರುತಿಸಿ ಸೂಕ್ತ ವೈದ್ಯಕೀಯ ಸಲಹೆ ಮತ್ತು ಚಿಕಿತ್ಸೆ ಪಡೆಯುವುದು ಅತ್ಯಂತ ಮುಖ್ಯವಾಗಿದೆ ಎಂದು ಹೇಳಿದರು.
ರೋಟರಿ ಐವರಿ ಸಿಟಿ, ಮೈಸೂರು ಅಧ್ಯಕ್ಷ ಡಾ. ಜಿ. ಎಲ್. ಶೇಖರ್ ಮಾತನಾಡಿ, ನಮ್ಮ ದೇಶದಲ್ಲಿ ಡಿಮೆನ್ಶಿಯಾ ಪ್ರಮುಖ ಸಮಸ್ಯೆಯಾಗಿ ಬೆಳೆಯುತ್ತಿದೆ ಎಂದು ಹೇಳಿದರು.
ಅನೇಕ ಹಿರಿಯ ನಾಗರಿಕರಿಗೆ ಈ ಕಾಯಿಲೆಗೆ ಹೇಗೆ ಚಿಕಿತ್ಸೆ ಪಡೆಯಬೇಕು, ಕಾಯಿಲೆಯ ಪ್ರಗತಿಯನ್ನು ನಿಧಾನಗೊಳಿಸಲು ಯಾವ ರೀತಿಯ ಕ್ರಮಗಳನ್ನು ಅನುಸರಿಸಬೇಕು ಎಂಬುದರ ಬಗ್ಗೆ ಸರಿಯಾದ ಅರಿವು ಇಲ್ಲ. ಆದ್ದರಿಂದ ಜಾಗೃತಿ ಕಾರ್ಯಕ್ರಮಗಳು ಅತ್ಯಂತ ಅಗತ್ಯವಾಗಿವೆ. ಇಂತಹ ಕಾರ್ಯಕ್ರಮಗಳು ಜನರಿಗೆ ರೋಗದ ಲಕ್ಷಣಗಳನ್ನು ಅರ್ಥಮಾಡಿಕೊಳ್ಳಲು ಹಾಗೂ ಈ ಕಾಯಿಲೆಗಳನ್ನು ಎದುರಿಸಲು ಮುಂಚಿತವಾಗಿ ಸಿದ್ಧರಾಗಲು ಸಹಾಯ ಮಾಡುತ್ತವೆ ಎಂದು ಹೇಳಿದರು.
ಡಿಮೆನ್ಶಿಯಾದ ಆರಂಭಿಕ ಲಕ್ಷಣಗಳನ್ನು ಗುರುತಿಸುವುದು, ಸಮಯಕ್ಕೆ ಸರಿಯಾಗಿ ವೈದ್ಯಕೀಯ ಸಲಹೆ ಪಡೆಯುವುದು ಹಾಗೂ ರೋಗಿಗಳ ಆರೈಕೆಯಲ್ಲಿ ಕುಟುಂಬದ ಸದಸ್ಯರು ವಹಿಸಬೇಕಾದ ಪಾತ್ರದ ಕುರಿತು ಹೆಚ್ಚಿನ ಜಾಗೃತಿ ಮೂಡಿಸುವ ಅಗತ್ಯವಿದೆ ಎಂದು ಹೇಳಿದರು.