Skip to main content

3Kaala News

ಸುಭಾಷಿತ 

ನಾವು ಏನು ಹೇಳುತ್ತೇವೆ ಅನ್ನೋದಕ್ಕಿಂತ, ಹೇಗೆ ಹೇಳುತ್ತೇವೆ ಅನ್ನುವುದೇ ಬದುಕಿನ ಗುಟ್ಟು.
ಮಾತಿನ ಶೈಲಿ ಹೃದಯ ಗೆಲ್ಲಬಹುದು, ಸಮಸ್ಯೆ ಪರಿಹರಿಸಬಹುದು, ಅಥವಾ ಸಂಬಂಧ ಉಳಿಸಬಹುದು.
ಮಾತು ಮನುಷ್ಯನ ಶಕ್ತಿ — ಅದನ್ನು ಜಾಣ್ಮೆಯಿಂದ ಬಳಕೆ ಮಾಡಿದರೆ ಬದುಕು ಸುಲಭವಾಗುತ್ತದೆ

 

Current Weather Card
--°C
Mysore, IN
Loading...
☁️

Live Gold Silver Fuel News Ticker
Loading live rates...

ಲಕ್ಷಾಂತರ ಜನರ ಜೀವನ ಬೆಳಗುತ್ತಿರುವ ಸುತ್ತೂರು ಶ್ರೀಮಠ; ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ

ಮೈಸೂರು; ಸುತ್ತೂರು ಶ್ರೀಮಠವು ಸೇವಾಕಾರ್ಯಗಳ ಮೂಲಕ ಲಕ್ಷಾಂತರ ಜನರ ಜೀವನ ಬೆಳಗುತ್ತಿರುವ ಬೃಹತ್ ಆಲದಮರವಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದರು.ಬುಧವಾರ ಮೈಸೂರಿನ ರಾಮಕೃಷ್ಣನಗರದ ವಾಸು ಬಡಾವಣೆಯಲ್ಲಿ ನಿರ್ಮಿಸಿರುವ ಜೆಎಸ್‌ಎಸ್ ಹಿರಿಯರ ಮನೆ ಹಾಗೂ ಶಿವ ದೇವಾಲಯದ ಉದ್ಘಾಟಿಸಿ ಮಾತನಾಡಿದ ಅವರು, ಧಾರ್ಮಿಕ, ಆಧ್ಯಾತ್ಮಿಕ ಕಾರ್ಯಗಳ ಜೊತೆಗೆ ವಿವಿಧ ಕ್ಷೇತ್ರಗಳಲ್ಲಿ ಸೇವೆಯನ್ನು ಸಲ್ಲಿಸುತ್ತಿರುವ ಶಕ್ತಿಪೀಠ ಸುತ್ತೂರು ಶ್ರೀಮಠ. ರಾಜೇಂದ್ರ ಶ್ರೀಗಳು ಬಿತ್ತಿದ ಬೀಜ ಇಂದು ಬೃಹತ್ತ ಹೆಮ್ಮರವಾಗಿ ಬೆಳೆದು, ದೇಶ-ವಿದೇಶಗಳಿಗೂ ತನ್ನ ಸೇವಾ ಕಾರ್ಯವನ್ನು ವಿಸ್ತರಿಸಿದೆ….

Read More

೮೦ ಕಸ ಸುರಿಯವ ತಾಣವನ್ನು ಸುಂದರವಾಗಿ ಪರಿವರ್ತನೆ ಮಾಡಿ ಉತ್ತಮ ಸೇವೆ ಸಲ್ಲಿಸಿದವರಿಗೆ ಸನ್ಮಾನ

ಮೈಸೂರು; ಮೈಸೂರು ಮಹಾನಗರ ಪಾಲಿಕೆಯ ವತಿಯಿಂದ ೮೦ನೇ ಸ್ವಾತಂತ್ರೊ÷್ಯÃತ್ಸವದ ಅಂಗವಾಗಿ ನಗರದ ೯ ವಲಯಗಳಲ್ಲಿ ಗುರುತಿಸಲಾದ ೮೦ ಕಸ ಸುರಿಯುವ ಅತಿಸೂಕ್ಷ÷್ಮ ಸ್ಥಳಗಳನ್ನು ಸ್ವಚ್ಛಗೊಳಿಸಿ ಸುಂದರ ತಾಣಗಳಾಗಿ ಪರಿವರ್ತಿಸಲಾಗಿದೆ. ಈ ಅಭಿಯಾನದಲ್ಲಿ ಉತ್ತಮವಾಗಿ ಕಾರ್ಯನಿರ್ವಹಿಸಿದ ಅಧಿಕಾರಿಗಳು, ಪರಿಸರ ಅಭಿಯಂತರರು, ಆರೋಗ್ಯ ನಿರೀಕ್ಷಕರು, ಮೇಲ್ವಿಚಾರಕರು, ಪೌರಕಾರ್ಮಿಕರು ಹಾಗೂ ಚಾಲಕರನ್ನು ಪಾಲಿಕೆ ಸಭಾಂಗಣದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಸನ್ಮಾನಿಸಲಾಯಿತು.ಅಧಿಕಾರಿ ವರ್ಗದಲ್ಲಿ ವಲಯ ಕಚೇರಿ ೪ರ ಗೋಕುಲಂ ಸ್ಮಶಾನ ಜಿವಿಪಿಯು ಪ್ರಥಮ ಬಹುಮಾನ, ವಲಯ ಕಚೇರಿ ೭ರ ಸಿ.ವಿ. ರಸ್ತೆ ಹಾಗೂ ವಲಯ…

Read More

ಐಶ್ವರ್ಯ ರಂಗರಾಜನ್‌ರಿ0ದ “ರಾಗ ರಂಜನಿ” ಕಾರ್ಯಕ್ರಮ.

ಮೈಸೂರು: ಶ್ರೀ ಕೃಷ್ಣ ಟ್ರಸ್ಟ್ ಹಾಗೂ ಶ್ರೀ ಕೃಷ್ಣ ಮಿತ್ರ ಮಂಡಳಿ ಹಾಗೂ ಚಾತುರ್ಮಾಸ್ಯ ಸಮಿತಿವತಿಯಿಂದ ಉಡುಪಿ ಶ್ರೀ ಕಾಣಿಯೂರು ಮಠದ ಪೀಠಾಧಿಪತಿಗಳಾದ ಶ್ರೀ ವಿದ್ಯಾವಲ್ಲಭತೀರ್ಥಸ್ವಾಮ್ಭಿಜಿಯವರ 35ನೇ ಚಾತುರ್ಮಾಸ್ಯ ಅಂಗವಾಗಿ ಐಶ್ವರ್ಯ ರಂಗರಾಜನ್ ಇವರಿಂದ ರಾಗ ರಂಜನಿ ಕಾರ್ಯಕ್ರಮವನ್ನು ನಗರದ ಸರಸ್ವತಿಪುರಂನಲ್ಲಿರುವ ಶ್ರೀ ಕೃಷ್ಣದಾಮದಲ್ಲಿ ಸೆ. 10 ರಂದು ಆಯೋಜಿಸಲಾಗಿದೆ. ಸಂಜೆ 7 ಗಂಟೆಗೆ ನಡೆಯಲಿರುವ ಈ ಕಾರ್ಯಕ್ರಮಕ್ಕೆ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಕಲಾವಿದರನ್ನು ಪ್ರೋತ್ಸಾಹಿಸಬೇಕೆಂದು ಶ್ರೀ ಕೃಷ್ಣ ಟ್ರಸ್ಟ್ ಚಾತುರ್ಮಾಸ್ಯ ಸಮಿತಿಯ ಖಜಾಂಚಿ ಶ್ರೀಕಾಂತ್…

Read More

ಬಾದರಾಯಣ ಆಚಾರ್ಯರಿಗೆ ` ಶ್ರೀ ವಿದ್ಯಾಮಾನ್ಯತೀರ್ಥರ ಸ್ಮರಣಾ ಪ್ರಶಸ್ತಿ’

ಪ್ರಶಸ್ತಿ ಪುರಸ್ಕöÈತರ ವಿವರ :ಹಿರಿಯ ವಿದ್ವಾಂಸ ಬಾದರಾಯಣಾಚಾರ್ಯರು ಮುಂಬೈನ ಶ್ರೀ ಸತ್ಯಧ್ಯಾನ ವಿದ್ಯಾಪೀಠದಲ್ಲಿ ದಶಕಗಳ ಕಾಲ ಶಾಸ್ತç ವಿಚಾರ ಅಧ್ಯಯನ ಮಾಡಿದ್ದಾರೆ. ಕುಲಪತಿ, ಮಹಾ ಮಹೋಪಾಧ್ಯಾಯ ಮಾಹುಲಿ ವಿದ್ಯಾಸಿಂಹಾಚಾರ್ಯರ ಗರಡಿಯಲ್ಲಿ ಪಳಗಿ, ಶ್ರೀ ಸುಧಾ ಪಂಡಿತರಾಗಿ ಹೊರ ಹೊಮ್ಮಿದ್ದಾರೆ. ಸಂಸ್ಕöÈತ ಮತ್ತು ಆಂಗ್ಲ ಭಾಷಾ ಎಂಎ ಪದವೀಧರರು. ಶ್ರೀ ಸತ್ಯಾತ್ಮತೀರ್ಥ ಸ್ವಾಮಿಗಳ ವಿಶೇಷ ಅನುಗ್ರಹಕ್ಕೆ ಪಾತ್ರರಾಗಿದ್ದಾರೆ. ಭಾಗವತ ಪ್ರವಚನಕ್ಕೆ ಖ್ಯಾತರಾಗಿರುವ ಇರು,ಈವರೆಗೆ ನೂರಾರು ಬಾರಿ ಭಾಗವತ ಪ್ರವಚನ ಸಪ್ತಾಹ ನಡೆಸಿದ ಹಿರಿಮೆ ಪಡೆದಿದ್ದಾರೆ. ನಾಡಿನಾದ್ಯಂತ ವಿವಿಧ ಮಠ,…

Read More

ಸೆಸ್ಕ್ ಎಂಡಿಯಾಗಿ ಎನ್. ಚಂದ್ರಶೇಖರ ನೇಮಕ

ಮೈಸೂರು:ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತ(ಸೆಸ್ಕ್) ವ್ಯವಸ್ಥಾಪಕ ನಿರ್ದೇಶಕರಾಗಿ ಐಎಎಸ್ ಅಧಿಕಾರಿ ಎನ್. ಚಂದ್ರಶೇಖರ ಅವರನ್ನು ಸರ್ಕಾರ ನೇಮಕ ಮಾಡಿದೆ. ಈ ಹಿಂದೆ ಸೆಸ್ಕ್ ವ್ಯವಸ್ಥಾಪಕ ನಿರ್ದೇಶಕರಾಗಿದ್ದ ಎಂ. ಎಸ್. ಅರ್ಚನಾ ಅವರು ವರ್ಗಾವಣೆ ಹೊಂದಿರುವ ಹಿನ್ನೆಲೆಯಲ್ಲಿ, ರಾಜ್ಯ ಸರ್ಕಾರ ಬೆಂಗಳೂರಿನ ಮೂಲಸೌಕರ್ಯ ಅಭಿವೃದ್ಧಿ, ಬಂದರು ಮತ್ತು ಒಳನಾಡು ಜಲ ಸಾರಿಗೆ ಇಲಾಖೆಯ ಜಂಟಿ ಕಾರ್ಯದರ್ಶಿಯಾಗಿ ಕಾರ್ಯನಿರ್ವಹಿಸುತ್ತಿದ್ದ ಎನ್. ಚಂದ್ರಶೇಖರ್ ಅವರನ್ನು, ಸೆಸ್ಕ್ ವ್ಯವಸ್ಥಾಪಕ ನಿರ್ದೇಶಕರಾಗಿ ನೇಮಿಸಿದೆ.

Read More

ಸರ್ಕಾರಿ ಶಾಲೆಯ ಅಭಿವೃದ್ಧಿಗೆ ಶಿಕ್ಷಕರು ಮತ್ತು ಪೋಷಕರ ಸಹಕಾರ ಅಗತ್ಯವಾಗಿದೆ: ಸುರೇಶ್

ಪಿರಿಯಾಪಟ್ಟಣ : ಸರ್ಕಾರಿ ಶಾಲೆಯ ಅಭಿವೃದ್ಧಿಗೆ ಶಿಕ್ಷಕರು ಮತ್ತು ಪೋಷಕರ ಸಹಕಾರ ಅಗತ್ಯವಾಗಿದೆ ಶಾಲಾ ಅಭಿವೃದ್ಧಿ ಸಮಿತಿ ಅಧ್ಯಕ್ಷ ಸುರೇಶ್ ತಿಳಿಸಿದರು.  ತಾಲೂಕಿನ ಹೊನ್ನೇನಹಳ್ಳಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಗ್ರಾಮಸ್ಥರ ಸಮ್ಮುಖದಲ್ಲಿ ನೂತನ ಶಾಲಾ ಅಭಿವೃದ್ಧಿ ಸಮಿತಿ ಅಧ್ಯಕ್ಷ ಹಾಗೂ ಸದಸ್ಯರ ಆಯ್ಕೆಯ ಸಂದರ್ಭದಲ್ಲಿ ಮಾತನಾಡಿದ ಅವರು  ಶಾಲೆಯ ಅಭಿವೃದ್ಧಿಗೆ ಸಮಿತಿಯು ಸಂಪೂರ್ಣ ಶ್ರಮಿಸುತ್ತದೆ ಹಾಗೂ ಗ್ರಾಮೀಣ ಭಾಗದಲ್ಲಿನ ವಿದ್ಯಾರ್ಥಿಗಳ ಶೈಕ್ಷಣಿಕ ಗುಣಮಟ್ಟ ಹೆಚ್ಚಿಸುವ ಕೆಲಸಕ್ಕೆ ಶಿಕ್ಷಕರಿಗೆ ಸಹಕಾರ ನೀಡಲಾಗುವುದು. ಶಿಕ್ಷಣದ ಮೂಲಕ ಪ್ರತಿಯೊಬ್ಬ…

Read More

ಕೃತಕ ಬುದ್ಧಿಮತ್ತೆಯ ಪರಿಣಾಮಕಾರಿ ಮತ್ತು ಜವಾಬ್ದಾರಿಯುತ ಬಳಕೆ ವೃತ್ತಿ ಬದುಕಿನ ಬೆಳವಣಿಗೆಗೆ ಸಹಕಾರಿ; ಡಾ. ಬಿ. ಎಸ್. ಹರೀಶ್

ಮೈಸೂರು; ಕೃತಕ ಬುದ್ಧಿಮತ್ತೆಯ ಪರಿಣಾಮಕಾರಿ ಮತ್ತು ಜವಾಬ್ದಾರಿಯುತ ಬಳಕೆ ವೃತ್ತಿ ಬದುಕಿನ ಬೆಳವಣಿಗೆಗೆ ಸಹಕಾರಿಯಾಗಿದೆ ಎಂದು ಜೆಎಸ್‌ಎಸ್ ವಿಜ್ಞಾನ ಮತ್ತು ತಂತ್ರಜ್ಞಾನ ವಿಶ್ವವಿದ್ಯಾನಿಲಯದ ಉಪಕುಲಸಚಿವ ಡಾ. ಬಿ. ಎಸ್. ಹರೀಶ್ ತಿಳಿಸಿದರು.ಬುಧವಾರ ಮೈಸೂರಿನ ಸರಸ್ವತಿಪುರಂನಲ್ಲಿರುವ ಜೆಎಸ್‌ಎಸ್ ಮಹಿಳಾ ಕಾಲೇಜಿನ ನವಜ್ಯೋತಿ ಸಭಾಂಗಣದಲ್ಲಿ ಗಣಕ ವಿಜ್ಞಾನ ವಿಭಾಗದ ವತಿಯಿಂದ ‘ಕೃತಕ ಬುದ್ಧಿಮತ್ತೆಯ ಭವಿಷ್ಯ : ಕೌಶಲ್ಯಗಳು, ಉಪಕರಣಗಳು ಮತ್ತು ಶೋಧನೆ’ ವಿಷಯ ಕುರಿತಂತೆ ಏರ್ಪಡಿಸಲಾಗಿದ್ದ ಒಂದು ದಿನದ ಕಾರ್ಯಗಾರವನ್ನು .ಉದ್ಘಾಟಿಸಿ ಮಾತನಾಡಿದ ಅವರು, ಪ್ರಸ್ತುತ ಯುಗದಲ್ಲಿ ಕೃತಕ ಬುದ್ಧಿಮತ್ತೆಯು…

Read More

ಅಭಿಮನ್ಯುವಿಗೆ ಅಕ್ಷರ ತೇರಿನ ಬೀಳ್ಕೊಡುಗೆ

ಮೌನದ ಮಹಾ ಪಯಣ’ ‘ಅಭಿಮನ್ಯುವಿಗೆ ಕಾವ್ಯಾರತಿ’ ಕೃತಿಗಳ ಬಿಡುಗಡೆಮೈಸೂರು : ನಗರದ ಹಿರಿಯ ಪತ್ರಕರ್ತ ಐತಿಚಂಡ ರಮೇಶ್ ಉತ್ತಪ್ಪ ಅವರ ‘ಮೌನದ ಮಹಾ ಪಯಣ’ ‘ಅಭಿಮನ್ಯುವಿಗೆ ಕಾವ್ಯಾರತಿ’ ಕೃತಿಗಳನ್ನು ಬುಧವಾರ ನಗರದಲ್ಲಿ ನಡೆದ ಕಾರ್ಯಕ್ರಮದಲ್ಲಿ ಬಿಡುಗಡೆಗೊಳಿಸಲಾಯಿತು. ತನ್ಮೂಲಕ ಅಭಿಮನ್ಯುವಿಗೆ ಅಕ್ಷರ ತೇರಿನ ಬೀಳ್ಕೊಡಿಗೆ ನೀಡಲಾಯಿತು.ಮೈಸೂರು ಕಲ್ಚರಲ್ ಅಸೋಸಿಯೇಷನ್, ಕರ್ನಾಟಕ ಅರಣ್ಯ ಇಲಾಖೆ ವನ್ಯಜೀವಿ ವಿಭಾಗ ವತಿಯಿಂದ ಮೈಸೂರಿನ ನಜರ್ ಬಾದ್ ನಲ್ಲಿರುವ ನಗರ ಕೇಂದ್ರ ಗ್ರಂಥಾಲಯದ ಸಭಾಂಗಣದಲ್ಲಿ ಬುಧವಾರ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮೈಸೂರು ವನ್ಯಜೀವಿ ವಿಭಾಗದ ಡಿಸಿಎಫ್…

Read More

ಗಜಪಡೆಯ ಮಾವುತರು, ಕಾವಾಡಿಗಳ ಮಕ್ಕಳಿಗೆ ಟೆಂಟ್ ಶಾಲೆ ಆರಂಭ

ಮೈಸೂರು; ನಾಡ ಹಬ್ಬ ಮೈಸೂರು ದಸಪಾ ಮಹೋತ್ಸವಕ್ಕೆ ಂದು ಆಗಮಿಸಿರುವ ಗಜಪಡೆಯ ಮಾವುತರು ಮತ್ತು ಕಾವಾಡಿಗಳ ಮಕ್ಕಳಿಗೆ ಕಲಿಕೆಯ ಅಂತರವನ್ನು ನಿವಾರಿಸಲು ಮತ್ತು ಕುಟುಂಬದೊAದಿಗೆ ಬಂದ ಮಕ್ಕಳಿಗೆ ಶಿಕ್ಷಣದಿಂದ ವಂಚಿತರಾಗಬಾರದು ಎಂಬ ಉದ್ದೇಶದಿಂದ ಶಾಲಾ ಶಿಕ್ಷಣ ಇಲಾಖೆ ವತಿಯಿಂದ ಅರಮನೆ ಆವರಣದಲ್ಲಿ ತಾತ್ಕಾಲಿಕ ಶಾಲೆಯನ್ನು ಆರಂಭಿಸಲಾಗಿದೆ. ಮಕ್ಕಳಿಗೆ ಬರವಣಿಗೆ ಸಾಮಾಗ್ರಿಗಳು ಮತ್ತು ಸಿಹಿ ಹಂಚಿ ಶಾಲೆಗೆ ನಿರಂತರವಾಗಿ ಬರುವಂತೆ ತಿಳಿಸಲಾಯಿತು. ದಸರಾ ಮುಗಿಸಿ ಗಜಪಯಣ ಹಿಂತಿರುಗುವರೆಗೂ ಪ್ರತಿ ನಿತ್ಯ ಶಾಲೆ ಇರುತ್ತದೆ ಮತ್ತು ಅಕ್ಷಯ ಪಾತ್ರೆ ಫೌಂಡೇಷನ್…

Read More

ಹೊಸ ಪರಿಕಲ್ಪನೆಯೊಂದಿಗೆ ದಸರಾ ದೀಪಾಲಂಕಾರ ರೂಪಿಸಿ: ಸೆಸ್ಕ್ ಅಧ್ಯಕ್ಷ ರಮೇಶ್ ಬಂಡಿಸಿದ್ದೇಗೌಡ

ಮೈಸೂರು: ಈ ಬಾರಿ ವಿಜೃಂಭಣೆಯಿAದ ಜರುಗಲಿರುವ ವಿಶ್ವ ಪ್ರಸಿದ್ಧ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ವಿದ್ಯುತ್ ದೀಪಾಲಂಕಾರಕ್ಕೆ ಈ ಬಾರಿ ಹೊಸ ಮೆರುಗು ನೀಡುವುದರ ಜತೆಗೆ, ಆಕರ್ಷಕ ಪರಿಕಲ್ಪನೆಯಲ್ಲಿ ಮೂಡಿಬರಬೇಕು. ಈ ನಿಟ್ಟಿನಲ್ಲಿ ಸಿದ್ಧತೆಕೈಗೊಳ್ಳಬೇಕು ಎಂದು ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತ(ಸೆಸ್ಕ್) ಅಧ್ಯಕ್ಷರಾದ ಶಾಸಕ ರಮೇಶ್ ಬಂಡಿಸಿದ್ದೇಗೌಡ ಅಧಿಕಾರಿಗಳಿಗೆ ಸೂಚಿಸಿದ್ದಾರೆ.ದಸರಾ ವಿದ್ಯುತ್ ದೀಪಾಲಂಕಾರದ ಸಿದ್ಧತೆಗಳ ಕುರಿತು ಬುಧವಾರ ಮೈಸೂರಿನ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತದ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಮಾತನಾಡಿದ ಅವರು, “ಕಳೆದ ವರ್ಷಕ್ಕಿಂತ…

Read More