Skip to main content

3Kaala News

ಸುಭಾಷಿತ 

ನಾವು ಏನು ಹೇಳುತ್ತೇವೆ ಅನ್ನೋದಕ್ಕಿಂತ, ಹೇಗೆ ಹೇಳುತ್ತೇವೆ ಅನ್ನುವುದೇ ಬದುಕಿನ ಗುಟ್ಟು.
ಮಾತಿನ ಶೈಲಿ ಹೃದಯ ಗೆಲ್ಲಬಹುದು, ಸಮಸ್ಯೆ ಪರಿಹರಿಸಬಹುದು, ಅಥವಾ ಸಂಬಂಧ ಉಳಿಸಬಹುದು.
ಮಾತು ಮನುಷ್ಯನ ಶಕ್ತಿ — ಅದನ್ನು ಜಾಣ್ಮೆಯಿಂದ ಬಳಕೆ ಮಾಡಿದರೆ ಬದುಕು ಸುಲಭವಾಗುತ್ತದೆ

 

Current Weather Card
--°C
Mysore, IN
Loading...
☁️

Live Gold Silver Fuel News Ticker
Loading live rates...

ಮೈಸೂರು ದಸರಾ ಮಹೋತ್ಸವದಲ್ಲಿ ಕನ್ನಡ ಚಲನಚಿತ್ರ ರಂಗದ ಪ್ರಖ್ಯಾತ ಕಲಾವಿದರು ಭಾಗಿ; ಜಿಲ್ಲಾಧಿಕಾರಿ ಜಿ. ಲಕ್ಷ್ಮಿ ಕಾಂತ ರೆಡ್ಡಿ

ಮೈಸೂರು ; ಈ ಬಾರಿ ಅದ್ಧೂರಿಯಾಗಿ ಜರುಗಲಿರುವ ವಿಶ್ವವಿಖ್ಯಾತ ನಾಡ ಹಬ್ಬ ಮೈಸೂರು ದಸರಾ ಮಹೋತ್ಸವದ ಕೊನೆ ದಿನ ನಡೆಯುವ ಐತಿಹಾಸಿಕ ಜಂಬೂ ಸವಾರಿಯ ವೇಳೆ ಕನ್ನಡ ಚಲನಚಿತ್ರ ರಂಗದ ಪ್ರಖ್ಯಾತ ಕಲಾವಿದರು ಭಾಗಿಯಾಗುವರು ಎಂದು ಜಿಲ್ಲಾಧಿಕಾರಿ ಜಿ .ಲಕ್ಷ್ಮಿ ಕಾಂತ ರೆಡ್ಡಿ ತಿಳಿಸಿದರು.
ಬುಧವಾರ ನಗರದ ಜಿಲ್ಲಾ ಪಂಚಾಯತ್ ಮಿನಿ ಸಭಾಂಗಣದಲ್ಲಿ ಚಲನಚಿತ್ರ ರಂಗದ ಪದಾಧಿಕಾರಿಗಳ ಜೊತೆ ಹಮ್ಮಿಕೊಂಡಿದ್ದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಮುಖ್ಯಮಂತ್ರಿಗಳ ಆಶಯದಂತೆ ಕನ್ನಡ ಚಲನಚಿತ್ರ ರಂಗದ ಪ್ರಖ್ಯಾತ ನಟ ನಟಿಯರು ಕಲಾವಿದರು ಹಾಗೂ ಕ್ರೀಡಾ ಕ್ಷೇತ್ರದಲ್ಲಿ ಸಾಧನೆ ಮಾಡಿದ ಕ್ರೀಡಾಪಟುಗಳನ್ನು ಅಂಬಾರಿ ಬಸ್‌ನಲ್ಲಿ ಜಂಬೂ ಸವಾರಿಯ ದಿನ ಮೆರವಣಿಗೆಯಲ್ಲಿ ಕರೆದುಕೊಂಡು ಹೋಗಲಾಗುವುದು ಎಂದು ಹೇಳಿದರು.
ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯ ಅಧ್ಯಕ್ಷೆಯಾದ ಚಿತ್ರ ನಟಿ ಡಾ.ಜಯಮಾಲಾ ಮಾತನಾಡಿ, ಚಲನಚಿತ್ರ ರಂಗವು 93 ವರ್ಷಗಳಿಂದ ನಡೆದು ಬಂದ ಹಾದಿ ಕುರಿತ ಮಾಹಿತಿಯನ್ನು ಹೊತ್ತ ಸ್ತಬ್ಧ ಚಿತ್ರವನ್ನು ನಿರ್ಮಾಣ ಮಾಡಲಾಗುವುದು. ಈ ಸ್ತಬ್ಧ ಚಿತ್ರದಲ್ಲಿ 30 ಪ್ರಖ್ಯಾತ ಕನ್ನಡ ಚಲನ ಚಿತ್ರನಟ ನಟಿಯರು ಮೆರವಣಿಗೆ ಯಲ್ಲಿ ಅಭಿಮಾನಿಗಳಿಗೆ ಕೈಬಿಸುವರು ಎಂದರು.
ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯ ಮಾಜಿ ಆಧ್ಯಕ್ಷ ಸಾ.ರಾ ಗೋವಿಂದು ಮಾತನಾಡಿ, ಕನ್ನಡ ಚಲನ ಚಿತ್ರ ರಂಗದ ಕಲಾವಿದರನ್ನು ಕರೆಸಿ ದಸರಾ ಮಹೋತ್ಸವದಲ್ಲಿ ಸನ್ಮಾನ ಕಾರ್ಯಕ್ರಮವನ್ನು ಏರ್ಪಡಿಸಬೇಕು. ಕರ್ನಾಟಕ ಚಲನಚಿತ್ರ ರಂಗ ನಡೆದು ಬಂದ ಹಾದಿಯ ಕುರಿತು ಪ್ರದರ್ಶನ ಏರ್ಪಡಿಸಬೇಕು ಎಂದು ಮನವಿ ಮಾಡಿದರು.
ಚಲನಚಿತ್ರ ಕಲಾವಿದರ ಸಂಘದ ಅಧ್ಯಕ್ಷ ರಾಕ್ ಲೈನ್ ವೆಂಕಟೇಶ್ ಮಾತನಾಡಿ, ಮೈಸೂರು ದಸರಾ ಕಾರ್ಯಕ್ರಮದಲ್ಲಿ ಭಾಗವಹಿಸುವ ಕಲಾವಿದರಿಗೆ ವಾಸ್ತವ್ಯಕ್ಕೆ ವ್ಯವಸ್ಥೆ ಮಾಡುವಂತೆ ಜಿಲ್ಲಾಧಿಕಾರಿಗಳಿಗೆ ತಿಳಿಸಿದರು.
ಸಭೆಯಲ್ಲಿ ಮೈಸೂರು ನಗರ ಪೊಲೀಸ್ ಆಯುಕ್ತೆ ಸೀಮಾ ಲಾಟ್ಕರ್, ಎಸ್ ಐ, ಆರ್ ಡಿ ನಿರ್ದೇಶಕರಾದ ಶೇಖ್ ತನ್ವೀರ್ ಆಸೀಫ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ಮಲ್ಲಿಕಾರ್ಜುನ ಬಾಲದಂಡಿ ಸೇರಿದಂತೆ ಚಲನಚಿತ್ರ ಮಂಡಳಿಯ ಸದಸ್ಯರು ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು