
ಮೈಸೂರು:
ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತ(ಸೆಸ್ಕ್) ವ್ಯವಸ್ಥಾಪಕ ನಿರ್ದೇಶಕರಾಗಿ ಐಎಎಸ್ ಅಧಿಕಾರಿ ಎನ್. ಚಂದ್ರಶೇಖರ ಅವರನ್ನು ಸರ್ಕಾರ ನೇಮಕ ಮಾಡಿದೆ. ಈ ಹಿಂದೆ ಸೆಸ್ಕ್ ವ್ಯವಸ್ಥಾಪಕ ನಿರ್ದೇಶಕರಾಗಿದ್ದ ಎಂ. ಎಸ್. ಅರ್ಚನಾ ಅವರು ವರ್ಗಾವಣೆ ಹೊಂದಿರುವ ಹಿನ್ನೆಲೆಯಲ್ಲಿ, ರಾಜ್ಯ ಸರ್ಕಾರ ಬೆಂಗಳೂರಿನ ಮೂಲಸೌಕರ್ಯ ಅಭಿವೃದ್ಧಿ, ಬಂದರು ಮತ್ತು ಒಳನಾಡು ಜಲ ಸಾರಿಗೆ ಇಲಾಖೆಯ ಜಂಟಿ ಕಾರ್ಯದರ್ಶಿಯಾಗಿ ಕಾರ್ಯನಿರ್ವಹಿಸುತ್ತಿದ್ದ ಎನ್. ಚಂದ್ರಶೇಖರ್ ಅವರನ್ನು, ಸೆಸ್ಕ್ ವ್ಯವಸ್ಥಾಪಕ ನಿರ್ದೇಶಕರಾಗಿ ನೇಮಿಸಿದೆ.