
ಮೈಸೂರು: ಶ್ರೀ ಕೃಷ್ಣ ಟ್ರಸ್ಟ್ ಹಾಗೂ ಶ್ರೀ ಕೃಷ್ಣ ಮಿತ್ರ ಮಂಡಳಿ ಹಾಗೂ ಚಾತುರ್ಮಾಸ್ಯ ಸಮಿತಿ
ವತಿಯಿಂದ ಉಡುಪಿ ಶ್ರೀ ಕಾಣಿಯೂರು ಮಠದ ಪೀಠಾಧಿಪತಿಗಳಾದ ಶ್ರೀ ವಿದ್ಯಾವಲ್ಲಭತೀರ್ಥಸ್ವಾಮ್ಭಿಜಿಯವರ 35ನೇ ಚಾತುರ್ಮಾಸ್ಯ ಅಂಗವಾಗಿ ಐಶ್ವರ್ಯ ರಂಗರಾಜನ್ ಇವರಿಂದ ರಾಗ ರಂಜನಿ ಕಾರ್ಯಕ್ರಮವನ್ನು ನಗರದ ಸರಸ್ವತಿಪುರಂನಲ್ಲಿರುವ ಶ್ರೀ ಕೃಷ್ಣದಾಮದಲ್ಲಿ ಸೆ. 10 ರಂದು ಆಯೋಜಿಸಲಾಗಿದೆ. ಸಂಜೆ 7 ಗಂಟೆಗೆ ನಡೆಯಲಿರುವ ಈ ಕಾರ್ಯಕ್ರಮಕ್ಕೆ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಕಲಾವಿದರನ್ನು ಪ್ರೋತ್ಸಾಹಿಸಬೇಕೆಂದು ಶ್ರೀ ಕೃಷ್ಣ ಟ್ರಸ್ಟ್ ಚಾತುರ್ಮಾಸ್ಯ ಸಮಿತಿಯ ಖಜಾಂಚಿ ಶ್ರೀಕಾಂತ್ ರಾವ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.