
ಮೈಸೂರು: ಸಚಿವ ಸತೀಶ್ ಜಾರಕಿಹೊಳಿ ಅವರ ಮನೆ, ಆಪ್ತರು ಹಾಗೂ ವಿವಿಧ ಸಂಸ್ಥೆಗಳ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಯನ್ನು ಖಂಡಿಸಿ ದಲಿತ ಹಾಗೂ ವಿವಿಧ ಸಂಘಟನೆಗಳ ಮುಖಂಡರು ಮೈಸೂರಿನಲ್ಲಿ ಪ್ರತಿಭಟನೆ ನಡೆಸಿದರು.
ನಗರದ ಟೌನ್ಹಾಲ್ ಮುಂಭಾಗದ ಡಾ. ಬಿ.ಆರ್. ಅಂಬೇಡ್ಕರ್ ಪ್ರತಿಮೆ ಬಳಿ ಜಮಾಯಿಸಿದ ಪ್ರತಿಭಟನಾಕಾರರು, ಕೇಂದ್ರ ಸರ್ಕಾರ ಹಾಗೂ ಇಡಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ಈ ವೇಳೆ ನಗರಪಾಲಿಕೆಯ ಮಾಜಿ ಮೇಯರ್ ಪುರುಷೋತ್ತಮ್ ಮಾತನಾಡಿ, ಸಂವಿಧಾನ ಮತ್ತು ಪ್ರಜಾಪ್ರಭುತ್ವದ ಆಶಯಗಳಿಗೆ ಬದ್ಧವಾಗಿ ಬೆಳೆದಿರುವ ಸಚಿವ ಸತೀಶ್ ಜಾರಕಿಹೊಳಿ ಅವರ ನಾಯಕತ್ವವನ್ನು ಇಆ ದಾಳಿಗಳ ಮೂಲಕ ದಮನಿಸುವ ಪ್ರಯತ್ನ ನಡೆಯುತ್ತಿದೆ ಎಂದು ಆರೋಪಿಸಿದರು.
ಕೇಂದ್ರ ಸರ್ಕಾರ ಇಆಯಂತಹ ತನಿಖಾ ಸಂಸ್ಥೆಗಳನ್ನು ರಾಜಕೀಯ ಉದ್ದೇಶಗಳಿಗೆ ಬಳಸುವುದನ್ನು ನಿಲ್ಲಿಸಬೇಕು. ಇಡಿ ದಾಳಿಗಳಿಗೆ ಹೆದರುವ ಪ್ರಶ್ನೆಯೇ ಇಲ್ಲ ಎಂದರು. ಪ್ರತಿಭಟನೆಯಲ್ಲಿ ದಲಿತ ಸಂಘಟನೆಗಳ ಮುಖಂಡರುಗಳು, ಕಾರ್ಯಕರ್ತರುಗಳು ಭಾಗವಹಿಸಿದ್ದರು.