
ಮೈಸೂರು; ನಗರದ ಸರಸ್ವತಿಪುರಂನಲ್ಲಿರುವ ವಿಜಯ ವಿಠ್ಠಲ ವಿದ್ಯಾಶಾಲೆಯ ವಿದ್ಯಾರ್ಥಿಗಳು 2026 ಜಿಲ್ಲಾ ಮಟ್ಟದ ಈಜು ಶಾಲಾ ಕ್ರೀಡಾಕೂಟದಲ್ಲಿ ಭಾಗವಹಿಸಿ ಮೂರು ಚಿನ್ನ ಮತ್ತು ಎರಡು ಕಂಚಿನ ಪದಕಗಳನ್ನು ಗೆಲ್ಲುವ ಮೂಲಕ ಅತ್ಯುತ್ತಮ ಸಾಧನೆ ಮಾಡಿದ್ದಾರೆ. ಬೆನಕ ಅರಸ್ ಮೂರುಚಿನ್ನದ ಪದಕಗಳನ್ನು ಗೆದ್ದುಕೊಂಡರೆ, ವಿಗ್ನೇಶ್ ನಾಯಕ್ ಮತ್ತು ಅದ್ವಿಕ್ಆರ್ಯ ತಲಾ ಒಂದು ಕಂಚಿನ ಪದಕವನ್ನು ತಮ್ಮದಾಗಿಸಿಕೊಂಡಿದ್ದಾರೆ. ಈ ಅದ್ಭುತ ಪ್ರದರ್ಶನದೊಂದಿಗೆ ಬೆನಕ ಅರಸ್ಅವರು ರಾಜ್ಯ ಮಟ್ಟದ ಈಜು ಸ್ಪರ್ಧೆಗೆ ಅರ್ಹತೆ ಪಡೆದಿದ್ದಾರೆ.