Skip to main content

3Kaala News

ಸುಭಾಷಿತ 

ನಾವು ಏನು ಹೇಳುತ್ತೇವೆ ಅನ್ನೋದಕ್ಕಿಂತ, ಹೇಗೆ ಹೇಳುತ್ತೇವೆ ಅನ್ನುವುದೇ ಬದುಕಿನ ಗುಟ್ಟು.
ಮಾತಿನ ಶೈಲಿ ಹೃದಯ ಗೆಲ್ಲಬಹುದು, ಸಮಸ್ಯೆ ಪರಿಹರಿಸಬಹುದು, ಅಥವಾ ಸಂಬಂಧ ಉಳಿಸಬಹುದು.
ಮಾತು ಮನುಷ್ಯನ ಶಕ್ತಿ — ಅದನ್ನು ಜಾಣ್ಮೆಯಿಂದ ಬಳಕೆ ಮಾಡಿದರೆ ಬದುಕು ಸುಲಭವಾಗುತ್ತದೆ

 

Current Weather Card
--°C
Mysore, IN
Loading...
☁️

Live Gold Silver Fuel News Ticker
Loading live rates...

“ರಕ್ತದಾನ ಮಾಡಿ ಜೀವ ಉಳಿಸಿ; ಬಿ. ನಿರಂಜನಮೂರ್ತಿ


ಮೈಸೂರು; ರಕ್ತದಾನವು ಇತರರ ಅಮೂಲ್ಯ ಜೀವವನ್ನು ಉಳಿಸುವುದರ ಜೊತೆಗೆ ರಕ್ತದಾನಿಯ ಆರೋಗ್ಯಕ್ಕೂ ಉತ್ತಮವಾಗಿದೆ ಎಂದು
ಜೆಎಸ್‌ಎಸ್ ಮಹಾವಿದ್ಯಾಪೀಠದ ಕಾಲೇಜು ಶಿಕ್ಷಣ ವಿಭಾಗದ ಸಹಾಯಕ ನಿರ್ದೇಶಕ ಬಿ. ನಿರಂಜನಮೂರ್ತಿ ಹೇಳಿದರು.
ಜಗದ್ಗುರು ಡಾ. ಶ್ರೀ ಶಿವರಾತ್ರಿ ರಾಜೇಂದ್ರ ಮಹಾಸ್ವಾಮೀಜಿಯವರ 111ನೇ ಜಯಂತಿಯ ಅಂಗವಾಗಿ, ಮೈಸೂರಿನ ಸರಸ್ವತಿಪುರಂನಲ್ಲಿರುವ ಜೆಎಸ್‌ಎಸ್ ಮಹಿಳಾ ಕಾಲೇಜಿನ ಯೂತ್ ರೆಡ್ ಕ್ರಾಸ್, ರಾ. ಸೇ. ಯೋಜನೆ, ರೇಂಜ್ ರೋರ‍್ಸ್ ಘಟಕದ ವತಿಯಿಂದ ಆಯೋಜಿಸಲಾಗಿದ್ದ ರಕ್ತದಾನ ಶಿಬಿರವನ್ನು ಉದ್ಘಾಟಿಸಿ ಮಾತನಾಡಿದ ಅವರು, ರಕ್ತದಾನ ಮಾಡಿ ಜೀವ ಉಳಿಸಿ ಅಲ್ಲದೆ ರಕ್ತದಾನವು ಒಂದು ಶ್ರೇಷ್ಠ ಸೇವೆಚಿiÀiÁಗಿದೆ. ಇಂತಹ ಮಹತ್ಕಾರ್ಯದಲ್ಲಿ ಯುವಜನತೆ ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ತಿಳಿಸಿದರು.
ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಮೈಸೂರಿನ ಫೆಡರಲ್ ಬ್ಯಾಂಕ್‌ನ ವ್ಯವಸ್ಥಾಪಕ ಆನಂದ್ ಮಾತನಾಡಿ, ಶಿಕ್ಷಣ ಮತ್ತು ಆರೋಗ್ಯ ಕ್ಷೇತ್ರಗಳಿಗೆ ಜೆಎಸ್‌ಎಸ್ ಮಹಾವಿದ್ಯಾಪೀಠವು ನೀಡಿರುವ ಗಣನೀಯ ಕೊಡುಗೆಯನ್ನು ಪ್ರಶಂಸಿಸಿದರು. ರಕ್ತದಾನ ಶ್ರೇಷ್ಠವಾದದ್ದು ಎಂದು ತಿಳಿಸಿದರು.
ಮೈಸೂರಿನ ಜೆಎಸ್‌ಎಸ್ ರಕ್ತನಿಧಿ ಕೇಂದ್ರದ ವೈದ್ಯಾಧಿಕಾರಿ ಡಾ. ಪಲ್ಲವಿ ಪಿ. ಮಾತನಾಡಿ ,ರಕ್ತ ಸಂಗ್ರಹಣೆಯ ಪ್ರಕ್ರಿಯೆಯನ್ನು ವಿವರಿಸಿ, ತುರ್ತು ಸಂದರ್ಭಗಳಲ್ಲಿ ರಕ್ತದ ಕೊರತೆಯಾಗದಂತೆ ನೋಡಿಕೊಳ್ಳಲು ನಿಯಮಿತವಾಗಿ ರಕ್ತದಾನ ಮಾಡುವುದು ಅತ್ಯಗತ್ಯ ಎಂದು ತಿಳಿಸಿದರು. ಸಂಕಷ್ಟದಲ್ಲಿರುವವರಿಗೆ ರಕ್ತ ನೀಡುವುದರೊಂದಿಗೆ ಸಹಾಯ ಮಾಡುವುದು ಅಪಾರ ಮಾನಸಿಕ ತೃಪ್ತಿಯನ್ನು ನೀಡುತ್ತದೆ ಎಂದರು.
ಕಾರ್ಯಕ್ರಮದಲ್ಲಿ ಜೆಎಸ್‌ಎಸ್ ಮಹಿಳಾ ಕಾಲೇಜಿನ ಪ್ರಾಂಶುಪಾಲ ಡಾ. ರೇಚಣ್ಣ ,ಜೆಎಸ್‌ಎಸ್ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲ ಗುರುಪಾದಸ್ವಾಮಿ, ಎನ್‌ಎಸ್‌ಎಸ್ ಕಾರ್ಯಕ್ರಮಾಧಿಕಾರಿ ಡಾ. ಧರ್ಮೇಶ ಎ. ಜಿ, ಅನುಷಾ, ಬೋಧಕ-ಬೋಧಕೇತರ ಸಿಬ್ಬಂದಿ ಹಾಗೂ ವಿದ್ಯಾರ್ಥಿನಿಯರು ಉಪಸ್ಥಿತರಿದ್ದರು.
ವಿದ್ಯಾರ್ಥಿನಿಯರು ಹಾಗೂ ಫೆಡರಲ್ ಬ್ಯಾಂಕ್ ಸ್ವಯಂಸೇವಕರು ಸೇರಿದಂತೆ ಒಟ್ಟು 45 ದಾನಿಗಳು ರಕ್ತದಾನ ಮಾಡಿದರು.