Skip to main content

3Kaala News

ಸುಭಾಷಿತ 

ನಾವು ಏನು ಹೇಳುತ್ತೇವೆ ಅನ್ನೋದಕ್ಕಿಂತ, ಹೇಗೆ ಹೇಳುತ್ತೇವೆ ಅನ್ನುವುದೇ ಬದುಕಿನ ಗುಟ್ಟು.
ಮಾತಿನ ಶೈಲಿ ಹೃದಯ ಗೆಲ್ಲಬಹುದು, ಸಮಸ್ಯೆ ಪರಿಹರಿಸಬಹುದು, ಅಥವಾ ಸಂಬಂಧ ಉಳಿಸಬಹುದು.
ಮಾತು ಮನುಷ್ಯನ ಶಕ್ತಿ — ಅದನ್ನು ಜಾಣ್ಮೆಯಿಂದ ಬಳಕೆ ಮಾಡಿದರೆ ಬದುಕು ಸುಲಭವಾಗುತ್ತದೆ

 

Current Weather Card
--°C
Mysore, IN
Loading...
☁️

Live Gold Silver Fuel News Ticker
Loading live rates...

42 ರೈತ ಕುಟುಂಬಗಳ ಮಕ್ಕಳ ಉದ್ಯೋಗಕ್ಕಾಗಿ ಹೋರಾಟ


ಮೈಸೂರು: ಬನ್ನಾರಿ ಅಮ್ಮನ್ ಸಕ್ಕರೆ ಕಾರ್ಖಾನೆಗೆ ಭೂಮಿ ನೀಡಿದ 42 ರೈತ ಕುಟುಂಬಗಳ ಮಕ್ಕಳಿಗೆ ಕಾಯಂ ಉದ್ಯೋಗ ನೀಡಬೇಕು ಹಾಗೂ ನೀಡಿರುವ ಲಿಖಿತ ಭರವಸೆಗಳನ್ನು ಜಾರಿಗೊಳಿಸಬೇಕು ಎಂದು ಆಗ್ರಹಿಸಿ ರೈತರು ಅಖಿಲ ಭಾರತ ರೈತ ಕೃಷಿ ಕಾರ್ಮಿಕರ ಸಂಘಟನೆ (ಎಐಕೆಕೆಎಂಎಸ್) ಮತ್ತು ಜನಾಂದೋಲನಗಳ ಮಹಾ ಮೈತ್ರಿಯ ನೇತೃತ್ವದಲ್ಲಿ ನಗರದ ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಅನಿರ್ದಿಷ್ಟಾವಧಿ ಹೋರಾಟವನ್ನು ನಡೆಸಲಾಗುತ್ತಿದೆ.
ಐದು ದಿನಗಳಿಂದ ರೈತರು ಜಿಲ್ಲಾಧಿಕಾರಿ ಕಚೇರಿ ಎದುರು ಶಾಂತಿಯುತವಾಗಿ ಹೋರಾಟ ನಡೆಸುತ್ತಿದ್ದರೂ ಜಿಲ್ಲಾಡಳಿತವು ರೈತರ ಬೇಡಿಕೆಗಳಿಗೆ ಸ್ಪಂದಿಸಿಲ್ಲ ಎಂದು ಹೋರಾಟಗಾರರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಈ ಕುರಿತು ಮಾತನಾಡಿದ ಹಿರಿಯ ರೈತ ಹೋರಾಟಗಾರ ಬೊಕ್ಕಳ್ಳಿ ನಂಜುAಡಸ್ವಾಮಿ,
ಕಳೆದ ಐದು ದಿನಗಳಿಂದ ರೈತರು ಹೋರಾಟ ನಡೆಸುತ್ತಿದ್ದರೂ ಜಿಲ್ಲಾಡಳಿತ ನಮ್ಮ ಸಮಸ್ಯೆಗೆ ಸ್ಪಂದಿಸಿಲ್ಲ. ಜಿಲ್ಲಾಧಿಕಾರಿಗಳು ಸ್ಥಳಕ್ಕೆ ಬಂದು ರೈತರನ್ನು ಭೇಟಿ ಮಾಡಿ, ಹಿಂದೆ ನೀಡಿದ್ದ ಭರವಸೆಯನ್ನು ಉಳಿಸಿಕೊಳ್ಳುವ ಬಗ್ಗೆ ಯಾವುದೇ ಮಾತನ್ನೂ ಆಡಿಲ್ಲ. ರೈತರ ಸಮಸ್ಯೆಗಳನ್ನು ಆಲಿಸಿ ಪರಿಹಾರ ನೀಡಬೇಕಾದ ಜಿಲ್ಲಾಡಳಿತವೇ ಮೌನ ವಹಿಸಿರುವುದು ಖಂಡನೀಯ'' ಎಂದು ಆಕ್ರೋಶ ವ್ಯಕ್ತಪಡಿಸಿದರು. ಬನ್ನಾರಿ ಅಮ್ಮನ್ ಸಕ್ಕರೆ ಕಾರ್ಖಾನೆಗೆ ಭೂಮಿ ಕಳೆದುಕೊಂಡ 42 ರೈತ ಕುಟುಂಬಗಳ ಮಕ್ಕಳಿಗೆ ಉದ್ಯೋಗ ನೀಡುವ ಕುರಿತು ಹಲವು ಹಂತಗಳಲ್ಲಿ ಭರವಸೆಗಳನ್ನು ನೀಡಲಾಗಿದೆ. ಆದರೆ ಆ ಭರವಸೆಗಳು ಜಾರಿಯಾಗದೆ ವಿಳಂಬವಾಗುತ್ತಿರುವ ಹಿನ್ನೆಲೆಯಲ್ಲಿ ರೈತರು ಅನಿರ್ದಿಷ್ಟಾವಧಿ ಹೋರಾಟಕ್ಕೆ ಮುಂದಾಗಿದ್ದಾರೆ.ರೈತರು ತಮ್ಮ ಭೂಮಿಯನ್ನು ಕಳೆದುಕೊಂಡು ಕಾರ್ಖಾನೆ ನಿರ್ಮಾಣಕ್ಕೆ ಅವಕಾಶ ಮಾಡಿಕೊಟ್ಟಿದ್ದಾರೆ. ಇದೀಗ ಅವರ ಮಕ್ಕಳಿಗೆ ಉದ್ಯೋಗ ನೀಡುವ ವಿಚಾರದಲ್ಲಿ ವರ್ಷಗಟ್ಟಲೆ ವಿಳಂಬ ಮಾಡುವುದು ಅನ್ಯಾಯ. ಲಿಖಿತ ಭರವಸೆಗಳನ್ನು ಗೌರವಿಸಿ ತಕ್ಷಣ ಉದ್ಯೋಗ ನೀಡಬೇಕು” ಎಂದು ಆಗ್ರಹಿಸಿದರು.
ರೈತರ ಬೇಡಿಕೆಗಳನ್ನು ತಕ್ಷಣ ಈಡೇರಿಸಿ, ಸಂಬAಧಪಟ್ಟ ಅಧಿಕಾರಿಗಳು ಮತ್ತು ಕಾರ್ಖಾನೆ ಆಡಳಿತದೊಂದಿಗೆ ಸಭೆ ನಡೆಸಿ, ಸಮಸ್ಯೆಗೆ ಶಾಶ್ವತ ಪರಿಹಾರ ಕಲ್ಪಿಸಬೇಕು. ಇಲ್ಲವಾದಲ್ಲಿ ಹೋರಾಟವನ್ನು ಮತ್ತಷ್ಟು ತೀವ್ರಗೊಳಿಸಲಾಗುವುದು ಎಂದು ಹೋರಾಟಗಾರರು ಎಚ್ಚರಿಸಿದ್ದಾರೆ. ನ್ಯಾಯ ಸಿಗುವವರೆಗೂ ಹೋರಾಟ ಮುಂದುವರಿಯಲಿದೆ ಎಂದು 42 ರೈತ ಕುಟುಂಬಗಳ ಸದಸ್ಯರು ಪಟ್ಟು ಹಿಡಿದಿದ್ದಾರೆ.
ಈ ಹೋರಾಟದಲ್ಲಿ ಜನಾಂದೋಲನಗಳ ಮಹಾ ಮೈತ್ರಿ ಉಗ್ರ ನರಸಿಂಹೇಗೌಡ, ಎಐಕೆಕೆಎಂಎಸ್ ಜಿಲ್ಲಾ ಅಧ್ಯಕ್ಷ ಬಸವರಾಜು ಅಳಗ0ಚಿ, ಅಳಗ0ಚಿಪುರ, ಮಲ್ಲುಪುರ ಗ್ರಾಮದ ರೈತ ಮಹಿಳೆಯರ ರಾಜಮ್ಮ, ಲಕ್ಷ÷್ಮಮ್ಮ, ಗೌರಮ್ಮ, ಸಿದ್ದರಾಜಮ್ಮ, ಗೀತಾ, ಭಾಗ್ಯಮ್ಮ, ಮಹೇಶ್, ರಾಜು, ಅನಿತ್ ಕುಮಾರ, ಮಂಜುನಾಥ್, ಮಂತದವರು ಭಾಗವಹಿಸಿದ್ದರು…