ವಿದ್ಯಾರ್ಥಿಗಳು ಶಿಕ್ಷಣದ ಜೊತೆಗೆ ಮಾನವೀಯ ಮೌಲ್ಯಗಳನ್ನು ಮೈಗೂಡಿಸಿಕೊಳ್ಳಬೇಕು : ಡಾ. ಚಂದ್ರಶೇಖರ್
ವಿವೇಕಾನಂದ ಪದವಿ ಪೂರ್ವ ಕಾಲೇಜಿನಲ್ಲಿ ವಿದ್ಯಾರ್ಥಿಗಳಿಗೆ ಸ್ವಾಗತ ಕಾರ್ಯಕ್ರಮ. ಪಿರಿಯಾಪಟ್ಟಣ: ವಿದ್ಯಾರ್ಥಿಗಳು ಶಿಕ್ಷಣದ ಜೊತೆಗೆ ಮಾನವೀಯ ಮೌಲ್ಯಗಳನ್ನು ಮೈಗೂಡಿಸಿಕೊಂಡು ಗುರಿ, ಸಾಧನೆ ಕಡೆಗೆ ಗಮನ ಹರಿಸಬೇಕು ಎಂದು ಮೈಸೂರು ಮಾನಸಗಂಗೋತ್ರಿ ಅಭಿವೃದ್ಧಿ ಅಧ್ಯಯನ ಸಂಸ್ಥೆ ನಿರ್ದೇಶಕರಾದ ಡಾ. ಚಂದ್ರಶೇಖರ್ ತಿಳಿಸಿದರು. ಪಟ್ಟಣದ ವಿವೇಕಾನಂದ ಪದವಿ ಪೂರ್ವ ಕಾಲೇಜಿನಲ್ಲಿ ನಡೆದ ಪ್ರಥಮ ಪಿಯುಸಿ ವಿದ್ಯಾರ್ಥಿಗಳಿಗೆ ಸ್ವಾಗತ ಕಾರ್ಯಕ್ರಮ ಹಾಗೂ ಸಾಂಸ್ಕೃತಿಕ ಮತ್ತು ಕ್ರೀಡಾ ಚಟುವಟಿಕೆಗಳ ಉದ್ಘಾಟನ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು ವಿದ್ಯಾರ್ಥಿಗಳು ಶಾಲಾ-ಕಾಲೇಜಿನಲ್ಲಿ ಕೇವಲ ಅಂಕಗಳಿಸುವುದೇ ಅವರ ಗುರಿಯಾಗಬಾರದು…