Skip to main content

3Kaala News

ಸುಭಾಷಿತ 

ಪಕ್ಕದಲ್ಲಿರುವವನ ತಟ್ಟೆಯಲ್ಲಿ ಏನಿದೆ ಅಂತ ಯಾವತ್ತೂ ಇಣುಕಿ ನೋಡಬೇಡ. ಕಾರಣ ಅಲ್ಲಿ ಜಾಸ್ತಿಯಿದ್ದರೆ, ನಿನಗೆ ಸಂಕಟವಾಗುತ್ತದೆ.ಅಲ್ಲಿ ಕಡಿಮೆ ಇದ್ದರೆ, ನಿನಗೆ ಅಹಂಕಾರ ಬರುತ್ತದೆ.ಎರಡೂ ಒಳ್ಳೆಯದಲ್ಲ.ನಮ್ಮ ತಟ್ಟೆಯನ್ನು ನಾವು ನೋಡಿಕೊಂಡಿದ್ದರೆ, ಸಿಗುವ ಸಂತೋಷವೇ ಬೇರೆ

Current Weather Card
--°C
Mysore, IN
Loading...
☁️

Live Gold Silver Fuel News Ticker
Loading live rates...

ಟಿ. ನರಸೀಪುರ ಠಾಣಾಧಿಕಾರಿ ಧನಂಜಯ್ ಹಿಂದೂ ಸಮಾಜದ ಕ್ಷಮೆಯಾಚಿಸಬೇಕು: ಸಂತೋಷ್ ಕುಮಾರ್.ಬಿ.ಎಂ ಆಗ್ರಹ


ಮೈಸೂರು; ಗಣೇಶೋತ್ಸವದ ಸಂದರ್ಭದಲ್ಲಿ ಗಣಪತಿ ಪ್ರತಿಷ್ಠಾಪನೆ ಹಾಗೂ ಮೆರವಣಿಗೆಗೆ ಸಂಬAಧಿಸಿದAತೆ ಆಯೋಜಕರಿಗೆ ನಿರ್ಬಂಧಗಳನ್ನು ವಿಧಿಸುವ ಮೂಲಕ ಹಿಂದೂಗಳ ಧಾರ್ಮಿಕ ಭಾವನೆಗಳಿಗೆ ಧಕ್ಕೆ ಉಂಟುಮಾಡುವ ರೀತಿಯಲ್ಲಿ ನಡೆದುಕೊಂಡಿದ್ದಾರೆ ಎಂಬ ಆರೋಪ ಕೇಳಿಬಂದಿರುವ ಹಿನ್ನೆಲೆಯಲ್ಲಿ, ಮೈಸೂರು ಜಿಲ್ಲೆಯ ಟಿ. ನರಸೀಪುರ ಠಾಣಾಧಿಕಾರಿ ಧನಂಜಯ್ ಹಿಂದೂ ಸಮಾಜದ ಕ್ಷಮೆಯಾಚಿಸಬೇಕು ಎಂದು ಬಿಜೆಪಿ ಮೈಸೂರು ನಗರ ಮಾಧ್ಯಮ ಸಹ ಸಂಚಾಲಕ ಸಂತೋಷ್ ಕುಮಾರ್ ಬಿ. ಎಂ. ಆಗ್ರಹಿಸಿದ್ದಾರೆ.
ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು,
ಗಣೇಶೋತ್ಸವವು ಹಿಂದೂ ಸಮಾಜದ ಪ್ರಮುಖ ಧಾರ್ಮಿಕ ಆಚರಣೆಗಳಲ್ಲಿ ಒಂದಾಗಿದೆ. ಸಾರ್ವಜನಿಕ ಶಾಂತಿ ಮತ್ತು ಕಾನೂನು ಸುವ್ಯವಸ್ಥೆಯನ್ನು ಕಾಪಾಡುವುದು ಪೊಲೀಸ್ ಇಲಾಖೆಯ ಜವಾಬ್ದಾರಿಯಾಗಿದ್ದರೂ, ಧಾರ್ಮಿಕ ಆಚರಣೆಗಳಿಗೆ ಸಂಬAಧಿಸಿದAತೆ ಆಯೋಜಕರೊಂದಿಗೆ ಸಮಾಲೋಚನೆ ನಡೆಸಿ, ಎಲ್ಲರ ಭಾವನೆಗಳಿಗೆ ಗೌರವ ನೀಡುವ ರೀತಿಯಲ್ಲಿ ಮೆರವಣಿಗೆಗೆ ಸೂಕ್ತ ಮಾರ್ಗ ಹಾಗೂ ಅಗತ್ಯ ನಿಯಮಗಳನ್ನು ರೂಪಿಸಬೇಕಾಗಿತ್ತು. ಆದರೆ ಮಸೀದಿ ರಸ್ತೆಯಲ್ಲಿ ಮೆರವಣಿಗೆಗೆ ಅವಕಾಶ ನೀಡುವುದಿಲ್ಲ ಹಾಗೂ ಡಿ.ಜೆ. ಬಳಸಲು ಅವಕಾಶವಿಲ್ಲ ಎಂಬ ರೀತಿಯಲ್ಲಿ ಆಯೋಜಕರಿಗೆ ನಿರ್ಬಂಧ ಹೇರಿರುವುದು ಪ್ರಶ್ನಾರ್ಹವಾಗಿದೆ ಎಂದು ಹೇಳಿದ್ದಾರೆ.
ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಪ್ರತಿಯೊಬ್ಬರಿಗೂ ತಮ್ಮ ಧಾರ್ಮಿಕ ಆಚರಣೆಗಳನ್ನು ಕಾನೂನಿನ ಚೌಕಟ್ಟಿನಲ್ಲಿ ಆಚರಿಸುವ ಹಕ್ಕಿದೆ. ಆದ್ದರಿಂದ ಪೊಲೀಸ್ ಇಲಾಖೆ ಯಾವುದೇ ಒಂದು ಸಮುದಾಯದ ಧಾರ್ಮಿಕ ಭಾವನೆಗಳಿಗೆ ಧಕ್ಕೆ ಉಂಟಾಗದAತೆ, ಎಲ್ಲರಿಗೂ ಸಮಾನವಾಗಿ ಕಾನೂನು ಅನ್ವಯಿಸುವ ಮೂಲಕ ಸೂಕ್ತ ಭದ್ರತೆ ಒದಗಿಸಬೇಕು. ಅಧಿಕಾರಿಗಳ ವರ್ತನೆಯಿಂದಲೇ ಧಾರ್ಮಿಕ ಕಾರ್ಯಕ್ರಮಗಳ ಸಂದರ್ಭದಲ್ಲಿ ಅನಗತ್ಯ ಗೊಂದಲಗಳು ಉಂಟಾಗುವ ಪರಿಸ್ಥಿತಿ ನಿರ್ಮಾಣವಾಗಬಾರದು ಎಂದು ಹೇಳಿದ್ದಾರೆ.
“ನಾವು ಭಾರತದಲ್ಲಿದ್ದೇವೆಯೇ ಅಥವಾ ಪಾಕಿಸ್ತಾನದಲ್ಲಿದ್ದೇವೆಯೇ ಎಂಬ ಪ್ರಶ್ನೆ ಮೂಡುವಂತ ಪರಿಸ್ಥಿತಿ ನಿರ್ಮಾಣವಾಗಬಾರದು. ಭಾರತವು ಎಲ್ಲ ಧರ್ಮಗಳಿಗೂ ಸಮಾನ ಗೌರವ ಮತ್ತು ಹಕ್ಕುಗಳನ್ನು ನೀಡುವ ಪ್ರಜಾಪ್ರಭುತ್ವ ರಾಷ್ಟç” ಎಂದು ಹೇಳಿದ್ದಾರೆ.
ಠಾಣಾಧಿಕಾರಿ ಧನಂಜಯ್ ಅವರು ಜವಾಬ್ದಾರಿಯುತ ಸ್ಥಾನದಲ್ಲಿರುವ ಅಧಿಕಾರಿಯಾಗಿದ್ದು, ಧಾರ್ಮಿಕ ಮುಖಂಡರು ಹಾಗೂ ಗಣೇಶೋತ್ಸವ ಆಯೋಜಕರೊಂದಿಗೆ ಸಭೆ ನಡೆಸಿ, ಕಾನೂನು ಸುವ್ಯವಸ್ಥೆಗೆ ಧಕ್ಕೆಯಾಗದಂತೆ ಮೆರವಣಿಗೆ ನಡೆಸಲು ಸೂಕ್ತ ಮಾರ್ಗ ಮತ್ತು ನಿಯಮಗಳನ್ನು ನಿಗದಿಪಡಿಸಬೇಕಿತ್ತು. ಅದರ ಬದಲಾಗಿ ಯುವಕರಿಗೆ ಬೆದರಿಕೆ ಹಾಕುವ ರೀತಿಯಲ್ಲಿ ನಡೆದುಕೊಂಡಿದ್ದಾರೆ ಎಂಬ ಆರೋಪಗಳು ನಿಜವಾಗಿದ್ದರೆ, ಅದು ಖಂಡನೀಯ ಎಂದು ತಿಳಿಸಿದ್ದಾರೆ.
ಕಾನೂನು ಸುವ್ಯವಸ್ಥೆಯನ್ನು ಕಾಪಾಡುವ ನೆಪದಲ್ಲಿ ಯಾವುದೇ ಸಮುದಾಯದ ಧಾರ್ಮಿಕ ಭಾವನೆಗಳಿಗೆ ಧಕ್ಕೆ ಉಂಟಾಗಬಾರದು. ಕಾನೂನು ಎಲ್ಲರಿಗೂ ಸಮಾನವಾಗಿರಬೇಕು. ಆದ್ದರಿಂದ ಠಾಣಾಧಿಕಾರಿ ಧನಂಜಯ್ ಅವರು ಹಿಂದೂ ಸಮಾಜದ ಮುಖಂಡರೊAದಿಗೆ ಚರ್ಚಿಸಿ, ಉಂಟಾಗಿರುವ ಗೊಂದಲವನ್ನು ಬಗೆಹರಿಸಿ, ತಮ್ಮ ವರ್ತನೆಯಿಂದ ನೋವುಂಟಾಗಿದ್ದರೆ ಹಿಂದೂ ಸಮಾಜದ ಕ್ಷಮೆಯಾಚಿಸಬೇಕು. ಇಲ್ಲವಾದಲ್ಲಿ ಈ ವಿಚಾರವನ್ನು ಉನ್ನತ ಪೊಲೀಸ್ ಅಧಿಕಾರಿಗಳ ಗಮನಕ್ಕೆ ತಂದು ಸೂಕ್ತ ಕ್ರಮಕ್ಕೆ ಆಗ್ರಹಿಸಲಾಗುವುದು ಎಂದು ತಿಳಿಸಿದ್ದಾರೆ.