Skip to main content

3Kaala News

ಸುಭಾಷಿತ 

ಪಕ್ಕದಲ್ಲಿರುವವನ ತಟ್ಟೆಯಲ್ಲಿ ಏನಿದೆ ಅಂತ ಯಾವತ್ತೂ ಇಣುಕಿ ನೋಡಬೇಡ. ಕಾರಣ ಅಲ್ಲಿ ಜಾಸ್ತಿಯಿದ್ದರೆ, ನಿನಗೆ ಸಂಕಟವಾಗುತ್ತದೆ.ಅಲ್ಲಿ ಕಡಿಮೆ ಇದ್ದರೆ, ನಿನಗೆ ಅಹಂಕಾರ ಬರುತ್ತದೆ.ಎರಡೂ ಒಳ್ಳೆಯದಲ್ಲ.ನಮ್ಮ ತಟ್ಟೆಯನ್ನು ನಾವು ನೋಡಿಕೊಂಡಿದ್ದರೆ, ಸಿಗುವ ಸಂತೋಷವೇ ಬೇರೆ

Current Weather Card
--°C
Mysore, IN
Loading...
☁️

Live Gold Silver Fuel News Ticker
Loading live rates...

ಸಾಮೂಹಿಕ ಗಣೇಶ ವಿಸರ್ಜನೆ ಮೆರವಣಿಗೆಗೆ ಆಟೋ ಪ್ರಚಾರಕ್ಕೆ ಚಾಲನೆ: ಸಂಸದ ಯದುವೀರ್ ಚಾಲನೆ


ಮೈಸೂರು: ಮೈಸೂರು ಸಾರ್ವಜನಿಕ ಗಣೇಶ ವಿಸರ್ಜನಾ ಸಮಿತಿ ವತಿಯಿಂದ ಸೆ. 20ರಂದು ನಗರದ ವೀರನಗೆರೆ ವೀರ ಗಣಪತಿ ದೇವಸ್ಥಾನದಿಂದ ಆರಂಭವಾಗಲಿರುವ 23ನೇ ವರ್ಷದ ಸಾರ್ವಜನಿಕ ಗಣೇಶ ವಿಸರ್ಜನಾ ಮೆರವಣಿಗೆಯ ಅಂಗವಾಗಿ ಆಟೋ ಪ್ರಚಾರ ಅಭಿಯಾನಕ್ಕೆ ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಚಾಲನೆ ನೀಡಿದರು.
ನಗರದ ಕೋಟೆ ಆಂಜನೇಯಸ್ವಾಮಿ ದೇವಸ್ಥಾನದ ಮುಂಭಾಗ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ 25ಕ್ಕೂ ಹೆಚ್ಚು ಆಟೋ ರಿಕ್ಷಾಗಳಿಗೆ ಕೇಸರಿ ಧ್ವಜ ವಿತರಿಸಿ, ಮೈಸೂರು ಸಾರ್ವಜನಿಕ ಗಣೇಶ ವಿಸರ್ಜನಾ ಮಹೋತ್ಸವದ ಸ್ಟಿಕ್ಕರ್‌ಗಳನ್ನು ಅಂಟಿಸುವ ಮೂಲಕ ಪ್ರಚಾರ ವಾಹನಗಳಿಗೆ ಚಾಲನೆ ನೀಡಲಾಯಿತು.
ಈ ಸಂದರ್ಭದಲ್ಲಿ ಮಾತನಾಡಿದ ಯದುವೀರ್ , ಗಣೇಶೋತ್ಸವವು ಕೇವಲ ಧಾರ್ಮಿಕ ಆಚರಣೆಯಲ್ಲ, ಸಮಾಜದಲ್ಲಿ ಏಕತೆ, ಸಾಂಸ್ಕöÈತಿಕ ಮೌಲ್ಯಗಳು ಹಾಗೂ ರಾಷ್ಟçಭಕ್ತಿಯನ್ನು ಬೆಳೆಸುವ ಹಬ್ಬವಾಗಿದೆ. ಸಾರ್ವಜನಿಕ ಗಣೇಶ ವಿಸರ್ಜನಾ ಮೆರವಣಿಗೆಗೆ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕು ಎಂದು ಕರೆ ನೀಡಿದರು.
ಕಾರ್ಯಕ್ರಮದಲ್ಲಿ ಶಾಸಕ ಟಿ.ಎಸ್. ಶ್ರೀವತ್ಸ, ಮಾಜಿ ಸಂಸದ ಪ್ರತಾಪ್ ಸಿಂಹ, ಬಿಜೆಪಿ ನಗರಾಧ್ಯಕ್ಷ ಎಲ್. ನಾಗೇಂದ್ರ, ಮಾಜಿ ಮೇಯರ್ ಶಿವಕುಮಾರ್, ಎನ್.ವಿ. ಫಣೀಶ್, ನಗರ ಪ್ರಧಾನ ಕಾರ್ಯದರ್ಶಿ ಸೋಮಸುಂದರ್, ಸ್ಮಾರ್ಟ್ ಮಂಜು, ಆನಂದ್, ಜಾಗರಣ ವೇದಿಕೆಯ ವಸಂತ್, ಚಂದ್ರು, ಸ್ವಾಮಿ, ತಂಬಿ, ರಾಜನ್, ನವೀನ್, ರಾಜ್, ಕಿರಣ್ ಸಿಂಗ್, ಪ್ಯಾಂಟ್ ರವಿ, ದಿನೇಶ್ ಗೌಡ, ರಾಕೇಶ್ ಭಟ್, ಕೇಬಲ್ ಮಹೇಶ್, ಜೋಗಿ ಮಂಜು, ದೂರ ರಾಜಣ್ಣ ಸೇರಿದಂತೆ ನೂರಾರು ಹಿಂದೂ ಕಾರ್ಯಕರ್ತರು ಉಪಸ್ಥಿತರಿದ್ದರು.
ಮೈಸೂರು ಸಾರ್ವಜನಿಕ ಗಣೇಶ ವಿಸರ್ಜನಾ ಸಮಿತಿಯು ಆಯೋಜಿಸಿರುವ ಈ ಮೆರವಣಿಗೆಗೆ ನಗರದ ವಿವಿಧ ಭಾಗಗಳಲ್ಲಿ ಪ್ರಚಾರ ಕಾರ್ಯಗಳು ಭರದಿಂದ ಸಾಗುತ್ತಿದೆ.