Skip to main content

3Kaala News

ಸುಭಾಷಿತ 

ನಾವು ಏನು ಹೇಳುತ್ತೇವೆ ಅನ್ನೋದಕ್ಕಿಂತ, ಹೇಗೆ ಹೇಳುತ್ತೇವೆ ಅನ್ನುವುದೇ ಬದುಕಿನ ಗುಟ್ಟು.
ಮಾತಿನ ಶೈಲಿ ಹೃದಯ ಗೆಲ್ಲಬಹುದು, ಸಮಸ್ಯೆ ಪರಿಹರಿಸಬಹುದು, ಅಥವಾ ಸಂಬಂಧ ಉಳಿಸಬಹುದು.
ಮಾತು ಮನುಷ್ಯನ ಶಕ್ತಿ — ಅದನ್ನು ಜಾಣ್ಮೆಯಿಂದ ಬಳಕೆ ಮಾಡಿದರೆ ಬದುಕು ಸುಲಭವಾಗುತ್ತದೆ

 

Current Weather Card
--°C
Mysore, IN
Loading...
☁️

Live Gold Silver Fuel News Ticker
Loading live rates...

ಮಹಿಳಾ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಅಂಬೇಡ್ಕರ್ ಓದು ಕಾರ್ಯಕ್ರಮ


ಮೈಸೂರು; ಕನ್ನಡ ಮತ್ತು ಸಂಸ್ಕöÈತಿ ಇಲಾಖೆ ಮೈಸೂರು ಜಿಲ್ಲೆ ಮೈಸೂರು, ಮಹಿಳಾ ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಬೈರಾಪುರ, ಟಿ ನರಸೀಪುರ ತಾಲ್ಲೂಕು ಇವರ ಸಂಯುಕ್ತಾಶ್ರಯದಲ್ಲಿ ಇಂದು ಮಹಿಳಾ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಭಾರತ ರತ್ನ ಡಾ. ಬಿ. ಆರ್ ಅಂಬೇಡ್ಕರ್ ಓದು ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಕಾರ್ಯಕ್ರಮದಲ್ಲಿ ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ನೇತ್ರಾವತಿ, ಉಪನ್ಯಾಸಕಿ ಗೀತಾ ಎಂ. ಐ ಕ್ಯೂ ಎಸ್ ಸಿ ಸಂಚಾಲಕ ದಮ್ಮರಪ್ಪ ಕೆ ಹಾಗೂ ಇನ್ನಿತರರು ಭಾಗವಹಿಸಿದರು.
ಕಾರ್ಯಕ್ರಮದ ಅಂಗವಾಗಿ ವಿದ್ಯಾರ್ಥಿನಿಯರಿಗೆ ಭಾರತರತ್ನ ಡಾ. ಬಿ. ಆರ್. ಅಂಬೇಡ್ಕರ್ ಅವರ ಕುರಿತು ರಸಪ್ರಶ್ನೆಯನ್ನು ಆಯೋಜಿಸಿಲಾಗಿತ್ತು. ರಸಪ್ರಶ್ನೆಯಲ್ಲಿ ಭಾಗವಹಿಸಿ ವಿಜೇತರ ವಿದ್ಯಾರ್ಥಿಗಳಿಗೆ ಡಾ. ಬಿ. ಆರ್. ಅಂಬೇಡ್ಕರ್ ಪುಸ್ತಕಗಳನ್ನು ಬಹುಮಾನವಾಗಿ ನೀಡಲಾಗಿತ್ತು ಹಾಗೂ ಭಾಗವಹಿಸಿದ ಎಲ್ಲಾ ವಿದ್ಯಾರ್ಥಿನಿಯರಿಗೂ ಪ್ರಮಾಣ ಪತ್ರವನ್ನು ವಿತರಿಸಲಾಯಿತ್ತು.