Skip to main content

3Kaala News

ಸುಭಾಷಿತ 

ನಾವು ಏನು ಹೇಳುತ್ತೇವೆ ಅನ್ನೋದಕ್ಕಿಂತ, ಹೇಗೆ ಹೇಳುತ್ತೇವೆ ಅನ್ನುವುದೇ ಬದುಕಿನ ಗುಟ್ಟು.
ಮಾತಿನ ಶೈಲಿ ಹೃದಯ ಗೆಲ್ಲಬಹುದು, ಸಮಸ್ಯೆ ಪರಿಹರಿಸಬಹುದು, ಅಥವಾ ಸಂಬಂಧ ಉಳಿಸಬಹುದು.
ಮಾತು ಮನುಷ್ಯನ ಶಕ್ತಿ — ಅದನ್ನು ಜಾಣ್ಮೆಯಿಂದ ಬಳಕೆ ಮಾಡಿದರೆ ಬದುಕು ಸುಲಭವಾಗುತ್ತದೆ

 

Current Weather Card
--°C
Mysore, IN
Loading...
☁️

Live Gold Silver Fuel News Ticker
Loading live rates...

ವಿದ್ಯಾರ್ಥಿಗಳು ಶಿಕ್ಷಣದ ಜೊತೆಗೆ ಮಾನವೀಯ ಮೌಲ್ಯಗಳನ್ನು ಮೈಗೂಡಿಸಿಕೊಳ್ಳಬೇಕು : ಡಾ. ಚಂದ್ರಶೇಖರ್ 

ವಿವೇಕಾನಂದ ಪದವಿ ಪೂರ್ವ ಕಾಲೇಜಿನಲ್ಲಿ ವಿದ್ಯಾರ್ಥಿಗಳಿಗೆ ಸ್ವಾಗತ ಕಾರ್ಯಕ್ರಮ.

ಪಿರಿಯಾಪಟ್ಟಣ: ವಿದ್ಯಾರ್ಥಿಗಳು ಶಿಕ್ಷಣದ ಜೊತೆಗೆ ಮಾನವೀಯ ಮೌಲ್ಯಗಳನ್ನು ಮೈಗೂಡಿಸಿಕೊಂಡು ಗುರಿ, ಸಾಧನೆ ಕಡೆಗೆ ಗಮನ ಹರಿಸಬೇಕು ಎಂದು ಮೈಸೂರು ಮಾನಸಗಂಗೋತ್ರಿ ಅಭಿವೃದ್ಧಿ ಅಧ್ಯಯನ ಸಂಸ್ಥೆ ನಿರ್ದೇಶಕರಾದ ಡಾ. ಚಂದ್ರಶೇಖರ್ ತಿಳಿಸಿದರು.

ಪಟ್ಟಣದ ವಿವೇಕಾನಂದ ಪದವಿ ಪೂರ್ವ ಕಾಲೇಜಿನಲ್ಲಿ ನಡೆದ ಪ್ರಥಮ ಪಿಯುಸಿ ವಿದ್ಯಾರ್ಥಿಗಳಿಗೆ ಸ್ವಾಗತ ಕಾರ್ಯಕ್ರಮ ಹಾಗೂ ಸಾಂಸ್ಕೃತಿಕ ಮತ್ತು ಕ್ರೀಡಾ ಚಟುವಟಿಕೆಗಳ ಉದ್ಘಾಟನ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು ವಿದ್ಯಾರ್ಥಿಗಳು ಶಾಲಾ-ಕಾಲೇಜಿನಲ್ಲಿ ಕೇವಲ ಅಂಕಗಳಿಸುವುದೇ ಅವರ ಗುರಿಯಾಗಬಾರದು ಅಂಕಗಳ ಜೊತೆಗೆ ಉತ್ತಮ ಮಾನವೀಯಮೌಲ್ಯಗಳನ್ನು ತಮ್ಮ ಜೀವನದಲ್ಲಿ ಮೈಗುಡಿಸಿಕೊಳ್ಳಬೇಕು ಪದವಿ ಪೂರ್ವ ಹಂತದಲ್ಲಿ ಗುರಿ ಸಾಧನೆಗೆ ಹೆಚ್ಚಿನ ಗಮನಹರಿಸಿದರೆ ಯಶಸ್ಸು ಗಳಿಸಲು ಸಾಧ್ಯವಾಗುತ್ತದೆ ಪ್ರತಿಯೊಬ್ಬ ವಿದ್ಯಾರ್ಥಿಯಲ್ಲಿಯೂ ಒಂದಿಲ್ಲೊಂದು ಪ್ರತಿಭೆಯಿದ್ದು ಅದನ್ನು ಸೂಕ್ತವಾದ ವೇದಿಕೆ ಮತ್ತು ಸೂಕ್ತ ಸಂದರ್ಭದಲ್ಲಿ ಬಳಸಿಕೊಂಡು ಸಮಾಜಮುಖಿಯಾಗಿ ಬದುಕಬೇಕು ಜೊತೆಗೆ ಉತ್ತಮ ಸಂಸ್ಕೃತಿ, ಸಾಮಾಜಿಕ ಕಳಕಳಿ, ಮೈಗೂಡಿಸಿಕೊಂಡು ವಿದ್ಯಾಭ್ಯಾಸ ಮಾಡಿದರೆ ಮುಂದಿನ ಜೀವನ ಸುಖಕರವಾಗಿರುತ್ತದೆ. ದ್ವೇಷ ಮತ್ತು ಹಗೆತನ ಸಾಧಿಸುವ ಸ್ವಭಾವದಿಂದ ವಿದ್ಯಾರ್ಥಿಗಳು ದೂರವಿರುವ ಮೂಲಕ ಶಿಸ್ತು ಸಂಯಮ ಮತ್ತು ಏಕಾಗ್ರತೆಯನ್ನು ಮೈಗೂಡಿಸಿಕೊಂಡು ಉತ್ತಮ ಸಾಧನೆ ಮಾಡಬೇಕು ಎಂದು ಹೇಳಿದರು.

ಪ್ರಾಂಶುಪಾಲರಾದ ರವಿ ಮಾತನಾಡಿ ನಮ್ಮ ಕಾಲೇಜಿನಲ್ಲಿ ಹಲವಾರು ವರ್ಷಗಳಿಂದ ಉತ್ತಮ ಫಲಿತಾಂಶವನ್ನು ನೀಡುತ್ತಿದ್ದೇವೆ ಸಂಸ್ಥೆಯಲ್ಲಿ ವಿದ್ಯಾರ್ಥಿಗಳಿಗೆ ಸಂಸ್ಕಾರಯುತ ಶಿಕ್ಷಣವನ್ನು ನೀಡುತ್ತಿದೆ ಕಡಿಮೆ ಶುಲ್ಕದಲ್ಲಿ ಉತ್ತಮ ಶಿಕ್ಷಣವನ್ನು ನೀಡುವ ಉದ್ದೇಶದಿಂದ ಸಂಸ್ಥೆಯನ್ನು ಪ್ರಾರಂಭಿಸಿದ್ದೇವೆ ಗ್ರಾಮೀಣ ಭಾಗದಲ್ಲಿ ಗುಣಮಟ್ಟದ ಶಿಕ್ಷಣವನ್ನು ನೀಡಿ ವಿದ್ಯಾರ್ಥಿಗಳ ಭವಿಷ್ಯ ರೂಪಿಸಿಕೊಡುವಲ್ಲಿ ವಿದ್ಯಾಸಂಸ್ಥೆಯು ಕಾರ್ಯ ನಿರ್ವಹಿಸುತ್ತಿದೆ ಎಂದು ಹೇಳಿದರು.

ದ್ವಿತೀಯ ಪಿಯುಸಿಯಲ್ಲಿ ಅತೀ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಸನ್ಮಾನಿಸಲಾಯಿತು,

ಈ ಸಂದರ್ಭದಲ್ಲಿ ವಿಶ್ರಾಂತ ಕನ್ನಡ ಪ್ರಾಧ್ಯಪಕ ಪ್ರೋ. ಕೃಷ್ಣಮೂರ್ತಿ, ಲೋಕೋಪಯೋಗಿ ಸಹಾಯಕ ಎಇಇ ಕುಮಾರ್ ಎನ್. ಜೆ, ಸೋಮಣ್ಣ, ಸಾಲಿಗ್ರಾಮ ಮೊರಾರ್ಜಿ ಶಾಲೆ ಪ್ರಾಂಶುಪಾಲ ಸ್ವಾಮಿ, ಉಪನ್ಯಾಸಕರಾದ ವೆಂಕಟೇಶ್, ಚೆನ್ನಾಂಬಿಕ ಸೇರಿದಂತೆ ಇತರರು ಇದ್ದರು