Skip to main content

3Kaala News

ಸುಭಾಷಿತ 

ಪಕ್ಕದಲ್ಲಿರುವವನ ತಟ್ಟೆಯಲ್ಲಿ ಏನಿದೆ ಅಂತ ಯಾವತ್ತೂ ಇಣುಕಿ ನೋಡಬೇಡ. ಕಾರಣ ಅಲ್ಲಿ ಜಾಸ್ತಿಯಿದ್ದರೆ, ನಿನಗೆ ಸಂಕಟವಾಗುತ್ತದೆ.ಅಲ್ಲಿ ಕಡಿಮೆ ಇದ್ದರೆ, ನಿನಗೆ ಅಹಂಕಾರ ಬರುತ್ತದೆ.ಎರಡೂ ಒಳ್ಳೆಯದಲ್ಲ.ನಮ್ಮ ತಟ್ಟೆಯನ್ನು ನಾವು ನೋಡಿಕೊಂಡಿದ್ದರೆ, ಸಿಗುವ ಸಂತೋಷವೇ ಬೇರೆ

Current Weather Card
--°C
Mysore, IN
Loading...
☁️

Live Gold Silver Fuel News Ticker
Loading live rates...

ನಿವಾಸಿಗಳಿಗೆ ಮಣ್ಣಿನ ಗೌರಿ ಗಣೇಶ ಮೂರ್ತಿ ವಿತರಣೆ


ಮೈಸೂರು: ಗೌರಿ ಗಣೇಶ ಹಬ್ಬದ ಹಿನ್ನೆಲೆಯಲ್ಲಿ ಚಾಮರಾಜ ಕ್ಷೇತ್ರದ ಶಾಸಕ ಹರೀಶ್ ಗೌಡರವರು ವಾರ್ಡ್ ನಂ. 23ರ ಕುರುಬಗೆರೆ ಅರಳಿಕಟ್ಟೆ ದೇವಸ್ಥಾನದ ಮುಂಭಾಗ ಸ್ಥಳೀಯ ನಿವಾಸಿಗಳಿಗೆ ಉಚಿತವಾಗಿ ಮಣ್ಣಿನ ಗೌರಿ-ಗಣೇಶ ಮೂರ್ತಿಗಳನ್ನು ವಿತರಿಸಿ ಹಬ್ಬದ ಶುಭಾಶಯ ಕೋರಿದರು.
ಬಳಿಕ ಮಾತನಾಡಿ, ಗೌರಿ-ಗಣೇಶ ಹಬ್ಬವು ನಮ್ಮ ಸಂಸ್ಕöÈತಿ, ಸಂಪ್ರದಾಯ ಮತ್ತು ಕುಟುಂಬ ಮೌಲ್ಯಗಳನ್ನು ಪ್ರತಿಬಿಂಬಿಸುವ ಹಬ್ಬವಾಗಿದೆ. ಪರಿಸರ ಸಂರಕ್ಷಣೆಯ ದೃಷ್ಟಿಯಿಂದ ಸಾರ್ವಜನಿಕರು ಪ್ಲಾಸ್ಟರ್ ಆಫ್ ಪ್ಯಾರಿಸ್ (ಪಿಒಪಿ) ಮೂರ್ತಿಗಳ ಬದಲಾಗಿ ಮಣ್ಣಿನ ಮೂರ್ತಿಗಳನ್ನು ಬಳಸಬೇಕು ಎಂದು ತಿಳಿಸಿದರು.
ಮಣ್ಣಿನ ಮೂರ್ತಿಗಳ ಬಳಕೆಯಿಂದ ಪರಿಸರಕ್ಕೆ ಯಾವುದೇ ಹಾನಿಯಾಗುವುದಿಲ್ಲ. ಹಬ್ಬದ ಸಂಭ್ರಮದ ಜೊತೆಗೆ ಪರಿಸರ ಕಾಳಜಿಯೂ ನಮ್ಮೆಲ್ಲರ ಜವಾಬ್ದಾರಿಯಾಗಿದ್ದು, ಈ ನಿಟ್ಟಿನಲ್ಲಿ ಪ್ರತಿಯೊಬ್ಬರೂ ಪರಿಸರ ಸ್ನೇಹಿ ಆಚರಣೆಗೆ ಮುಂದಾಗಬೇಕು ಎಂದು ಹೇಳಿದರು.
ಗೌರಿ ಗಣೇಶ ಹಬ್ಬವು ಸಮಾಜದಲ್ಲಿ ಸೌಹಾರ್ದತೆ, ಏಕತೆ ಮತ್ತು ಭಕ್ತಿಭಾವವನ್ನು ಬೆಳೆಸುವ ಹಬ್ಬವಾಗಿದ್ದು, ಎಲ್ಲರೂ ಶಾಂತಿ, ಸಡಗರ ಮತ್ತು ಅರ್ಥಪೂರ್ಣತೆಯಿಂದ ಹಬ್ಬವನ್ನು ಆಚರಿಸಬೇಕು ಎಂದು ಹೇಳಿದರು
ಈ ಸಂದರ್ಭದಲ್ಲಿ ಮುಖಂಡ ದೇವರಾಜ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ನಾಗಭೂಷಣ್, ಕನಕ ಪತ್ತಿನ ಸಹಕಾರಿ ಸಂಘದ ನಿರ್ದೇಶಕ ರವಿಚಂದ್ರ, ನವೀನ್, ಲೋಕೇಶ್, ಮಂಗಳಾ ,ಶಾಂತ, ಮಂಜುನಾಥ ,ಜಗದೀಶ್, ಹೇಮಂತ್ ,ಹರ್ಷ ,ವಿನಯ್ ಮುಂತಾದವರು ಇದ್ದರು.