
ಮೈಸೂರು: ನಗರದ ಚಾಮುಂಡಿಪುರ ವೃತ್ತದಲ್ಲಿ ಗೌರಿ-ಗಣೇಶ ಹಬ್ಬದ ಅಂಗವಾಗಿ ಪೌರಕಾರ್ಮಿಕರಿಗೆ ಗೌರಿ ಬಾಗಿನ ವಿತರಿಸಿ ಹಬ್ಬದ ಶುಭಾಶಯ ಕೋರಲಾಯಿತು.
ಈ ಸಂದರ್ಭದಲ್ಲಿ ಮಾತನಾಡಿದ ನಗರಪಾಲಿಕೆಯ ಮಾಜಿ ಸದಸ್ಯ ಮಾ.ವಿ.ರಾಮಪ್ರಸಾದ್, ನಗರವನ್ನು ಸ್ವಚ್ಛವಾಗಿಡುವಲ್ಲಿ ಪೌರಕಾರ್ಮಿಕರ ಸೇವೆ ಅತ್ಯಂತ ಮಹತ್ವದ್ದಾಗಿದೆ. ಹಬ್ಬದ ಸಂಭ್ರಮವನ್ನು ಅವರೊಂದಿಗೆ ಹಂಚಿಕೊಳ್ಳುವ ಉದ್ದೇಶದಿಂದ ಗೌರಿ ಬಾಗಿನ ನೀಡಿ ಗೌರವಿಸಲಾಗಿದೆ ಎಂದು ತಿಳಿಸಿದರು. ಸಮಾಜದ ಸ್ವಚ್ಛತೆ ಹಾಗೂ ಆರೋಗ್ಯಕರ ಪರಿಸರ ನಿರ್ಮಾಣದಲ್ಲಿ ಪೌರಕಾರ್ಮಿಕರ ಕೊಡುಗೆ ಶ್ಲಾಘನೀಯವಾಗಿದ್ದು, ಅವರ ಸೇವೆಯನ್ನು ಎಲ್ಲರೂ ಗೌರವಿಸಬೇಕು ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಉದ್ಯಮಿಗಳಾದ ರಾಜು, ನಗರಪಾಲಿಕೆ ಮಾಜಿ ಸದಸ್ಯ ಜಗದೀಶ್, ದೂರ ರಾಜಣ್ಣ, ಜತ್ತಿ ಪ್ರಸಾದ್, ಶಿವಲಿಂಗಸ್ವಾಮಿ, ಸೋಮೇಶ್, ಅರವಿಂದ್, ಮಂಜುನಾಥ್, ಕಿರಣ್, ಶಿವು, ಲಕ್ಷಿ÷್ಮÃನಾರಾಯಣ, ಮಧು, ಸುಬ್ರಹ್ಮಣ್ಯ ನಾಯಕ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.