Skip to main content

3Kaala News

ಸುಭಾಷಿತ 

ಜೀವನ ಅನ್ನುವ ಜೋಳಿಗೆಯಲ್ಲಿ ಭಗವಂತ ಎಲ್ಲರಿಗೂ ಸಂತೋಷದ ಬುತ್ತಿಯನ್ನು ಇಟ್ಟು ಕಳಿಸುತ್ತಾನೆ. ಆದರೆ ನಾವು ನಮ್ಮ ಜೋಳಿಗೆಯಲ್ಲಿ ಏನಿದೆ ಎಂದು ನೋಡಿ ಆನಂದಪಡುವುದನ್ನು ಬಿಟ್ಟು,ಬೇರೆಯವರ ಜೋಳಿಗೆಯಲ್ಲಿ ಏನಿದೆ ಎಂದು ತಿಳಿದುಕೊಳ್ಳುವ ಕೆಟ್ಟ ಕುತೂಹಲದಿಂದ ಸದಾ ದುಃಖಿಯಾಗಿರುತ್ತೇವೆ.

Current Weather Card
--°C
Mysore, IN
Loading...
☁️

Live Gold Silver Fuel News Ticker
Loading live rates...

ಎರಡು ಬೈಕ್‌ಗಳ ನಡುವೆ ಡಿಕ್ಕಿ; ಒಬ್ಬನ ಸಾವು, ಮತ್ತೊಬ್ಬನ ಸ್ಥಿತಿ ಗಂಭೀರ


ಮೈಸೂರು; ಎರಡು ಬೈಕ್‌ಗಳ ನಡುವೆ ಮುಖಾ ಮುಖಿ ಡಿಕ್ಕಿ ಸಂಭವಿಸಿ ಒಬ್ಬ ಸಾವಿಗೀಡಾಗಿ, ಮತ್ತೊಬ್ಬ ಗಂಭೀರವಾಗಿ ಗಾಯಗೊಂಡಿರುವ ಘಟನೆ ತಿ.ನರಸೀಪುರ ತಾಲೂಕಿನ ಬನ್ನೂರು ಹೋಬಳಿಯ ಅತ್ತಹಳ್ಳಿ ಗ್ರಾಮದಲ್ಲಿ ಸಂಭವಿಸಿದೆ.
ಅತ್ತಹಳ್ಳಿ ಗ್ರಾಮದ ನಿವಾಸಿ ಉಮೇಶ್ ಮೃತಪಟ್ಟ ದುರ್ದೈವಿ.
ವೀರೇಶ್ ಎಂಬುವವರಿಗೆ ಗಂಭೀರ ಗಾಯಗಾಯಗೊಂಡಿದ್ದು, ಅವರನ್ನು ಬನ್ನೂರಿಗೆ ಚಿಕಿತ್ಸೆಗೆ ಕರೆತಂದಾಗ
ಇಲ್ಲಿ ಚಿಕಿತ್ಸೆ ಸಾಧ್ಯವಿಲ್ಲ, ಮೈಸೂರಿಗೆ ಕರೆದುಕೊಂಡು ಹೋಗುವಂತೆ ವೈದ್ಯರ ಸೂಚಿಸಿದರು. ಆದರೆ ಸಕಾಲಕ್ಕೆ ಆಂಬುಲೆನ್ಸ್ ಇಲ್ಲದೆ ಒಂದು ಗಂಟೆಕಾಲ ಕಾಯ್ದ ಕುಟುಂಬಸ್ಥರು, ಬನ್ನೂರು ಆಸ್ಪತ್ರೆಯಲ್ಲಿ ಪರದಾಡಿದರು. ಬಳಿಕ ಖಾಸಗಿ ವಾಹನದಲ್ಲಿ ಮೈಸೂರಿನ ಆಸ್ಪತ್ರೆಗೆ P್ಪರೆತಂದು ದಾಖಲಿಸಿದ್ದಾರೆ. ಘಟನೆ ಸಂಬAಧ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.