Skip to main content

3Kaala News

ಸುಭಾಷಿತ 

ಜೀವನ ಅನ್ನುವ ಜೋಳಿಗೆಯಲ್ಲಿ ಭಗವಂತ ಎಲ್ಲರಿಗೂ ಸಂತೋಷದ ಬುತ್ತಿಯನ್ನು ಇಟ್ಟು ಕಳಿಸುತ್ತಾನೆ. ಆದರೆ ನಾವು ನಮ್ಮ ಜೋಳಿಗೆಯಲ್ಲಿ ಏನಿದೆ ಎಂದು ನೋಡಿ ಆನಂದಪಡುವುದನ್ನು ಬಿಟ್ಟು,ಬೇರೆಯವರ ಜೋಳಿಗೆಯಲ್ಲಿ ಏನಿದೆ ಎಂದು ತಿಳಿದುಕೊಳ್ಳುವ ಕೆಟ್ಟ ಕುತೂಹಲದಿಂದ ಸದಾ ದುಃಖಿಯಾಗಿರುತ್ತೇವೆ.

Current Weather Card
--°C
Mysore, IN
Loading...
☁️

Live Gold Silver Fuel News Ticker
Loading live rates...

ಕ್ರೀಡೆಯಲ್ಲಿ ಸೋಲು-ಗೆಲುವನ್ನು ಸಮಾನವಾಗಿ ಸ್ವೀಕರಿಸಿ: ನಿತಿನ್ ವೆಂಕಟೇಶ್

ಪಿರಿಯಾಪಟ್ಟಣ: ಕ್ರೀಡೆಯಲ್ಲಿ ಗೆಲುವು ಮುಖ್ಯವಾದರೂ ಗೆಲುವಿಗಿಂತ ಕ್ರೀಡಾ ಸ್ಫೂರ್ತಿಯಿಂದ ಎಲ್ಲರೂ ಭಾಗವಹಿಸಿ ಸೋಲು ಗೆಲುವನ್ನು ಸಮಾನವಾಗಿ ಸ್ವೀಕರಿಸುವ ಮನೋಭಾವ ಬೆಳೆಸಿಕೊಳ್ಳಬೇಕು ಎಂದು ತಾಲ್ಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ನಿತಿನ್ ವೆಂಕಟೇಶ್ ತಿಳಿಸಿದರು.

ಪಟ್ಟಣದ ಆನೆಚೌಕೂರು ರಸ್ತೆಯ ಪುಷ್ಪ ಶಾಲೆಯ ಆವರಣದಲ್ಲಿ ಬುಧವಾರ ಆಯೋಜಿಸಿದ್ದ ತಾಲ್ಲೂಕು ಮಟ್ಟದ ಪ್ರೌಢಶಾಲಾ ಕ್ರೀಡಾಕೂಟಕ್ಕೆ ಚಾಲನೆ ನೀಡಿ ಮಾತನಾಡಿದ ಅವರು ಕ್ರೀಡೆಯಲ್ಲಿ ಸತತ ಸೋಲೇ ಗೆಲುವಿನ ಮೆಟ್ಟಿಲು ಎಂಬ ಮಾತು ಕೇವಲ ಸುಳ್ಳು ಭರವಸೆಯಲ್ಲ, ಅದು ಕ್ರೀಡಾಲೋಕದ ಪರಮ ಸತ್ಯ. ಸೋಲುಗಳನ್ನು ಮೆಟ್ಟಿಲುಗಳನ್ನಾಗಿ ಮಾಡಿಕೊಂಡು ಯಶಸ್ಸಿನ ಶಿಖರ ತಲುಪಬೇಕು ಆದ್ದರಿಂದ ವಿದ್ಯಾರ್ಥಿಗಳು ವಿದ್ಯಾಭ್ಯಾಸದ ಅವಧಿಗೆ ಮಾತ್ರ ಕ್ರೀಡೆಯಲ್ಲಿ ಸೀಮಿತಗೊಳಿಸದೆ ಜೀವನದ ಎಲ್ಲ ಹಂತಗಳಲ್ಲೂ ಕ್ರೀಡೆಯಲ್ಲಿ ತೊಡಗಿಸಿಕೊಳ್ಳಬೇಕು. ಇದರಿಂದ ಆರೋಗ್ಯಕರ ಹಾಗೂ ರೋಗ ಮುಕ್ತ ಜೀವನ ನಡೆಸಲು ಸಹಕಾರಿಯಾಗುತ್ತದೆ. ಯುವಕರು ಇಂದು ಮನೆ ಒಳಗೆ ಮೊಬೈಲ್ ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ಹೆಚ್ಚಿನ ಸಮಯ ಕಳೆಯದೆ ಕ್ರೀಡಾ ಸೇರಿದಂತೆ ಇನ್ನಿತರ ಚಟುವಟಿಕೆಯಲ್ಲಿ ಭಾಗವಹಿಸಿ ಎಂದು ಕಿವಿಮಾತು ಹೇಳಿದರು. 

ಬಿಆರ್ಸಿ ಶಿವರಾಜ್ ಮಾತನಾಡಿ ವಿದ್ಯಾರ್ಥಿಗಳು ಸ್ಪರ್ಧೆಗಳ ನಿಯಮಗಳನ್ನು ಕಟ್ಟುನಿಟ್ಟಾಗಿ ಅನುಸರಿಸಬೇಕು. ಸೋಲು-ಗೆಲುವು ಎರಡನ್ನೂ ಸಮಾನವಾಗಿ ಸ್ವೀಕರಿಸಬೇಕು ಎಂದು ವಿಧ್ಯಾರ್ಥಿಗಳಿಗೆ ಸಲಹೆ ನೀಡಿದರು.

ಅಕ್ಷರ ದಾಸೋಹ ಸಹಾಯಕ ನಿರ್ದೇಶಕ ಪ್ರಶಾಂತ್ ಮಾತನಾಡಿ ಯುವಕರು ಕ್ರೀಡೆ ಆಸಕ್ತಿ ಬೆಳೆಸಿಕೊಳ್ಳಬೇಕು, ಇದರಿಂದ ಮಾನಸಿಕ ಒತ್ತಡ ನಿವಾರಣೆ ಹಾಗೂ ಆರೋಗ್ಯದಿಂದ ಇರಲು ಸಾಧ್ಯ. ಮೊಬೈಲ್ ಗಿಳು ಬಿಟ್ಟು ಪಠ್ಯದ ಜತೆಗೆ ಪಠ್ಯೇತರ ಚಟುವಟಿಕೆಗಳಲ್ಲಿ ಭಾಗವಹಿಸಿಬೇಕು. ಕ್ರೀಡೆಯಲ್ಲಿ ಸೋಲು – ಗೆಲುವು ಒಂದು ನಾಣ್ಯದ ಎರಡು ಮುಖಗಳಿದಂತೆ. ಸೋಲೇ ಗೆಲುವಿನ ಮೆಟ್ಟಿಲು ಹಾಗಾಗಿ ಸೋಲು ಗೆಲುವನ್ನು ಸಮಚಿತ್ತದಿಂದ ಸ್ವೀಕಾರ ಮಾಡಬೇಕು ಎಂದರು.

ಈ ಸಂದರ್ಭದಲ್ಲಿ ಪುಷ್ಪ ವಿದ್ಯಾ ಸಂಸ್ಥೆಯ ಪ್ರಾಂಶುಪಾಲರಾದ ರೆ.ಫಾ.ಡಿನ್ಸ್ ಆಂಟೋನಿ, ರೆ.ಫಾ.ಥಾಮಸ್, ಸಂಸ್ಥೆಯ ಆಡಳಿತಾಧಿಕಾರಿ ರೆ.ಫಾ. ರೆನ್ನಿ, ಕಾರ್ಯದರ್ಶಿ ಅಶೋಕ್, ತಾಲ್ಲೂಕು ದೈಹಿಕ ಶಿಕ್ಷಕರ ಪರಿವೀಕ್ಷಕ ಕುಮಾರಸ್ವಾಮಿ,  

 ಪ್ರೌಢಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಪಿ.ವಿ.ದೇವರಾಜ್, ಪುರಸಭಾ ಮಾಜಿ ಸದಸ್ಯ ಪಿ.ವಿ.ರವಿ, ಸರ್ಕಾರಿ ನೌಕರರ ಸಂಘದ ಕ್ರೀಡಾ ಕಾರ್ಯದರ್ಶಿ ರಮೇಶ್, ತಾಲ್ಲೂಕು ದೈಹಿಕ ಶಿಕ್ಷಕರ ಸಂಘದ ಅಧ್ಯಕ್ಷ ಸುರೇಶ್ ನಾಯ್ಕ, ಶಿಕ್ಷಕರಾದ ಶ್ರೀನಿವಾಸ್, ಸ್ಟೆಲ್ಲಾ ಮೇರಿ, ಚರಣ್ ರಾಜ್, ಮಂಜುನಾಥ್, ಮಹದೇವ್, ಟೀಜಾ ಥಾಮಸ್, ನಂದಿನಿ, ಪ್ರಸನ್ನ ಕುಮಾರ್, ಸಜನಾ, ವನಜಾ, ಅಂಜುಂ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.