ವಿದ್ಯಾರ್ಥಿಗಳು ಸ್ವಚ್ಛತೆಗೆ ಹೆಚ್ಚಿನ ಆದ್ಯತೆ ನೀಡಿ; ವೆಂಕಟೇಶ್
ಚಾಮರಾಜನಗರ; ವಿದ್ಯಾರ್ಥಿಗಳು ಸ್ವಚ್ಛತೆಗೆ ಹೆಚ್ಚಿನ ಅದ್ಯತೆ ನೀಡಿದರೆ ನಿಮ್ಮ ಆರೋಗ್ಯ ಚೆನ್ನಾಗಿ ಇರುತ್ತದೆ ಎಂದು ಜಿಲ್ಲಾ ನಗರ ಅಭಿವೃದ್ಧಿ ಕೋಶ ನಿರ್ದೇಶಕ ವೆಂಕಟೇಶ್ ತಿಳಿಸಿದರುನಗರದ ಪಿಡಬ್ಲ್ಯೂಡಿ ಕಾಲೋನಿಯಲ್ಲಿರುವ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಗರಸಭೆ ವತಿಯಿಂದ ಏರ್ಪಡಿಸಿದ ಸ್ವಚ್ಛತೆ ಅಭಿಯಾನ ಕಾರ್ಯಕ್ರಮಕ್ಕೆ ಗಿಡಕ್ಕೆ ನೀರು ಹಾಕುವ ಮೂಲಕ ಚಾಲನೆ ನೀಡಿ ಮಾತನಾಡಿ ಶಾಲಾ-ಕಾಲೇಜುಗಳು ಹಾಗೂ ತಮ್ಮ ಮನೆ ಸುತ್ತಮುತ್ತ ಸ್ವಚ್ಛತೆಗೆ ಹೆಚ್ಚಿನ ಅದ್ಯತೆ ನೀಡಬೇಕು ಹವಾಗ ಉತ್ತಮ ಪರಿಸರದಲ್ಲಿ ತಮ್ಮ ಜ್ಞಾನ ಅಭಿವೃದ್ಧಿ ಆಗುತ್ತದೆ ಇದರಿಂದ ವಿದ್ಯಾಭ್ಯಾಸ…