
ಹೆಚ್.ಡಿ.ಕೋಟೆ : ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್ಐಆರ್) – 2026ರ ಅಂಗವಾಗಿ ಸೆಪ್ಟೆಂಬರ್ 19 ಮತ್ತು 20 ರಂದು ವಿಶೇಷ ಅಭಿಯಾನ ನಡೆಯಲಿದೆ ಎಂದು ಕಾರ್ಯನಿರ್ವಾಹಕ ಅಧಿಕಾರಿ ಹಾಗೂ ತಾಲ್ಲೂಕು ಸ್ವೀಪ್ ನೋಡಲ್ ಅಧಿಕಾರಿ ರವಿಚಂದ್ರ.ಎಸ್ ತಿಳಿಸಿದರು.
ಹೆಚ್.ಡಿ.ಕೋಟೆ ತಾಲ್ಲೂಕಿನ ಅಂತರಸAತೆ ಹೋಬಳಿ ವ್ಯಾಪ್ತೀಯ ಅಂತರಸAತೆಯಲ್ಲಿ ಗುರುವಾರ ತಾಲ್ಲೂಕು ಸ್ವೀಪ್ ಸಮಿತಿ, ಗ್ರಾಮ ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿ ಮಟ್ಟದ ಒಕ್ಕೂಟದ ಸಹಯೋಗದೊಂದಿಗೆ
ಹಮ್ಮಿಕೊಂಡಿದ್ದ ವಿಶೇಷ ಸಮಗ್ರ ಪರಿಷ್ಕರಣೆ-2026ರ ವಿಶೇಷ ಅಭಿಯಾನದ ಪ್ರಚಾರ ಕುರಿತ ಸ್ವೀಪ್ ಚಟುವಟಿಕೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು,
“ಯಾವುದೇ ಅರ್ಹ ಮತದಾರ ಮತದಾನದಿಂದ ಹೊರಗುಳಿಯಬಾರದು” ಎಂಬ ಧ್ಯೇಯದೊಂದಿಗೆ ವಿಶೇಷ ಸಮಗ್ರ ಪರಿಷ್ಕರಣೆ ನಡೆಯುತ್ತಿದ್ದು, ವಿಶೇಷ ಅಭಿಯಾನದ ಅಂಗವಾಗಿ ಸೆಪ್ಟೆಂಬರ್ 19 ಮತ್ತು 20 ರಂದು ಮತಗಟ್ಟೆ ಮಟ್ಟದ ಅಧಿಕಾರಿಗಳು (ಬಿಎಲ್ಒ) ಮತದಾನ ಕೇಂದ್ರದಲ್ಲಿ ಹಾಜರಿದ್ದು, ಕರಡು ಮತದಾರರ ಪಟ್ಟಿಯಲ್ಲಿ ಮತದಾರರ ಹೆಸರುಗಳನ್ನು ಹುಡುಕಲು ಸಹಾಯ ಮಾಡಲಿದ್ದಾರೆ.ಅಲ್ಲದೇ ಕರಡು ಮತದಾರರ ಪಟ್ಟಿಗೆ ಸಂಬAಧಿಸಿದAತೆ ಸಾರ್ವಜನಿಕರಿಗೆ ಮಾಹಿತಿ ಒದಗಿಸುವುದು ಹಾಗೂ ಅರ್ಹ ಮತದಾರರು ಹಕ್ಕು, ಆಕ್ಷೇಪಣೆಗಳನ್ನು ಸಂಗ್ರಹಿಸುವರು ಎಂದು ತಿಳಿಸಿದರು.
ಮತದಾರರ ಪಟ್ಟಿಯಲ್ಲಿ ಹೊಸ ಮತದಾರರ ಸೇರ್ಪಡೆ, ಪಟ್ಟಿಯಿಂದ ಹೆಸರು ತೆಗೆದು ಹಾಕಲು, ವಿಳಾಸ ಬದಲಾವಣೆ, ಹೆಸರು ಅಥವಾ ವಿವರಗಳ ತಿದ್ದುಪಡಿಗೆ ಸಂಬAಧಿಸಿದ ಅರ್ಜಿಗಳನ್ನು ಸ್ವೀಕರಿಸಲಿದ್ದಾರೆ. 2002ರ ಮೂಲ ಮತದಾರರ ಪಟ್ಟಿಯೊಂದಿಗೆ ಮ್ಯಾಪಿಂಗ್ ಆಗದ ಮತದಾರರು, ಮಾಹಿತಿ ದೋಷವಿರುವ ಮತದಾರರಿಗೆ ನೋಟಿಸ್ ನೀಡಲಾಗಿರುತ್ತದೆ. ಅಂತಹ ಮತದಾರರು ತಮ್ಮ ಗುರುತನ್ನು ದೃಢೀಕರಿಸಲು ನಿಗದಿತ ದಾಖಲಾತಿಗಳೊಂದಿಗೆ ಸಂಬAಧಪಟ್ಟ ಇ ಆರ್ ಒ ಅಥವಾ ಎ ಇ ಆರ್ ಒ ಅಧಿಕಾರಿಗಳ ಮುಂದೆ ಖುದ್ದಾಗಿ ಹಾಜರಾಗಬೇಕಾಗುತ್ತದೆ ಎಂದು ತಿಳಿಸಿದರು.
ಕುರಿತ ಸ್ವೀಪ್ ಚಟುವಟಿಕೆ ಕಾರ್ಯಕ್ರಮ ಹಮ್ಮಿಕೊಂಡು, ಅಂತರಸAತೆ ಗ್ರಾಮ ಪಂಚಾಯಿತಿ ಆವರಣ ಹಾಗೂ ಮೈಸೂರು-ಮಾನಂದವಾಡಿ ಮುಖ್ಯ ರಸ್ತೆಯಲ್ಲಿ ಮಾನವ ಸರಪಳಿ ನಿರ್ಮಿಸಿ, ಕಾಲ್ನಡಿಗೆ ಜಾಥಾ ನಡೆಸಿ, ಜನಸಂದಣಿ ಸ್ಥಳದಲ್ಲಿ ಪೋಸ್ಟರ್ ಅಂಟಿಸಿ, ಪ್ಲ ಕಾರ್ಡ್ ಪ್ರದರ್ಶಿಸಿ ಹಾಗೂ ಸಾರ್ವಜನಿಕರಿಗೆ ಕರಪತ್ರಗಳನ್ನು ವಿತರಿಸುವ ಮೂಲಕ ವಿಶೇಷ ಅಭಿಯಾನದ ಬಗ್ಗೆ ಮತದಾರರಿಗೆ ಜಾಗೃತಿ ಮೂಡಿಸಲಾಯಿತು.
ಈ ಸಂದರ್ಭದಲ್ಲಿ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಪುಷ್ಪಬಾಯಿ, ತಾಲ್ಲೂಕು ಮಾಹಿತಿ ಶಿಕ್ಷಣ ಹಾಗೂ ಸಂವಹನ ಸಂಯೋಜಕ ಎಸ್.ನಿಂಗರಾಜು, ಸಂಜೀವಿನಿ ಎನ್.ಆರ್.ಎಲ್.ಎಂ ಸಿಬ್ಬಂದಿಗಳಾದ ಟಿ.ಶ್ರೀಕಾಂತ್, ಎಸ್.ರಾಜಶೇಖರ ಹಾಗೂ ಗ್ರಾಮ ಪಂಚಾಯಿತಿ ಸಿಬ್ಬಂದಿಗಳಾದ ಕುಮಾರ್, ಜಯಕುಮಾರ್ ಹಾಗೂ ಇತರರು ಇದ್ದರು.