Skip to main content

3Kaala News

ಸುಭಾಷಿತ 

ಜೀವನ ಅನ್ನುವ ಜೋಳಿಗೆಯಲ್ಲಿ ಭಗವಂತ ಎಲ್ಲರಿಗೂ ಸಂತೋಷದ ಬುತ್ತಿಯನ್ನು ಇಟ್ಟು ಕಳಿಸುತ್ತಾನೆ. ಆದರೆ ನಾವು ನಮ್ಮ ಜೋಳಿಗೆಯಲ್ಲಿ ಏನಿದೆ ಎಂದು ನೋಡಿ ಆನಂದಪಡುವುದನ್ನು ಬಿಟ್ಟು,ಬೇರೆಯವರ ಜೋಳಿಗೆಯಲ್ಲಿ ಏನಿದೆ ಎಂದು ತಿಳಿದುಕೊಳ್ಳುವ ಕೆಟ್ಟ ಕುತೂಹಲದಿಂದ ಸದಾ ದುಃಖಿಯಾಗಿರುತ್ತೇವೆ.

Current Weather Card
--°C
Mysore, IN
Loading...
☁️

Live Gold Silver Fuel News Ticker
Loading live rates...

ಚಿತ್ರ ನಟ ಡಾ.ವಿಷ್ಣುವರ್ಧನ್ ಜನ್ಮ ದಿನಾಚರಣೆ


ಮೈಸೂರು: ತಾಲೂಕಿನ ಉದ್ಬೂರು ಗೇಟ್ ಸಮೀಪ ಇರುವ ಡಾ. ವಿಷ್ಣುವರ್ಧನ್ ಸ್ಮಾರಕದಲ್ಲಿ ಚಿತ್ರ ನಟ ಡಾ. ವಿಷ್ಣುವರ್ಧನ್ ಅವರ 76ನೇ ಜನ್ಮದಿನಾಚರಣೆಯನ್ನು ಅಭಿಮಾನಿಗಳು ಸಂಭ್ರಮದಿAದ ಆಚರಿಸಿದರು.
ಈ ಸಂದರ್ಭದಲ್ಲಿ ಸ್ಮಾರಕಕ್ಕೆ ಆಗಮಿಸಿದ ನೂರಾರು ಅಭಿಮಾನಿಗಳಿಗೆ ಹಿರಿಯ ಚಿತ್ರ ನಟಿ ಭಾರತಿ ವಿಷ್ಣುವರ್ಧನ್ ಅವರು ಅನ್ನದಾನ ಮಾಡುವ ಮೂಲಕ ಜನ್ಮದಿನೋತ್ಸವಕ್ಕೆ ವಿಶೇಷ ಮೆರುಗು ತಂದರು. ಅಭಿಮಾನಿಗಳೊಂದಿಗೆ ಆತ್ಮೀಯವಾಗಿ ಬೆರೆತು ಶುಭಾಶಯಗಳನ್ನು ಸ್ವೀಕರಿಸಿದ ಅವರು, ವಿಷ್ಣುವರ್ಧನ್ ಅವರ ಮೇಲಿನ ಅಭಿಮಾನ ಮತ್ತು ಪ್ರೀತಿಯನ್ನು ಸ್ಮರಿಸಿದರು.
ಅನ್ನದಾನ ಕಾರ್ಯಕ್ರಮದಲ್ಲಿ ಪರಿಸರ ಜಾಗೃತಿ ವೇದಿಕೆ ಅಧ್ಯಕ್ಷ ಬನ್ನೂರು ಮಹೇಂದ್ರಸಿAಗ್ ಕಾಳಪ್ಪ, ನಟರಾಜ್, ಗಿರೀಶ್, ಎಸ್.ಎನ್. ರಾಜೇಶ್, ಮಹದೇವ್ ಸೇರಿದಂತೆ ಅನೇಕ ಗಣ್ಯರು ಹಾಗೂ ನೂರಾರು ಅಭಿಮಾನಿಗಳು ಭಾಗವಹಿಸಿದ್ದರು.
ವಿಷ್ಣುವರ್ಧನ್ ಅವರ ಜನ್ಮದಿನದ ಅಂಗವಾಗಿ ಅಭಿಮಾನಿಗಳು ಪುಷ್ಪನಮನ ಸಲ್ಲಿಸಿ, ಕೇಕ್ ಕತ್ತರಿಸಿ, ವಿವಿಧ ಸೇವಾ ಕಾರ್ಯಕ್ರಮಗಳನ್ನು ನಡೆಸುವ ಮೂಲಕ ತಮ್ಮ ನೆಚ್ಚಿನ ನಟನಿಗೆ ಗೌರವ ಅರ್ಪಿಸಿದರು.