Skip to main content

3Kaala News

ಸುಭಾಷಿತ 

ಜೀವನ ಅನ್ನುವ ಜೋಳಿಗೆಯಲ್ಲಿ ಭಗವಂತ ಎಲ್ಲರಿಗೂ ಸಂತೋಷದ ಬುತ್ತಿಯನ್ನು ಇಟ್ಟು ಕಳಿಸುತ್ತಾನೆ. ಆದರೆ ನಾವು ನಮ್ಮ ಜೋಳಿಗೆಯಲ್ಲಿ ಏನಿದೆ ಎಂದು ನೋಡಿ ಆನಂದಪಡುವುದನ್ನು ಬಿಟ್ಟು,ಬೇರೆಯವರ ಜೋಳಿಗೆಯಲ್ಲಿ ಏನಿದೆ ಎಂದು ತಿಳಿದುಕೊಳ್ಳುವ ಕೆಟ್ಟ ಕುತೂಹಲದಿಂದ ಸದಾ ದುಃಖಿಯಾಗಿರುತ್ತೇವೆ.

Current Weather Card
--°C
Mysore, IN
Loading...
☁️

Live Gold Silver Fuel News Ticker
Loading live rates...

ದೇಶಕ್ಕೆ ಉತ್ತಮ ನಾಗರಿಕರನ್ನು ರೂಪಿಸುವಲ್ಲಿ ಗುರುವಿನ ಪಾತ್ರ ಮಹತ್ವದ್ದಾಗಿದೆ : ಹೆಚ್. ಎನ್. ಸುಧಾಕರ್



ಆದಿಚುಂಚನಗಿರಿ ಶಿಕ್ಷಣ ಸಂಸ್ಥೆಯಲ್ಲಿ ಶಿಕ್ಷಕರ ದಿನಾಚರಣೆ ಹಾಗೂ ಗುರುವಂದನಾ ಕಾರ್ಯಕ್ರಮ


ಪಿರಿಯಾಪಟ್ಟಣ:
ದೇಶಕ್ಕೆ ಉತ್ತಮ ನಾಗರಿಕರನ್ನು ರೂಪಿಸುವಲ್ಲಿ ಗುರುವಿನ ಪಾತ್ರ ಮಹತ್ವದ್ದಾಗಿದೆ ಎಂದು ಪಿರಿಯಾಪಟ್ಟಣ ಆದಿಚುಂಚನಗಿರಿ ಶಿಕ್ಷಣ ಸಂಸ್ಥೆಯ ವ್ಯವಸ್ಥಾಪಕ ಹೆಚ್. ಎನ್. ಸುಧಾಕರ್ ತಿಳಿಸಿದರು.
ಪಟ್ಟಣದ ಶ್ರೀ ಆದಿಚುಂಚನಗಿರಿ ಶಿಕ್ಷಣ ಸಂಸ್ಥೆಯಲ್ಲಿ ಆಯೋಜಿಸಿದ್ದ ಶಿಕ್ಷಕರ ದಿನಾಚರಣೆ ಹಾಗೂ ಗುರುವಂದನಾ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು ಶಿಕ್ಷಕ ವೃತ್ತಿ ಇತರ ಎಲ್ಲಾ ವೃತ್ತಿ ಗಳಿಗಿಂತಲೂ ಶ್ರೇಷ್ಠವಾದದ್ದು. ಆದ್ದರಿಂದ ಶಿಕ್ಷಕರು ಆದರ್ಶ ವಿಚಾರಗಳಿಂದ ಕೂಡಿದ ಶ್ರೇಷ್ಠ ಸಮಾಜ ನಿರ್ಮಾಣಕ್ಕೆ ಮುಂದಾಗಬೇಕು. ವೃತ್ತಿಯಲ್ಲಿನ ಬದ್ದತೆ ಹಾಗೂ ನಿಷ್ಠೆಯಿಂದ ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪ್ರಾಧ್ಯಾಪಕರಾಗಿದ್ದ ಸರ್ವಪಲ್ಲಿ ರಾಧಾಕೃಷ್ಣನ್ ಅವರು ಅತ್ಯಂತ ಕಡಿಮೆ ಅವಧಿಯಲ್ಲಿ ಬಹುದೊಡ್ಡ ಶಿಷ್ಯ ವೃಂದ ಅವರನ್ನು ತಮ್ಮ ಆದರ್ಶ ಗುರುವಾಗಿ ಸ್ವೀಕರಿಸಿತು ಆ ಕಾರಣಕ್ಕಾಗಿ ಅವರು ಎಲ್ಲಿ ಹೋದರೂ ಒಂದು ಮಾತು ಹೇಳುತ್ತಿದ್ದರು ಅದೇನೆಂದರೆ ನಾನು ರಾಷ್ಟ್ರಪತಿ ಹುದ್ದೆ ಅಲಂಕರಿಸಿದಾಗ ಸಿಕ್ಕ ಸಂತೋಷಕಿಂತ ಶಿಕ್ಷಕ ವೃತ್ತಿಯಲ್ಲಿ ಅನುಭವಿಸಿದ ಸಂತೋಷ ಅತಿದೊಡ್ಡದು ಎನ್ನುತ್ತಿದ್ದರು ಕಾರಣ ಅದಕ್ಕಿರುವ ಮಹತ್ವ. ಆದ್ದರಿಂದ ಶಿಕ್ಷಕರು 
ಶಿಕ್ಷಕ ವೃತ್ತಿಗೆ ಘನತೆ ತರುವ ಕೆಲಸವನ್ನು ಮಾಡುವ ಮೂಲಕ ಇತರರಿಗೆ ಮಾದರಿಯಾಗಿ ಕಾಣಿಸಬೇಕು. ಶಿಕ್ಷಣತಜ್ಞರು ಶಿಕ್ಷಕರ ಆದರ್ಶ ಡಾ.ರಾಧಾಕೃಷ್ಣನ್ ಅವರ ಆದರ್ಶ ಮತ್ತು ತತ್ವಗಳನ್ನು ಪ್ರತಿಯೊಬ್ಬ ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಮೈಗೂಡಿಸಿಕೊಳ್ಳಬೇಕು ಶಿಕ್ಷಕರಾದವರು ಮಕ್ಕಳಲ್ಲಿರುವ ಕೀಳರಿಮೆಯನ್ನು ಹೊರದೂಡಿ ಅವರನ್ನು ಸಮಾಜದಲ್ಲಿ ಉತ್ತಮ ಪ್ರಜೆಗಳಾಗಿ ರೂಪಿಸುವುದರೊಂದಿಗೆ ಅವರಲ್ಲಿರುವ ಅಜ್ಞಾನದ ಅಂಧಃಕಾರವನ್ನು ಹೊರದೂಡಿ ಅವರನ್ನು ಸಮಾಜದ ಮುಖ್ಯವಾಹಿನಿಗೆ ತರುವಲ್ಲಿ ಪ್ರಮುಖ ಪಾತ್ರವಹಿಸಬೇಕು. ಪ್ರತಿಯೊಬ್ಬರ ಜೀವನದ ಏಳು-ಬೀಳಿಗೆ ಪ್ರತ್ಯಕ್ಷ ಅಥವಾ ಪರೋಕ್ಷವಾಗಿ ಶಿಕ್ಷಕ ಹೊಣೆಯಾಗುತ್ತಾರೆ ಎಂದು ಹೇಳಿದರು


ಈ ಸಂದರ್ಭದಲ್ಲಿ ನಿವೃತ್ತ ಪ್ರಾಂಶುಪಾಲ ಡಾ. ದೇವರಾಜು, ಹುಣಸೂರು ಹೊಂಗಿರಣ ಸೇವಾ ಟ್ರಸ್ಟ್ ಅಧ್ಯಕ್ಷ ಸುರೇಶ್ ವಿ ಮಧುವನ ಕಾಲೇಜು ಪ್ರಾಂಶುಪಾಲರಾದ ಪ್ರವೀಣ್, ಕಿರಣ್, ಮುಖ್ಯ ಶಿಕ್ಷಕಿ ದಿವ್ಯ, ಉಪನ್ಯಾಸಕರಾದ ಸ್ವಾಮಿಗೌಡ, ಮಹದೇವ್, ಮಂಜುನಾಥ್, ಪ್ರೀತು, ಪಲ್ಲವಿ, ಸೌಮ್ಯಶ್ರೀ, ಸಚಿತ್, ಚನ್ನಕೇಶವ,  ಸೇರಿದಂತೆ ಇತರರು ಇದ್ದರು