ಕರ್ನಾಟಕ ರಾಜ್ಯ ಪೌರಸೇವಾ ನೌಕರರ ಸಂಘದ ಮೈಸೂರು ಜಿಲ್ಲಾ ಘಟಕಕ್ಕೆ ನೂತನ ಪದಾದಿಕಾರಿಗಳ ನೇಮಕ
ಮೈಸೂರು ; ಕರ್ನಾಟಕ ರಾಜ್ಯ ಪೌರ ಸೇವಾ ನೌಕರರ ಸೇವಾ ಸಂಘದ ಮೈಸೂರು ಜಿಲ್ಲಾ ಘಟಕದ ಪದಾಧಿಕಾರಿಗಳ ಆಯ್ಕೆ ಕಾರ್ಯಕ್ರಮವು ಟಿ. ನರಸೀಪುರ ಪುರಸಭೆಯಲ್ಲಿ ರಾಜ್ಯಾಧ್ಯಕ್ಷೆ ಶೈಲಾ ಕೆ.ಡಿ. ಅವರ ಅಧ್ಯಕ್ಷತೆಯಲ್ಲಿ ನಡೆಯಿತು.ಸಭೆಯಲ್ಲಿ ಮೈಸೂರು ಜಿಲ್ಲಾ ಘಟಕದ ಅಧ್ಯಕ್ಷರಾಗಿ ಟಿ. ನರಸೀಪುರ ಪುರಸಭೆಯ ಮುಖ್ಯಾಧಿಕಾರಿ ಶ್ರೀನಿವಾಸ್ ಅವರನ್ನು ಆಯ್ಕೆ ಮಾಡಲಾಯಿತು. ಜಿಲ್ಲಾ ಕಾರ್ಯದರ್ಶಿಯಾಗಿ ಕಡಕೊಳ ಪಟ್ಟಣ ಪಂಚಾಯಿತಿಯ ಪ್ರಭಾರ ಆರೋಗ್ಯ ನಿರೀಕ್ಷಕ ಮಂಜುನಾಥ್ ಹಾಗೂ ಸಂಘಟನಾ ಕಾರ್ಯದರ್ಶಿಯಾಗಿ ಹೂಟಗಳ್ಳಿ ನಗರಸಭೆಯ ಹಿರಿಯ ಆರೋಗ್ಯ ನಿರೀಕ್ಷಕ ಶಿವಪ್ರಸಾದ್ ಅವರನ್ನು…