
ಮೈಸೂರು: ಹೆಚ್.ಐ.ವಿ, ಏಡ್ಸ್ ಅರಿವಿನ ಮಾಸಾಚರಣೆ-2026ರ ಅಂಗವಾಗಿ ಹೆಚ್.ಐ.ವಿ, ಏಡ್ಸ್ ಸೋಂಕು ಹರಡುವಿಕೆ, ತಡೆಗಟ್ಟುವಿಕೆ, ಪರೀಕ್ಷೆ ಮತ್ತು ಚಿಕಿತ್ಸೆಯ ಕುರಿತು ಸಾರ್ವಜನಿಕರಲ್ಲಿ ಅರಿವು ಮೂಡಿಸುವ ಸಲುವಾಗಿ ಬೈಕ್ ರ್ಯಾಲಿ ಹಾಗೂ ಜಾಗೃತಿ ಜಾಥಾ ಕಾರ್ಯಕ್ರಮವನ್ನು ಶನಿವಾರ ನಗರದಲ್ಲಿ ನಡೆಸಲಾಯಿತು.
ನಗರದ ಕೋಟೆ ಆಂಜನೇಯಸ್ವಾಮಿ ದೇವಸ್ಥಾನದ ಆವರಣದಿಂದ ಆರಂಭಗೊAಡ ಬೈಕ್ ರ್ಯಾಲಿಗೆ ಜಿಲ್ಲಾ ಆರ್.ಸಿ.ಹೆಚ್. ಅಧಿಕಾರಿ ಡಾ. ಮೊಹಮ್ಮದ್ ಸಿರಾಜ್ ಅಹಮದ್ ಹಸಿರು ನಿಶಾನೆ ತೋರುವ ಮೂಲಕ ಚಾಲನೆ ನೀಡಿದರು. ಬಳಿಕ ರ್ಯಾಲಿಯು ದೇವರಾಜ ಅರಸು ರಸ್ತೆ, ಜೆ.ಎಲ್.ಬಿ. ರಸ್ತೆ, ಇರ್ವಿನ್ ರಸ್ತೆ ಹಾಗೂ ಮಿನಿ ವಿಧಾನಸೌಧ ಮಾರ್ಗವಾಗಿ ಸಾಗಿ ನಜರ್ಬಾದ್ನ ಎನ್.ಪಿ.ಸಿ. ಆಸ್ಪತ್ರೆ ಆವರಣದಲ್ಲಿ ಮುಕ್ತಾಯಗೊಂಡಿತು.
ಕಾರ್ಯಕ್ರಮದಲ್ಲಿ ಜಿಲ್ಲಾ ಕ್ಷಯರೋಗ ನಿಯಂತ್ರಣಾಧಿಕಾರಿ ಹಾಗೂ ಜಿಲ್ಲಾ ಏಡ್ಸ್ ನಿಯಂತ್ರಣಾಧಿಕಾರಿ ಡಾ. ಬೃಂದಾ ಬಿ., ಜಿಲ್ಲಾ ಕುಟುಂಬ ಕಲ್ಯಾಣಾಧಿಕಾರಿ ಡಾ. ಗೋಪಿನಾಥ್, ಜಿಲ್ಲಾ ಕುಷ್ಟರೋಗ ನಿರ್ಮೂಲನಾಧಿಕಾರಿ ಡಾ. ನಾಗೇಶ್ ಆರಾಧ್ಯ ಹಾಗೂ ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಮುನೀಂದ್ರಮ್ಮ ಸೇರಿದಂತೆ ಆರೋಗ್ಯ ಇಲಾಖೆಯ ಸಿಬ್ಬಂದಿ ಹಾಗೂ ವಿವಿಧ ಸಂಘ-ಸAಸ್ಥೆಗಳ ಪ್ರತಿನಿಧಿಗಳು ಉಪಸ್ಥಿತರಿದ್ದರು.