Skip to main content

3Kaala News

ಸುಭಾಷಿತ 

ಜೀವನ ಅನ್ನುವ ಜೋಳಿಗೆಯಲ್ಲಿ ಭಗವಂತ ಎಲ್ಲರಿಗೂ ಸಂತೋಷದ ಬುತ್ತಿಯನ್ನು ಇಟ್ಟು ಕಳಿಸುತ್ತಾನೆ. ಆದರೆ ನಾವು ನಮ್ಮ ಜೋಳಿಗೆಯಲ್ಲಿ ಏನಿದೆ ಎಂದು ನೋಡಿ ಆನಂದಪಡುವುದನ್ನು ಬಿಟ್ಟು,ಬೇರೆಯವರ ಜೋಳಿಗೆಯಲ್ಲಿ ಏನಿದೆ ಎಂದು ತಿಳಿದುಕೊಳ್ಳುವ ಕೆಟ್ಟ ಕುತೂಹಲದಿಂದ ಸದಾ ದುಃಖಿಯಾಗಿರುತ್ತೇವೆ.

Current Weather Card
--°C
Mysore, IN
Loading...
☁️

Live Gold Silver Fuel News Ticker
Loading live rates...

ಪೌರಕಾರ್ಮಿಕರಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರ


ಮೈಸೂರು ; ಮಹಾನಗರ ಪಾಲಿಕೆಯ ಪೌರಕಾರ್ಮಿಕರ ಆರೋಗ್ಯ ಮತ್ತು ಕ್ಷೇಮಾಭಿವೃದ್ಧಿಯ ಉದ್ದೇಶದಿಂದ ಮಣಿಪಾಲ್ ಆಸ್ಪತ್ರೆಯ ವತಿಯಿಂದ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಭಾನುವಾರ ಆಯೋಜಿಸಲಾಗಿತ್ತು.
ಮೈಸೂರು ಮಹಾನಗರ ಪಾಲಿಕೆ ಆಯುಕ್ತೆ ಸವಿತಾ ಎಂ.ಕೆ. ಕಾರ್ಯಕ್ರಮವನ್ನು ಉದ್ಘಾಟಿಸಿದರು. ಬಳಿಕ ಮಾತನಾಡಿ, ನಗರದ ಸ್ವಚ್ಛತೆ ಮತ್ತು ಸಾರ್ವಜನಿಕ ಆರೋಗ್ಯ ಕಾಪಾಡುವಲ್ಲಿ ನಿರಂತರವಾಗಿ ಶ್ರಮಿಸುತ್ತಿರುವ ಪೌರಕಾರ್ಮಿಕರು ತಮ್ಮ ಆರೋಗ್ಯದ ಬಗ್ಗೆಯೂ ವಿಶೇಷ ಕಾಳಜಿ ವಹಿಸಬೇಕು ಎಂದು ತಿಳಿಸಿದರು.
ಶಿಬಿರದಲ್ಲಿ ಪೌರಕಾರ್ಮಿಕರ ಆರೋಗ್ಯ ತಪಾಸಣೆ ನಡೆಸಿ, ಅಗತ್ಯ ವೈದ್ಯಕೀಯ ಸಲಹೆ ಹಾಗೂ ಆರೋಗ್ಯದ ಕುರಿತು ಮಾರ್ಗದರ್ಶನ ನೀಡಲಾಯಿತು. ಕಾರ್ಯಕ್ರಮದಲ್ಲಿ ಮಣಿಪಾಲ್ ಆಸ್ಪತ್ರೆ ನಿರ್ದೇಶಕ ಡಾ. ಸಂದೀಪ್ ಪಾಟೀಲ್, ವಲಯ 7ರ ಸಹಾಯಕ ಆಯುಕ್ತೆ ರತ್ನಾಂಬಿಕೆ, ಪರಿಸರ ಅಭಿಯಂತರ ಚಿನ್ಮಯಿ, ಆರೋಗ್ಯ ನಿರೀಕ್ಷಕರಾದ ನಮ್ರತಾ ಮತ್ತು ದರ್ಶನ್ ಹಾಗೂ ಪಾಲಿಕೆಯ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.
ಮಣಿಪಾಲ್ ಆಸ್ಪತ್ರೆಯ ವೈದ್ಯರು ಹಾಗೂ ಸಿಬ್ಬಂದಿ ಪೌರಕಾರ್ಮಿಕರ ಆರೋಗ್ಯ ತಪಾಸಣೆಯನ್ನು ನಡೆಸಿದರು.