ಕಾರೊಂದು ಢಿಕ್ಕಿ ಹೊಡೆದ ಪರಿಣಾಮ ವಿದ್ಯಾರ್ಥಿ ಸಾವು, ರೊಚ್ಚಿಗೆದ್ದ ಜನರಿಂದ ಪ್ರತಿಭಟನೆ
ನಂಜನಗೂಡು ; ಕಾಲೇಜಿಗೆ ಪ್ರವೇಶಿಸುವ ಸಲುವಾಗಿ ರಸ್ತೆ ಬದಿಯಲ್ಲಿ ನಿಂತಿದ್ದ ಕಾಲೇಜು ವಿದ್ಯಾರ್ಥಿಗೆ ವೇಗವಾಗಿ ಬಂದ ಕಾರೊಂದು ಢಿಕ್ಕಿ ಹೊಡೆದ ಪರಿಣಾಮ ವಿದ್ಯಾರ್ಥಿ ಸ್ಥಳದಲ್ಲೇಯೇ ಮೃತಪಟ್ಟಿರುವ ಘಟನೆ ನಗರದ ಜೆಎಸ್‌ಎಸ್ ಪಾಲಿಟೆಕ್ನಿಕ್ ಮುಂಭಾಗ ನಡೆದಿದೆ. ಕಾಲೇಜಿನ ಮುಂಭಾಗ ಆಗಾಗ ಅಪಘಾತ ಸಂಭವಿಸಿದರೂ ಪೊಲೀಸರು ಯಾವುದೇ ಕ್ರಮಕ್ಕೆ ಮುಂದಾಗಿಲ್ಲ ಎಂದು ಆರೋಪಿಸಿ ನೂರಾರು ಮಂದಿ ವಿದ್ಯಾರ್ಥಿಗಳು ಸುಮಾರು ಎರಡು ಗಂಟೆಗಳ ಕಾಲ ಮೈಸೂರು ಊಟಿ ರಾಷ್ಟ್ರೀಯ ಹೆದ್ದಾರಿ ರಸ್ತೆ ತಡೆ ನಡೆಸುವ ಮೂಲಕ ಪ್ರತಿಭಟಿಸಿದರು. ನಂಜನಗೂಡಿನ ಜೆ…