Skip to main content

3Kaala News

ಸುಭಾಷಿತ 

ಜೀವನ ಅನ್ನುವ ಜೋಳಿಗೆಯಲ್ಲಿ ಭಗವಂತ ಎಲ್ಲರಿಗೂ ಸಂತೋಷದ ಬುತ್ತಿಯನ್ನು ಇಟ್ಟು ಕಳಿಸುತ್ತಾನೆ. ಆದರೆ ನಾವು ನಮ್ಮ ಜೋಳಿಗೆಯಲ್ಲಿ ಏನಿದೆ ಎಂದು ನೋಡಿ ಆನಂದಪಡುವುದನ್ನು ಬಿಟ್ಟು,ಬೇರೆಯವರ ಜೋಳಿಗೆಯಲ್ಲಿ ಏನಿದೆ ಎಂದು ತಿಳಿದುಕೊಳ್ಳುವ ಕೆಟ್ಟ ಕುತೂಹಲದಿಂದ ಸದಾ ದುಃಖಿಯಾಗಿರುತ್ತೇವೆ.

Current Weather Card
--°C
Mysore, IN
Loading...
☁️

Live Gold Silver Fuel News Ticker
Loading live rates...

ಕಾರೊಂದು ಢಿಕ್ಕಿ ಹೊಡೆದ ಪರಿಣಾಮ ವಿದ್ಯಾರ್ಥಿ ಸಾವು, ರೊಚ್ಚಿಗೆದ್ದ ಜನರಿಂದ ಪ್ರತಿಭಟನೆ

ನಂಜನಗೂಡು ;

ಕಾಲೇಜಿಗೆ ಪ್ರವೇಶಿಸುವ ಸಲುವಾಗಿ ರಸ್ತೆ ಬದಿಯಲ್ಲಿ ನಿಂತಿದ್ದ ಕಾಲೇಜು ವಿದ್ಯಾರ್ಥಿಗೆ ವೇಗವಾಗಿ ಬಂದ ಕಾರೊಂದು ಢಿಕ್ಕಿ ಹೊಡೆದ ಪರಿಣಾಮ ವಿದ್ಯಾರ್ಥಿ ಸ್ಥಳದಲ್ಲೇಯೇ ಮೃತಪಟ್ಟಿರುವ ಘಟನೆ ನಗರದ ಜೆಎಸ್‌ಎಸ್ ಪಾಲಿಟೆಕ್ನಿಕ್ ಮುಂಭಾಗ ನಡೆದಿದೆ.

  ಕಾಲೇಜಿನ ಮುಂಭಾಗ ಆಗಾಗ ಅಪಘಾತ ಸಂಭವಿಸಿದರೂ ಪೊಲೀಸರು ಯಾವುದೇ ಕ್ರಮಕ್ಕೆ ಮುಂದಾಗಿಲ್ಲ ಎಂದು ಆರೋಪಿಸಿ ನೂರಾರು ಮಂದಿ ವಿದ್ಯಾರ್ಥಿಗಳು ಸುಮಾರು ಎರಡು ಗಂಟೆಗಳ ಕಾಲ ಮೈಸೂರು ಊಟಿ ರಾಷ್ಟ್ರೀಯ ಹೆದ್ದಾರಿ ರಸ್ತೆ ತಡೆ ನಡೆಸುವ ಮೂಲಕ ಪ್ರತಿಭಟಿಸಿದರು.

   ನಂಜನಗೂಡಿನ ಜೆ ಎಸ್ ಎಸ್ ಪಾಲಿಟೆಕ್ನಿಕ್ ವಿಧ್ಯಾರ್ಥಿ ಪ್ರಿತೀಶ್ ಜೈನ್ (19) ಮೃತ ದುರ್ದೈವಿ, ಈತ ಚಾಮರಾಜನಗರದ ಧರ್ಮೇಂದ್ರ ಬಾಬು ಹಾಗೂ ಛಾಯಾ ಎಂಬುವರ ಪುತ್ರನಾಗಿದ್ದು, ಕಾಲೇಜಿನಲ್ಲಿ ಮೆಕಟ್ರಾನಿಕ್ಸ್ ವಿಭಾಗದಲ್ಲಿ ವ್ಯಾಸಂಗ ಪೂರ್ಣಗೊಳಿಸಿದ್ದ ಈತ ಉದ್ಯೋಗ ಸಂದರ್ಶನಕ್ಕಾಗಿ ಕಾಲೇಜಿನಿಂದ ಪ್ರಮಾಣ ಪತ್ರ ಪಡೆದುಕೊಳ್ಳಲು ಸೋಮವಾರ ಕಾಲೇಜಿಗೆ ಆಗಮಿಸಿದ್ದ ಎನ್ನಲಾಗಿದ್ದು ಮಧ್ಯಾಹ್ನದ ಊಟ ಮಾಡಿಕೊಂಡು ಪುನಃ ಕಾಲೇಜಿಗೆ ತೆರಳುವ ಸಲುವಾಗಿ ರಸ್ತೆ ದಾಟುವ ಉದ್ದೇಶದೊಂದಿಗೆ ರಸ್ತೆಯಂಚಿನಲ್ಲಿ ನಿಂತಿದ್ದ ವೇಳೆ ವೇಗವಾಗಿ ಬಂದ ಕಾರೊಂದು ಢಿಕ್ಕಿ ಹೊಡೆದಿದೆ ಇದರಿಂದ ತಲೆಗೆ ತೀವ್ರ ಪೆಟ್ಟು ಬಿದ್ದು ವಿದ್ಯಾರ್ಥಿ ಪ್ರೀತೇಶ್ ಜೈನ್ ಸ್ಥಳದಲ್ಲೇ ಸಾವಿಗೀಡಾಗಿದ್ದಾನೆ.

  ಅಪಘಾತ ಖಂಡಿಸಿ ಕಾಲೇಜಿನ ವಿದ್ಯಾರ್ಥಿಗಳ ಬೃಹತ್ ಪ್ರತಿಭಟನೆ.

 ಇನ್ನು ಕಾಲೇಜಿನ ವಿದ್ಯಾರ್ಥಿಯೋರ್ವ ರಸ್ತೆ ಅಪಘಾತದಿಂದಾಗಿ ಕಾಲೇಜಿನ ಮುಂಭಾಗದಲ್ಲೇ ಸಾವಿಗೀಡಾಗಿರುವುದರಿಂದ ಆಕ್ರೋಶಗೊಂಡ ಜೆಎಸ್‌ಎಸ್ ಪಾಲಿಟೆಕ್ನಿಕ್ ವಿದ್ಯಾರ್ಥಿಗಳು ತರಗತಿಯಿಂದ ಹೊರ ಬಂದು ಮೈಸೂರು- ನಂಜನಗೂಡು ಮುಖ್ಯರಸ್ತೆಯಲ್ಲಿ ವಾಹನ ಗಳನ್ನು ತಡೆಗಟ್ಟಿ ಮೃತ ವಿದ್ಯಾರ್ಥಿಗೆ ಹೆಚ್ಚಿನ ಪರಿಹಾರ ನೀಡಬೇಕು ಹಾಗೂ ಪಾಲಿಟೆಕ್ನಿಕ್ ಕಾಲೇಜು ಮುಂಭಾಗದಲ್ಲಿ ಬ್ಯಾರಿಕೇಡ್‌ಗಳನ್ನು ಅಳವಡಿಸಿ ವಾಹನಗಳ ವೇಗ ನಿಯಂತ್ರಿಸಬೇಕು ಎಂದು ಆಗ್ರಹಿಸಿ ರಸ್ತೆಯಲ್ಲಿಯೇ ಪ್ರತಿಭಟನೆ ಮುಂದುವರೆಸಿದರು.

   ಈ ವೇಳೆ ಸ್ಥಳಕ್ಕಾಗಮಿಸಿದ ಸಂಚಾರ ಠಾಣೆ ಪೊಲೀಸರು ಪ್ರತಿಭಟನಾ ನಿರತ ವಿದ್ಯಾರ್ಥಿಗಳ ಮನವೊಲಿಸಿ ರಸ್ತೆ ತಡೆ ತೆರವುಗೊಳಿಸಿ ವಾಹನಗಳ ಸಂಚಾರಕ್ಕೆ ಅನುವು ಮಾಡಿಕೊಟ್ಟರು. ಬಳಿಕ ಮೃತದೇಹವನ್ನು ನಗರದ ಸರ್ಕಾರಿ ಆಸ್ಪತ್ರೆಯ ಶವಾಗಾರಕ್ಕೆ ರವಾನಿಸಲಾಯಿತು. ಸುಮಾರು 2 ಗಂಟೆಗಳಿಗಿಂತಲೂ ಹೆಚ್ಚಿನ ಕಾಲ ಹೆದ್ದಾರಿ ತಡೆ ಆಗಿದ್ದರಿಂದಾಗಿ ವಾಹನಗಳ ದಟ್ಟಣೆ ಅಧಿಕವಾಗಿ ಸಂಚಾರ ವ್ಯವಸ್ಥೆ ಅಸ್ತವ್ಯಸ್ತವಾಗಿತ್ತು.

  ಈ ಸಂಬಂಧ ನಂಜನಗೂಡು ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದು ಅಪಘಾತಕ್ಕೆ ಕಾರಣವಾಗಿರುವ ವಾಹನವನ್ನು ವಶಕ್ಕೆ ಪಡೆದು ನಾಪತ್ತೆಯಾಗಿರುವ ಕಾರಿನ ಚಾಲಕನ ಪತ್ತೆಗೆ ಕ್ರಮ ಕೈಗೊಂಡಿದ್ದಾರೆ