Skip to main content

3Kaala News

ಸುಭಾಷಿತ 

ಪಕ್ಕದಲ್ಲಿರುವವನ ತಟ್ಟೆಯಲ್ಲಿ ಏನಿದೆ ಅಂತ ಯಾವತ್ತೂ ಇಣುಕಿ ನೋಡಬೇಡ. ಕಾರಣ ಅಲ್ಲಿ ಜಾಸ್ತಿಯಿದ್ದರೆ, ನಿನಗೆ ಸಂಕಟವಾಗುತ್ತದೆ.ಅಲ್ಲಿ ಕಡಿಮೆ ಇದ್ದರೆ, ನಿನಗೆ ಅಹಂಕಾರ ಬರುತ್ತದೆ.ಎರಡೂ ಒಳ್ಳೆಯದಲ್ಲ.ನಮ್ಮ ತಟ್ಟೆಯನ್ನು ನಾವು ನೋಡಿಕೊಂಡಿದ್ದರೆ, ಸಿಗುವ ಸಂತೋಷವೇ ಬೇರೆ

Current Weather Card
--°C
Mysore, IN
Loading...
☁️

Live Gold Silver Fuel News Ticker
Loading live rates...

ಬೋನಿಗೆ ಬಿದ್ದು ಸೆರೆಯಾದ ಹೆಣ್ಣು ಚಿರತೆ; ನಿಟ್ಟಿಸಿರು ಬಿಟ್ಟ ಗ್ರಾಮಸ್ಥರು

ನಂಜನಗೂಡು; ಅರಣ್ಯ ಇಲಾಖೆಯವರು ಇಟ್ಟಿದ್ದ ಬೋನಿಗೆ ಹೆಣ್ಣು ಚಿರತೆಯೊಂದು ಬಿದ್ದು ಸೆರೆಯಾದ ಘಟನೆ ನಂಜನಗೂಡು ತಾಲ್ಲೂಕಿನ ಚುಂಚನಹಳ್ಳಿ ಗ್ರಾಮದ ಬಳಿ ನಡೆದಿದೆ.ಚುಂಚನಹಳ್ಳಿ ಸುತ್ತಮುತ್ತ ಹಲವು ದಿನಗಳಿಂದ ಚಿರತೆಗಳ ಹಾವಳಿ ಹೆಚ್ಚಾಗಿತ್ತು. ಚಿರತೆಗಳ ಓಡಾಟದಿಂದ ಗ್ರಾಮಸ್ಥರಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿತ್ತು.ಚುಂಚನಹಳ್ಳಿ ಮಾತ್ರವಲ್ಲದೆ ಕೋಣನೂರು, ಹನುಮನಪುರ, ಪಿ.ಮರಹಳ್ಳಿ ಹಾಗೂ ದಾಸನೂರು ಗ್ರಾಮಗಳಲ್ಲೂ ಚಿರತೆಗಳ ಹಾವಳಿ ಕಂಡುಬAದಿತ್ತು.ಇತ್ತೀಚೆಗೆ ಜಾನುವಾರುಗಳ ಮೇಲೆ ಚಿರತೆಗಳು ದಾಳಿ ನಡೆಸಿದ್ದ ಹಿನ್ನೆಲೆಯಲ್ಲಿ ರೈತರಲ್ಲಿ ಭೀತಿ ಹೆಚ್ಚಾಗಿತ್ತು.ಈ ಹಿನ್ನೆಲೆಯಲ್ಲಿ ಅರಣ್ಯ ಇಲಾಖೆ ಬೋನು ಇರಿಸಿ ಚಿರತೆಯ ಸೆರೆಗೆ ಕಾರ್ಯಾಚರಣೆ…

Read More

ಬರಪಿಡಿತ ಪ್ರದೇಶದ ರೈತರ ಸಾಲ ಮನ್ನಾಕ್ಕೆ  ಆಗ್ರಹಿಸಿ ರಾಷ್ಟ್ರೀಯ ಹೆದ್ದಾರಿ ತಡೆದು ಬೃಹತ್ ಪ್ರತಿಭಟನೆ

 ನಂಜನಗೂಡು :  ರಾಜ್ಯದಲ್ಲಿ ತೀವ್ರ ಬರ ಪೀಡಿತ ಪ್ರದೇಶಗಳೆಂದು ಘೋಷಣೆಯಾಗಿರುವ ವ್ಯಾಪ್ತಿಯ ರೈತರ ಕೃಷಿ ಪತ್ತಿನ ಸಹಕಾರ ಸಂಘದ ಸಾಲವನ್ನು ಸಂಪೂರ್ಣವಾಗಿ ರಾಜ್ಯ ಸರ್ಕಾರ ಮನ್ನಾ ಮಾಡಬೇಕು, ಹಾಗೂ ಹುಲ್ಲಹಳ್ಳಿ, ರಾಂಪುರ, ಕಬಿನಿ ಬಲದಂಡೆ ನಾಲೆಗಳಿಗೆ ನೀರು ಹರಿಸಬೇಕು ಎಂದು ಆಗ್ರಹಿಸಿ ರಾಜ್ಯ ರೈತ ಸಂಘಟನೆಗಳ ಒಕ್ಕೂಟದ ವತಿಯಿಂದ ರಾಷ್ಟ್ರೀಯ ಹೆದ್ದಾರಿ ತಡೆದು ಬೃಹತ್ ಪ್ರತಿಭಟನೆ ನಡೆಸಲಾಯಿತು.    ನಗರದ ಹುಲ್ಲಹಳ್ಳಿ ವೃತ್ತದಲ್ಲಿ ಜಮಾವಣೆಗೊಂಡ ರಾಜ್ಯ ರೈತ ಸಂಘಟನೆಗಳ ಒಕ್ಕೂಟದ ಪದಾಧಿಕಾರಿಗಳು, ಮೈಸೂರು ಊಟಿ ರಾಷ್ಟ್ರೀಯ ಹೆದ್ದಾರಿ…

Read More

ರಾಜ್ಯ ಒಕ್ಕಲಿಗರ ಸಂಘದ ರಾಜ್ಯ ನಿರ್ದೇಶಕ ಸ್ಥಾನಕ್ಕೆ ಆಕಾಂಕ್ಷಿ ; ಪಿ.ಪ್ರಶಾಂತ್ ಗೌಡ

ಪಿರಿಯಾಪಟ್ಟಣ : ರಾಜ್ಯ ಒಕ್ಕಲಿಗರ ಸಂಘದ ರಾಜ್ಯ ನಿರ್ದೇಶಕ ಸ್ಥಾನಕ್ಕೆ ಸ್ಪರ್ಧಿಸಿರುವ ಮೈಸೂರಿನ ಮಹಾ ನಗರ ಪಾಲಿಕೆ ಮಾಜಿ ಸದಸ್ಯ ಪಿ.ಪ್ರಶಾಂತ್ ಗೌಡ ರವರು ಪಟ್ಟಣದ ಶ್ರೀ ಮಸಣಿಕಮ್ಮ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿ ಮತಯಾಚನೆ ಪ್ರಾರಂಭಿಸಿದರು. ಮತಯಾಚಿಸಿ ಮಾತನಾಡಿದ ಅವರು ಪಿರಿಯಾಪಟ್ಟಣ ತಾಲ್ಲೂಕು ನನ್ನ ಹುಟ್ಟುರಾಗಿದ್ದು, ನನಗೆ ಸಮುದಾಯದ ಸಂಘಟನೆ ಮಾಡಲು ಅವಕಾಶ ಕಲ್ಪಿಸಿ ರಾಜಕೀಯ ಕ್ಷೇತ್ರದಲ್ಲಿ ಸೇವೆ ಸಲ್ಲಿಸಲು ನೆಲೆಯಾದ ಸ್ಥಳವಾಗಿದೆ. ನಾನು ತಾಲ್ಲೂಕು ಹಾಗೂ ಜಿಲ್ಲಾ ಒಕ್ಕಲಿಗರ ಸಂಘದಲ್ಲಿ ವಿವಿಧ ಹುದ್ದೆಗಳನ್ನು ನಿರ್ವಹಿಸಿ ಸಮುದಾಯದ…

Read More

ಮಗಳು ಎಂಬಿಬಿಎಸ್‌ನಲ್ಲಿ ಉಚಿತ ಸೀಟ್ ಪಡೆದಕ್ಕೆ ಪುಸ್ತಕಗಳನ್ನು ವಿತರಿಸಿದ ಪೋಷಕರು

ಕೆ.ಆರ್.ನಗರ ;ಮಕ್ಕಳು ಉನ್ನತವ್ಯಾಸಂಗ ಪಡೆದರೆ ಉತ್ತಮ ರ‍್ಯಾಂಕ್ ಗಳಿಸಿದರೆ ಔತಣಕೂಟ ಮಾಡಿ ಕುಣಿದು ಕುಪ್ಪಳಿಸುವುದು ಸಹಜ. ಆದರೆ ಇಲ್ಲೊಬ್ಬ ಪೋಷಕರು ತಮ್ಮ ಮಗಳು ಎಂಬಿಬಿಎಸ್‌ನಲ್ಲಿ ಉಚಿತ ಸೀಟ್ ಪಡೆದ ಸಂತಸದಲ್ಲಿ ಇಲ್ಲಿನ ಕೇಂದ್ರ ಗ್ರಂಥಾಲಯಕ್ಕೆ ಸ್ಪರ್ಧಾತ್ಮಕ ಪರೀಕ್ಷೆ ಎದುರಿಸುವ ಪುಸ್ತಕಗಳನ್ನು ಉಚಿತವಾಗಿ ವಿತರಣೆ ಮಾಡುವಮೂಲಕ ಜ್ಞಾನದಿಂದ ಜ್ಞಾನ ಹಂಚುವ ಕೆಲಸ ಮಾಡಿರುವುದು ಎಲ್ಲರ ಮೆಚ್ಚುಗೆಗೆ ಪಾತ್ರವಾಗಿದೆ.ಪಟ್ಟಣದ ವಿನಾಯಕ ಬಡಾವಣೆಯ ಜಾ.ದಳ ಯುವಮುಖಂಡ ರಶ್ಮಿಹರ್ಷಿತ್‌ರವರ ಪುತ್ರಿ ಭಾಂದವ್ಯ ಪ್ರಸಕ್ತಸಾಲಿನಲ್ಲಿ ಬೆಂಗಳೂರಿನ ಈಸ್ಟ್ಪಾಯಿಂಟ್ ಮೆಡಿಕಲ್ ಕಾಲೇಜಿನಲ್ಲಿ ಎಂಬಿಬಿಎಸ್‌ನಲ್ಲಿ ಗರ‍್ನಮೆಂಟ್ ಸೀಟ್…

Read More

ಪ್ರತಾಪ್ ಸಿಂಹ ವಿರುದ್ಧ ದಲಿತ ಸಂಘಟನೆಗಳ ಪ್ರತಿಭಟನೆ

ಎಚ್. ಡಿ.ಕೋಟೆ :  ನೀಲಿ ಶಾಲು ಬಗ್ಗೆ ಹಗುರವಾಗಿ ಮಾತನಾಡುವ ಮೂಲಕ ದಲಿತ ಸಂಘರ್ಷ ಸಮಿತಿ ಹೋರಾಟ ಪ್ರಶ್ನಿಸಿದ್ದಾರೆ ಎಂದು ಆರೋಪಿಸಿ ಬಿಜೆಪಿ ಮಾಜಿ ಸಂಸದ ಪ್ರತಾಪ್ ಸಿಂಹ ವಿರುದ್ಧ ತಾಲೂಕಿನ ಹ್ಯಾಂಡ್ ಪೋಸ್ಟ್ ಸಮೀಪ ಮಾನವ ಸರಪಳಿ ನಿರ್ಮಿಸಿ ದಲಿತ ಪರ ಸಂಘಟನೆಗಳ ಒಕ್ಕೂಟ ಪ್ರತಿಭಟನೆ ನಡೆಸಿತು.  ಹ್ಯಾಂಡ್ ಪೋಸ್ಟ್ ಸರ್ಕಲ್ ಮುಂದೆ ಜಮಾಯಿಸಿದ ದಲಿತ ಪರ ಸಂಘಟನೆಗಳ ಸದಸ್ಯರು ಪ್ರತಾಪ್ ಸಿಂಹ ವಿರುದ್ಧ ಘೋಷಣೆಗಳನ್ನು ಕೂಗಿದರು. ಪ್ರತಾಪ್ ಸಿಂಹ ಭಾವಚಿತ್ರಕ್ಕೆ ಚಪ್ಪಲಿ ಹಾರ ಹಾಕಿ…

Read More

ಇನ್ಸ್ಪೆಕ್ಟರ್ ಧನಂಜಯ್ ವಿರುದ್ಧ ಎಸ್ಪಿಗೆ ದೂರು ನೀಡಿದ ಸ್ನೇಹಮಯಿ ಕೃಷ್ಣ

ಮೈಸೂರು: ಜಿಲ್ಲೆಯ ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆ ಪ್ರಕರಣದಲ್ಲಿ ಯುವಕರಿಗೆ ಧಮ್ಕಿ ಹಾಕಿದ ಆರೋಪ ಎದುರಿಸುತ್ತಿರುವ ಪೊಲೀಸ್ ಇನ್ಸ್ಪೆಕ್ಟರ್ ಧನಂಜಯ್ ವಿರುದ್ಧ ಸಾಮಾಜಿಕ ಹೋರಾಟಗಾರ ಸ್ನೇಹಮಯಿ ಕೃಷ್ಣ ಅವರು ಪೊಲೀಸ್ ವರಿಷ್ಠಾಧಿಕಾರಿಗೆ ದೂರು ಸಲ್ಲಿಸಿದ್ದಾರೆ.ತಮ್ಮ ವರ್ಗಾವಣೆ ಆದೇಶವನ್ನು ರದ್ದುಪಡಿಸಲು ಧನಂಜಯ್ ಅವರು ಪ್ರಭಾವ ಬಳಸಿದ್ದಾರೆ. ವರ್ಗಾವಣೆ ಆದೇಶವನ್ನು ಒಂದೇ ದಿನದಲ್ಲಿ ರದ್ದುಗೊಳಿಸಿ, ಅದೇ ಠಾಣೆಯಲ್ಲಿ ಮುಂದುವರೆದಿರುವ ಬಗ್ಗೆ ಆರೋಪಿಸಲಾಗಿದೆ. ಅಲ್ಲದೇ ಇನ್ಸ್ಪೆಕ್ಟರ್ ಧನಂಜಯ್ ಸಮಾಜದಲ್ಲಿ ಅಶಾಂತಿಗೆ ಕಾರಣರಾಗಿದ್ದಾರೆ ಮತ್ತು ಧರ್ಮಗಳ ನಡುವೆ ದ್ವೇಷ ಮೂಡಿಸುವಂತೆ ಮಾತನಾಡಿದ್ದಾರೆ. ಹಾಗಾಗಿ…

Read More

ಸಂಭ್ರಮದಿ0ದ ನಡೆದ ವೀರಭದ್ರಸ್ವಾಮಿ ಜಯಂತೋತ್ಸವ

ಮೈಸೂರು; ಜಿಲ್ಲೆಯ ನಂಜನಗೂಡು ತಾಲೂಕಿನ ಸುತ್ತೂರು ಶ್ರೀ ಕ್ಷೇತ್ರದಲ್ಲಿ ಮಂಗಳವಾರ ಶ್ರೀ ವೀರಭದ್ರಸ್ವಾಮಿ ಜಯಂತೋತ್ಸವವನ್ಮ್ನ ಸಂಭ್ರಮದಿAದ ಆಚರಿಸಲಾಯಿತು.ಸುತ್ತೂರು ಶ್ರೀಕ್ಷೇತ್ರದಲ್ಲಿರುವ ಶ್ರೀ ವೀರಭದ್ರಸ್ವಾಮಿ ದೇವಸ್ಥಾನ (ಗುಡ್ಡ) ಹಾಗೂ ಶ್ರೀಮಠದ ಆವರಣದಲ್ಲಿರುವ ಶ್ರೀ ವೀರಭದ್ರಸ್ವಾಮಿ ದೇವಸ್ಥಾನಗಳಲ್ಲಿ ಮಠದ ಪೀಠಾಧಿಪತಿಗಳಾದ ಶ್ರೀ ಶಿವರಾತ್ರಿ ದೇಶಿಕೇಂದ್ರ ಮಹಾಸ್ವಾಮಿಗಳವರ ದಿವ್ಯಸಾನ್ನಿಧ್ಯದಲ್ಲಿ ವಿಶೇಷ ಪೂಜೆ ಸಲ್ಲಿಸುವ ಮೂಲಕ ಆಚರಿಸಲಾಯಿತು.ಭದ್ರಕಾಳಿ ಸಮೇತ ಶ್ರೀ ವೀರಭದ್ರಶ್ವರಸ್ವಾಮಿಗೆ ಪ್ರಾಕಾರೋತ್ಸವ, ವಿಶೇಷ ಅಲಂಕಾರ, ರಾಜೋಪಚಾರ, ಮಹಾಮಂಗಳಾರತಿ, ವೀರಗಾಸೆ ಕುಣಿತ ಹಾಗೂ ಮಂಗಳವಾದ್ಯಗಳೊAದಿಗೆ ಜಯಂತೊತ್ಸವದ ಆಚರಣೆಯನ್ನು ನೆರವೇರಿಸಲಾಯಿತು. ಸುತ್ತಮುತ್ತಲಿನ ಗ್ರಾಮಸ್ಥರು, ಭಕ್ತಾದಿಗಳು ಸಹಸ್ರಾರು…

Read More

ವೇಗವಾಗಿ ಬದಲಾಗುತ್ತಿರುವ ಜಗತ್ತಿನಲ್ಲಿ ಕೇವಲ ಶೈಕ್ಷಣಿಕ ಅರ್ಹತೆ ಹೊಂದಿರುವುದು ಸಾಕಾಗುವುದಿಲ್ಲ; ಪವನೇಶ್ ಕುಮಾರ್ ಶರ್ಮ

ಮೈಸೂರು: ಇಂದಿನ ವೇಗವಾಗಿ ಬದಲಾಗುತ್ತಿರುವ ಜಗತ್ತಿನಲ್ಲಿ ಕೇವಲ ಶೈಕ್ಷಣಿಕ ಅರ್ಹತೆ ಹೊಂದಿರುವುದು ಸಾಕಾಗುವುದಿಲ್ಲ ಎಂದು ಕೇಂದ್ರ ಗ್ರಾಮೀಣಾಭಿವೃದ್ಧಿ ಸಚಿವಾಲಯದ ಜಂಟಿ ಕಾರ್ಯದರ್ಶಿ ಪವನೇಶ್ ಕುಮಾರ್ ಶರ್ಮ ಹೇಳಿದರು.ಮೈಸೂರಿನ ರುಡ್‌ಸೆಟ್ ಸಂಸ್ಥೆಯಲ್ಲಿ ಎನ್.ಆರ್.ಎಲ್.ಎಂ. ಯೋಜನೆಯಡಿಯಲ್ಲಿ ಕಂಪ್ಯೂಟರ್ ಹಾರ್ಡ್ವೇರ್ ಮತ್ತು ನೆಟ್‌ವರ್ಕಿಂಗ್ – 45 ದಿನಗಳ ಕಾಲಾವಧಿಯ ತರಬೇತಿ ಮತ್ತು ಅಣಬೆ ಬೇಸಾಯ – 10 ದಿನಗಳ ಕಾಲಾವಧಿಯ ತರಬೇತಿಗಳನ್ನು ಆಯೋಜಿಸಿದ್ದು, ಸಂಸ್ಥೆಗೆ ಆಗಮಿಸಿದ ಪವನೇಶ್ ಕುಮಾರ್ ಶರ್ಮ, ತರಬೇತಿ ಕಾರ್ಯಚಟುವಟಿಕಗಳನ್ನು ವೀಕ್ಷೀಸಿದರು ಮತ್ತು ಶಿಬಿರಾರ್ಥಿಗಳೊಂದಿಗೆ ಸಂವಾದ ಕಾರ್ಯಕ್ರಮ ನಡೆಸಿ…

Read More

ವಿದ್ಯಾರ್ಥಿಗಳಿಗೆ ರಕ್ತದ ಗುಂಪು ಪರೀಕ್ಷೆ ಮತ್ತು ರಕ್ತದಾನ ಶಿಬಿರ

ಮೈಸೂರು; ನಗರದ ಕೃಷ್ಣಮೂರ್ತಿಪುರಂನಲ್ಲಿರುವ ಶಾರದಾ ವಿಲಾಸ್ ಕಾಲೇಜಿನಲ್ಲಿ ವಿದ್ಯಾರ್ಥಿಗಳಿಗೆ ರಕ್ತದ ಗುಂಪು ಪರೀಕ್ಷೆ ಮತ್ತು ವಿದ್ಯಾರ್ಥಿಗಳಿಂದ ಸ್ವಯಂ ಪ್ರೇರಿತ ರಕ್ತದಾನ ಶಿಬಿರವನ್ನು ಮಂಗಳವಾರ ನಡೆಸಲಾಯಿತು.ಯೂತ್ ರೆಡ್ ಕ್ರಾಸ್ ಘಟಕ, ಎನ್‌ಸಿಸಿ ಆರ್ಮಿ ವಿಂಗ್ ಮತ್ತು ಐಕ್ಯೂಎಸಿ ಇವರ ವತಿಯಿಂದಲಯನ್ಸ್ ಬ್ಲಡ್ ಸೆಂಟರ್, ಜೀವದಾರ, ಮೈಸೂರು ಇವರ ಸಹಯೋಗದೊಂದಿಗೆ ಆಯೋಜಿಸಲಾಗಿದ್ದ ಈ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಲ್ಲಿ ರಕ್ತದಾನದ ಮಹತ್ವದ ಕುರಿತು ಜಾಗೃತಿ ಮೂಡಿಸಲಾಯಿತು. ಹಾಗೂ ವಿದ್ಯಾರ್ಥಿಗಳು ಮತ್ತು ಸ್ವಯಂಸೇವಕರಿಗೆ ರಕ್ತದ ಗುಂಪು ಪರೀಕ್ಷೆ ಮತ್ತು ರಕ್ತದಾನ ಮಾಡಲು ಅವಕಾಶ ಕಲ್ಪಿಸಲಾಯಿತು….

Read More

ಜಿಲ್ಲಾ ಮಟ್ಟದ ಪಾತ್ರಾಭಿನಯ ಹಾಗೂ ಜನಪದ ನೃತ್ಯ ಸ್ಪರ್ಧೆಗೆ ಚಾಲನೆ

ಮೈಸೂರು: ಶಾಲಾ ಶಿಕ್ಷಣ ಮತ್ತು ಸುರಕ್ಷಿತ ಇಲಾಖೆ, ರಾಜ್ಯ ಶಿಕ್ಷಣ ಸಂಶೋಧನೆ ಮತ್ತು ತರಬೇತಿ ಇಲಾಖೆ ಬೆಂಗಳೂರು, ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆ ಮೈಸೂರು ಹಾಗೂ ರಾಷ್ಟಿçÃಯ ಜನಸಂಖ್ಯೆ ಶಿಕ್ಷಣ ಯೋಜನೆ ಇವರ ಸಂಯುಕ್ತ ಆಶ್ರಯದಲ್ಲಿ ಟಿgಡಿಜ ನಜರ್ ಬಾದ್‌ನ ವಸಂತ್ ಮಹಲ್‌ನಲ್ಲಿರುವ ಡಯಟ್ ಆವರಣದಲ್ಲಿ ಜಿಲ್ಲಾ ಮಟ್ಟದ ಪಾತ್ರಾಭಿನಯ ಹಾಗೂ ಜನಪದ ನೃತ್ಯ ಸ್ಪರ್ಧಾ ಕಾರ್ಯಕ್ರಮ ನಡೆಯಿತು.ಕಾರ್ಯಕ್ರಮವನ್ನು ರಂಗಕರ್ಮಿ ಜನಾರ್ಧನ್ (ಜನ್ನಿ) ಉದ್ಘಾಟಿಸಿದರು. ಬಳಿಕ ಮಾತನಾಡಿ, ಸ್ಪರ್ಧೆಗಳು ವಿದ್ಯಾರ್ಥಿಗಳಲ್ಲಿ ಸೃಜನಶೀಲತೆ, ಆತ್ಮವಿಶ್ವಾಸ ಹಾಗೂ ಸಾಂಸ್ಕöÈತಿಕ…

Read More