
ಮೈಸೂರು: ಶಾಲಾ ಶಿಕ್ಷಣ ಮತ್ತು ಸುರಕ್ಷಿತ ಇಲಾಖೆ, ರಾಜ್ಯ ಶಿಕ್ಷಣ ಸಂಶೋಧನೆ ಮತ್ತು ತರಬೇತಿ ಇಲಾಖೆ ಬೆಂಗಳೂರು, ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆ ಮೈಸೂರು ಹಾಗೂ ರಾಷ್ಟಿçÃಯ ಜನಸಂಖ್ಯೆ ಶಿಕ್ಷಣ ಯೋಜನೆ ಇವರ ಸಂಯುಕ್ತ ಆಶ್ರಯದಲ್ಲಿ ಟಿgಡಿಜ ನಜರ್ ಬಾದ್ನ ವಸಂತ್ ಮಹಲ್ನಲ್ಲಿರುವ ಡಯಟ್ ಆವರಣದಲ್ಲಿ ಜಿಲ್ಲಾ ಮಟ್ಟದ ಪಾತ್ರಾಭಿನಯ ಹಾಗೂ ಜನಪದ ನೃತ್ಯ ಸ್ಪರ್ಧಾ ಕಾರ್ಯಕ್ರಮ ನಡೆಯಿತು.
ಕಾರ್ಯಕ್ರಮವನ್ನು ರಂಗಕರ್ಮಿ ಜನಾರ್ಧನ್ (ಜನ್ನಿ) ಉದ್ಘಾಟಿಸಿದರು. ಬಳಿಕ ಮಾತನಾಡಿ, ಸ್ಪರ್ಧೆಗಳು ವಿದ್ಯಾರ್ಥಿಗಳಲ್ಲಿ ಸೃಜನಶೀಲತೆ, ಆತ್ಮವಿಶ್ವಾಸ ಹಾಗೂ ಸಾಂಸ್ಕöÈತಿಕ ಮೌಲ್ಯಗಳ ಬೆಳವಣಿಗೆಗೆ ಸಹಕಾರಿಯಾಗಿವೆ ಎಂದು ಹೇಳಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಡಯಟ್ ಪ್ರಾಂಶುಪಾಲರು ಹಾಗೂ ಶಾಲಾ ಶಿಕ್ಷಣ ಇಲಾಖೆ ಮೈಸೂರು ಉಪ ನಿರ್ದೇಶಕ ಡಿ. ಉದಯ್ ಕುಮಾರ್ ವಹಿಸಿದ್ದರು.
ವಿಶೇಷ ಅತಿಥಿಯಾಗಿ ಬಹುಮುಖ ಪ್ರತಿಭೆ ದಿಯಾ ಅರಸ್ ಭಾಗವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಸಿಟಿಇ ಪ್ರಭಾರ ಪ್ರಾಂಶುಪಾಲ ಲಕ್ಷಿ÷್ಮಪತಿ, ಮೈಸೂರು ಉತ್ತರ ಕ್ಷೇತ್ರ ಶಿಕ್ಷಣಾಧಿಕಾರಿ ಸುರೇಶ್, ಮೈಸೂರು ದಕ್ಷಿಣ ಕ್ಷೇತ್ರ ಶಿಕ್ಷಣಾಧಿಕಾರಿ ಕೃಷ್ಣ, ಮೈಸೂರು ಗ್ರಾಮಾಂತರ ಕ್ಷೇತ್ರ ಶಿಕ್ಷಣಾಧಿಕಾರಿ ಅನಂತರಾಜು, ಸಮಾಜಸೇವಕ ಬನ್ನೂರು ಮಹೇಂದ್ರಸಿAಗ್ ಕಾಳಪ್ಪ ಹಾಗೂ ನೋಡಲ್ ಅಧಿಕಾರಿ ಚೆನ್ನಪ್ಪ ಎಚ್. ಉಪಸ್ಥಿತರಿದ್ದರು.
ಈ ಸಂದರ್ಭದಲ್ಲಿ ಡಯಟ್ನ ಹಿರಿಯ ಉಪನ್ಯಾಸಕರು, ಉಪನ್ಯಾಸಕರು, ಬೋಧಕರು, ಬೋಧಕೇತರ ಸಿಬ್ಬಂದಿ ವರ್ಗ ಹಾಗೂ ಜಿಲ್ಲೆಯ ವಿವಿಧ ಶಾಲೆಗಳ ಶಿಕ್ಷಕರು ಮತ್ತು ವಿದ್ಯಾರ್ಥಿಗಳು ಭಾಗವಹಿಸಿದರು.